AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್

Deepika Padukone remuneration: ದೀಪಿಕಾ ಪಡುಕೋಣೆ ಅವರು ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಿದ್ದಾರೆ. ಹಲವು ದಿನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರು ದೊಡ್ಡ ಸಂಭಾವನೆ ಪಡೆದಿದ್ದಾರೆ.

‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್
ದೀಪಿಕಾ
ರಾಜೇಶ್ ದುಗ್ಗುಮನೆ
|

Updated on: Mar 08, 2023 | 6:30 AM

Share

ದೀಪಿಕಾ ಪಡುಕೋಣೆ (Deepika Padukone) ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹತ್ತು ಹಲವು ಪ್ರಾಜೆಕ್ಟ್​ಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ದೀಪಿಕಾ ಕೈಯಲ್ಲಿ ಕೆಲವು ಸಿನಿಮಾಗಳಿವೆ. ಈ ವರ್ಷ ರಿಲೀಸ್ ಆದ ‘ಪಠಾಣ್​’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈ ಸಿನಿಮಾ ಸಾವಿರಾರು ಕೋಟಿ ಬಿಸ್ನೆಸ್ ಮಾಡಿ ಮುನ್ನುಗ್ಗುತ್ತಿದೆ. ದೀಪಿಕಾ ನಟಿಸುತ್ತಿರುವ ಸಿನಿಮಾಗಳ ಪೈಕಿ ‘ಪ್ರಾಜೆಕ್ಟ್​ ಕೆ’ ಚಿತ್ರ (Project K Movie) ಬಹಳ ಮುಖ್ಯ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಪ್ರಭಾಸ್​ಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ದೀಪಿಕಾ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ.

ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಾಗಿ ನಟಿಸುತ್ತಿರುವ ಮೊದಲ ಸಿನಿಮಾ ಎಂಬ ಕಾರಣಕ್ಕೆ  ‘ಪ್ರಾಜೆಕ್ಟ್​ ಕೆ’ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಖ್ಯಾತ ನಿರ್ದೇಶಕ ನಾಗ್​ ಅಶ್ವಿನ್ ಅವರು ಇದಕ್ಕೆ ಆ್ಯಕ್ಷನ್ ಕಟ್​ ಹೇಳುತ್ತಿದ್ದಾರೆ. ಸೈನ್ಸ್​ ಫಿಕ್ಷನ್​ ಕಥೆಯನ್ನು ಸಿನಿಮಾ ಹೊಂದಿದೆ. ಈ ಸಿನಿಮಾಗೆ ಇನ್ನೂ ಅಧಿಕೃತವಾಗಿ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾ 2024ರ ಜನವರಿ 12ರಲ್ಲಿ ತೆರೆಗೆ ಬರಲಿದೆ. ಈಗ ದೀಪಿಕಾ ಸಂಭಾವನೆ ವಿಚಾರ ರಿವೀಲ್ ಆಗಿದೆ.

ಇದನ್ನೂ ಓದಿ
Image
‘ಪ್ರಾಜೆಕ್ಟ್​ ಕೆ’ ಕಥೆ ರಿವೀಲ್ ಮಾಡಿದ ನಿರ್ಮಾಪಕ; ವಿಷ್ಣುವಿನ ಆಧುನಿಕ ಅವತಾರದಲ್ಲಿ ಬರಲಿದ್ದಾರೆ ಪ್ರಭಾಸ್
Image
ಶಿವರಾತ್ರಿ ದಿನ ‘ಪ್ರಾಜೆಕ್ಟ್​ ಕೆ’ ರಿಲೀಸ್ ದಿನಾಂಕ ರಿವೀಲ್​; ಪರ್ಫೆಕ್ಟ್ ದಿನ ಎಂದ ಫ್ಯಾನ್ಸ್
Image
Project K: ಗೆಲುವಿಗಾಗಿ ‘ಬಾಹುಬಲಿ’ ಸೂತ್ರ ಪಾಲಿಸುತ್ತಿರುವ ಪ್ರಭಾ​ಸ್​; 2 ಭಾಗದಲ್ಲಿ ಬರಲಿದೆ ‘ಪ್ರಾಜೆಕ್ಟ್​ ಕೆ’

ದೀಪಿಕಾ ಪಡುಕೋಣೆ ಅವರು ಈ ಚಿತ್ರಕ್ಕಾಗಿ ದೊಡ್ಡ ಕಾಲ್​ಶೀಟ್ ನೀಡಿದ್ದಾರೆ. ಹಲವು ದಿನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರು 10 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಕೆಲ ಸ್ಟಾರ್ ಹೀರೋಗಳು ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.

ಪ್ರಭಾಸ್ ಅವರಿಗೆ ಒಂದು ದೊಡ್ಡ ಗೆಲುವು ಬೇಕಿದೆ. ‘ಸಾಹೋ’ ಹಾಗೂ ‘ರಾಧೆ ಶ್ಯಾಮ್​’ ಚಿತ್ರಗಳು ಸೋತವು. ಈ ವರ್ಷ ಪ್ರಭಾಸ್ ನಟನೆಯ ‘ಆದಿಪುರುಷ್​’ ಸಿನಿಮಾ ರಿಲೀಸ್ ಆದರೆ, ಮುಂದಿನ ವರ್ಷದ ಆರಂಭದಲ್ಲಿ ‘ಪ್ರಾಜೆಕ್ಟ್​ ಕೆ’ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಜೆಟ್ ಬರೋಬ್ಬರಿ 500 ಕೋಟಿ ರೂಪಾಯಿ.

ಇದನ್ನೂ ಓದಿ: ಹಿರಿಯ ನಟನ ಜೊತೆ ಅನುಷ್ಕಾ ಶೆಟ್ಟಿ ಓಡಾಟ? ಪ್ರಭಾಸ್ ಜೊತೆಗಿನ ಬ್ರೇಕಪ್​ಗೆ ಹೊರಬಿತ್ತು ಕಾರಣ

ಈ ಚಿತ್ರದಲ್ಲಿ ಗ್ರಾಫಿಕ್ಸ್ ಹೈಲೈಟ್ ಆಗಲಿದೆ. ನಾವು ಗ್ರಾಫಿಕ್ಸ್‌ನ ಕೆಲಸವನ್ನು ಪ್ರಾರಂಭಿಸಿ ಐದು ತಿಂಗಳಾಗಿದೆ. ಸಿನಿಮಾದ ಶೇ. 70 ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಿನಿಮಾ ಫ್ಯಾಂಟಸಿ ಮತ್ತು ವೈಜ್ಞಾನಿಕ- ಅಂಶಗಳನ್ನು ಹೊಂದಿದೆ. ಇದು ವಿಷ್ಣುವಿನ ಆಧುನಿಕ ಅವತಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್