
ದೀಪಿಕಾ ಪಡುಕೋಣೆ (Deepika Padukone) ಹಲವು ವರ್ಷಗಳಿಂದ ಬಾಲಿವುಡ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹತ್ತು ಹಲವು ಪ್ರಾಜೆಕ್ಟ್ಗಳಲ್ಲಿ ನಟಿಸಿ ಅವರು ಫೇಮಸ್ ಆಗಿದ್ದಾರೆ. ದೀಪಿಕಾ ಕೈಯಲ್ಲಿ ಕೆಲವು ಸಿನಿಮಾಗಳಿವೆ. ಈ ವರ್ಷ ರಿಲೀಸ್ ಆದ ‘ಪಠಾಣ್’ ಚಿತ್ರದಿಂದ ಅವರ ಖ್ಯಾತಿ ದುಪ್ಪಟ್ಟಾಗಿದೆ. ಈ ಸಿನಿಮಾ ಸಾವಿರಾರು ಕೋಟಿ ಬಿಸ್ನೆಸ್ ಮಾಡಿ ಮುನ್ನುಗ್ಗುತ್ತಿದೆ. ದೀಪಿಕಾ ನಟಿಸುತ್ತಿರುವ ಸಿನಿಮಾಗಳ ಪೈಕಿ ‘ಪ್ರಾಜೆಕ್ಟ್ ಕೆ’ ಚಿತ್ರ (Project K Movie) ಬಹಳ ಮುಖ್ಯ ಎನಿಸಿಕೊಂಡಿದೆ. ಈ ಚಿತ್ರದಲ್ಲಿ ಪ್ರಭಾಸ್ಗೆ ಜೊತೆಯಾಗಿ ಅವರು ನಟಿಸುತ್ತಿದ್ದಾರೆ. ಈ ಚಿತ್ರಕ್ಕಾಗಿ ದೀಪಿಕಾ ದೊಡ್ಡ ಮೊತ್ತದ ಸಂಭಾವನೆ ಪಡೆದಿದ್ದಾರೆ.
ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಾಗಿ ನಟಿಸುತ್ತಿರುವ ಮೊದಲ ಸಿನಿಮಾ ಎಂಬ ಕಾರಣಕ್ಕೆ ‘ಪ್ರಾಜೆಕ್ಟ್ ಕೆ’ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಖ್ಯಾತ ನಿರ್ದೇಶಕ ನಾಗ್ ಅಶ್ವಿನ್ ಅವರು ಇದಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಸೈನ್ಸ್ ಫಿಕ್ಷನ್ ಕಥೆಯನ್ನು ಸಿನಿಮಾ ಹೊಂದಿದೆ. ಈ ಸಿನಿಮಾಗೆ ಇನ್ನೂ ಅಧಿಕೃತವಾಗಿ ಟೈಟಲ್ ಫಿಕ್ಸ್ ಆಗಿಲ್ಲ. ಈ ಸಿನಿಮಾ 2024ರ ಜನವರಿ 12ರಲ್ಲಿ ತೆರೆಗೆ ಬರಲಿದೆ. ಈಗ ದೀಪಿಕಾ ಸಂಭಾವನೆ ವಿಚಾರ ರಿವೀಲ್ ಆಗಿದೆ.
ದೀಪಿಕಾ ಪಡುಕೋಣೆ ಅವರು ಈ ಚಿತ್ರಕ್ಕಾಗಿ ದೊಡ್ಡ ಕಾಲ್ಶೀಟ್ ನೀಡಿದ್ದಾರೆ. ಹಲವು ದಿನ ಈ ಚಿತ್ರಕ್ಕಾಗಿ ಮುಡಿಪಿಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ಅವರು 10 ಕೋಟಿ ರೂಪಾಯಿ ಪಡೆದುಕೊಂಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ. ಕೆಲ ಸ್ಟಾರ್ ಹೀರೋಗಳು ಇಷ್ಟು ಸಂಭಾವನೆ ಪಡೆಯಲ್ಲ ಅನ್ನೋದು ಇಲ್ಲಿ ಗಮನಿಸಬೇಕಾದ ವಿಚಾರ.
ಪ್ರಭಾಸ್ ಅವರಿಗೆ ಒಂದು ದೊಡ್ಡ ಗೆಲುವು ಬೇಕಿದೆ. ‘ಸಾಹೋ’ ಹಾಗೂ ‘ರಾಧೆ ಶ್ಯಾಮ್’ ಚಿತ್ರಗಳು ಸೋತವು. ಈ ವರ್ಷ ಪ್ರಭಾಸ್ ನಟನೆಯ ‘ಆದಿಪುರುಷ್’ ಸಿನಿಮಾ ರಿಲೀಸ್ ಆದರೆ, ಮುಂದಿನ ವರ್ಷದ ಆರಂಭದಲ್ಲಿ ‘ಪ್ರಾಜೆಕ್ಟ್ ಕೆ’ ಬಿಡುಗಡೆ ಆಗುತ್ತಿದೆ. ಈ ಚಿತ್ರದ ಬಜೆಟ್ ಬರೋಬ್ಬರಿ 500 ಕೋಟಿ ರೂಪಾಯಿ.
ಇದನ್ನೂ ಓದಿ: ಹಿರಿಯ ನಟನ ಜೊತೆ ಅನುಷ್ಕಾ ಶೆಟ್ಟಿ ಓಡಾಟ? ಪ್ರಭಾಸ್ ಜೊತೆಗಿನ ಬ್ರೇಕಪ್ಗೆ ಹೊರಬಿತ್ತು ಕಾರಣ
ಈ ಚಿತ್ರದಲ್ಲಿ ಗ್ರಾಫಿಕ್ಸ್ ಹೈಲೈಟ್ ಆಗಲಿದೆ. ನಾವು ಗ್ರಾಫಿಕ್ಸ್ನ ಕೆಲಸವನ್ನು ಪ್ರಾರಂಭಿಸಿ ಐದು ತಿಂಗಳಾಗಿದೆ. ಸಿನಿಮಾದ ಶೇ. 70 ಚಿತ್ರೀಕರಣ ಪೂರ್ಣಗೊಂಡಿದೆ. ಈ ಸಿನಿಮಾ ಫ್ಯಾಂಟಸಿ ಮತ್ತು ವೈಜ್ಞಾನಿಕ- ಅಂಶಗಳನ್ನು ಹೊಂದಿದೆ. ಇದು ವಿಷ್ಣುವಿನ ಆಧುನಿಕ ಅವತಾರ.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ