ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

ಇಷ್ಟು ದಿನ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದ ದೀಪಿಕಾ, ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಮರಳುತ್ತಿದ್ದಾರೆ. ಅವರ ಲುಕ್​ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ.

ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್
ದೀಪಿಕಾ

Updated on: Jul 18, 2023 | 8:43 AM

‘ಬಾಹುಬಲಿ 2’ ಚಿತ್ರದ ಬಳಿಕ ಪ್ರಭಾಸ್ (Prabhas) ಒಪ್ಪಿಕೊಂಡ ಎಲ್ಲಾ ಚಿತ್ರಗಳು ದೊಡ್ಡ ಬಜೆಟ್​ನ ಸಿನಿಮಾಗಳೇ. ಪ್ರಭಾಸ್ ಅವರ ಸಿನಿಮಾ ಮೇಲೆ ಹಣ ಹಾಕಿದರೆ ದೊಡ್ಡ ಲಾಭ ಆಗುತ್ತದೆ ಅನ್ನೋದು ನಿರ್ಮಾಪಕರ ನಂಬಿಕೆ. ಆದರೆ, ಈ ನಂಬಿಕೆ ಸುಳ್ಳಾಗಿದೆ. ‘ಬಾಹುಬಲಿ 2’ ಬಳಿಕ ತೆರೆಗೆ ಬಂದ ಪ್ರಭಾಸ್ ನಟನೆಯ ‘ಸಾಹೋ’, ‘ರಾಧೆ ಶ್ಯಾಮ್’ ಹಾಗೂ ‘ಆದಿಪುರುಷ್’ ಸಿನಿಮಾಗಳು ಸೋತವು. ಈಗ ಅವರ ಗಮನ ‘ಸಲಾರ್’ (Salaar Movie) ಹಾಗೂ ‘ಪ್ರಾಜೆಕ್ಟ್​ ಕೆ’ ಚಿತ್ರದ ಮೇಲಿದೆ. ಈಗ ‘ಪ್ರಾಜೆಕ್ಟ್ ಕೆ’ ಚಿತ್ರದ ಮೊದಲ ಗ್ಲಿಂಪ್ಸ್ ರಿಲೀಸ್ ಆಗುವುದರಲ್ಲಿದೆ. ಅದಕ್ಕೂ ಮೊದಲು ದೀಪಿಕಾ ಪಡುಕೋಣೆ ಅವರ ಲುಕ್ ರಿವೀಲ್ ಮಾಡಲಾಗಿದೆ.

ದೀಪಿಕಾ ಪಡುಕೋಣೆ ಅವರು ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇಷ್ಟು ದಿನ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದ ಅವರು, ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಮರಳುತ್ತಿದ್ದಾರೆ. ಅವರ ಲುಕ್​ ಹೇಗಿರಲಿದೆ ಎಂಬುದನ್ನು ರಿವೀಲ್ ಮಾಡಲಾಗಿದೆ. ತಂಡ ಹೊಸ ಪೋಸ್ಟರ್​​ನ ರಿವೀಲ್ ಮಾಡಿದೆ.

ಪ್ರಭಾಸ್ ಹಾಗೂ ದೀಪಿಕಾ ಪಡುಕೋಣೆ ಇದೇ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದಾರೆ. ‘ಪ್ರಾಜೆಕ್ಟ್ ಕೆ’ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಲು ಇದು ಕೂಡ ಕಾರಣ. ‘ಪ್ರಾಜೆಕ್ಟ್ ಕೆ’ ಎಂದರೇನು ಎಂದು ತಿಳಿದುಕೊಳ್ಳುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಜುಲೈ 21ರಂದು ಉತ್ತರ ಸಿಗಲಿದೆ.

‘ಪ್ರಾಜೆಕ್ಟ್​ ಕೆ’ ಸಿನಿಮಾ ಕೂಡ ದೊಡ್ಡ ಬಜೆಟ್​ನಲ್ಲಿ ಸಿದ್ಧವಾಗುತ್ತಿದೆ. ಈ ಚಿತ್ರಕ್ಕೆ ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದಾರೆ. ದೀಪಿಕಾ, ಪ್ರಭಾಸ್ ಜೊತೆ ಅಮಿತಾಭ್ ಬಚ್ಚನ್ ಸೇರಿ ಅನೇಕ ಪ್ರಮುಖ ಕಲಾವಿದರು ನಟಿಸಿದ್ದಾರೆ. ವೈಜಯಂತಿ ಮೂವೀಸ್​ ಈ ಚಿತ್ರಕ್ಕೆ ಬಂಡವಾಳ ಹೂಡಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ದೀಪಿಕಾ ಪಡುಕೋಣೆಗೆ ಇಷ್ಟವಾಗುವ ಹೋಟೆಲ್​ಗಳಾವುವು? ತಂದೆ ಪ್ರಕಾಶ್ ಪಡುಕೋಣೆ ಹೇಳಿದ ಪಟ್ಟಿ 

ದೀಪಿಕಾ ಪಡುಕೋಣೆ ಅವರು ಈ ವರ್ಷದ ಆರಂಭದಲ್ಲೇ ದೊಡ್ಡ ಗೆಲುವು ಕಂಡಿದ್ದಾರೆ. ‘ಪಠಾಣ್’ ಚಿತ್ರದಿಂದ ಅವರು ಗೆದ್ದು ಬೀಗಿದ್ದಾರೆ. ಈಗ ಅವರು ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ಮತ್ತೊಂದು ಗೆಲುವು ಕಾಣುವ ನಿರೀಕ್ಷೆಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Tue, 18 July 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us