AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು

ಆಸ್ಕರ್ ಅವಾರ್ಡ್ ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆಗೆ ಅವಮಾನ; ಸಿಟ್ಟಿಗೆದ್ದ ಫ್ಯಾನ್ಸ್
ದೀಪಿಕಾ ಪಡುಕೋಣೆ
ರಾಜೇಶ್ ದುಗ್ಗುಮನೆ
|

Updated on:Mar 15, 2023 | 12:01 PM

Share

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಕೇವಲ ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಮಂದಿಗೂ ಪರಿಚಿತರು. ಅವರು ಇಂಗ್ಲಿಷ್​ನ ‘ಎಕ್​ಎಕ್ಸ್​ಎಕ್ಸ್​: ರಿಟರ್ನ್​ ಆಫ್ ಕ್ಸಾಂಡರ್ ಕೇಜ್​’ ಸಿನಿಮಾದಲ್ಲಿ ನಟಿಸಿದ್ದರು. ಈ ಮೂಲಕ ಹಾಲಿವುಡ್​​ಗೂ ಕಾಲಿಟ್ಟಿದ್ದರು.. ಇತ್ತೀಚೆಗೆ ನಡೆದ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮದಲ್ಲಿ ದೀಪಿಕಾ ಪಡುಕೋಣೆ ಮಿಂಚಿದ್ದರು. ಆದರೆ, ಅವರಿಗೆ ಅವಮಾನ ಆಗಿದೆ. ಈ ಬಗ್ಗೆ ಫ್ಯಾನ್ಸ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನು ಸಹಿಸಿಕೊಳ್ಳೋಕೆ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಸೋಮವಾರ (ಮಾರ್ಚ್​ 13) ಅಮೆರಿಕದ ಲಾಸ್ ಏಂಜಲಿಸ್​ನ ಡಾಲ್ಬಿ ಥಿಯೇಟರ್​ನಲ್ಲಿ ಆಸ್ಕರ್ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಕಾರ್ಯಕ್ರಮಕ್ಕೆ ವಿವಿಧ ದೇಶಗಳಿಂದ ಅತಿಥಿಗಳು ಬಂದಿದ್ದರು. ‘ಆರ್​ಆರ್​ಆರ್​’ ಚಿತ್ರದ ‘ನಾಟು ನಾಟು..’ ಹಾಡು ಈ ವೇದಿಕೆ ಮೇಲೆ ಆಸ್ಕರ್ ಗೆದ್ದಿತು. ಈ ಹಾಡಿನ ಪರ್ಫಾರ್ಮೆನ್ಸ್​​ಗೂ ಮೊದಲು ದೀಪಿಕಾ ಪಡುಕೋಣೆ ಅವರು ವೇದಿಕೆ ಏರಿ ಹಾಡಿನ ಬಗ್ಗೆ ವಿವರಣೆ ನೀಡಿದ್ದರು.

ಇದನ್ನೂ ಓದಿ:  ‘ಪ್ರಾಜೆಕ್ಟ್​ ಕೆ’ ಚಿತ್ರಕ್ಕೆ ಭರ್ಜರಿ ಸಂಭಾವನೆ ಪಡೆದ ದೀಪಿಕಾ ಪಡುಕೋಣೆ; ಸ್ಟಾರ್​ ಹೀರೋಗಿಂತ ಹೆಚ್ಚು ರೆಮ್ಯುನರೇಷನ್

ದೀಪಿಕಾ ಆಸ್ಕರ್ ವೇದಿಕೆ ಏರಿದ ಫೋಟೋ ವೈರಲ್ ಆಗಿದೆ. ಅನೇಕರು ಅವರನ್ನು ದೀಪಿಕಾ ಎಂದು ಗುರುತಿಸಲೇ ಇಲ್ಲ. ಬದಲಿಗೆ ಬ್ರೇಜಿಲ್ ಮಾಡೆಲ್, ಡಿಸೈನರ್ ಕಮಿಲಾ ಆಲ್ವ್ಸ್​ ಮೆಕ್ಕಾನಹೇ ಹೆಸರನ್ನು ಸೇರಿಸಲಾಗಿದೆ. ಆಸ್ಕರ್ ವೇದಿಕೆ ಏರಿದ್ದು ಕಮಿಲಾ ಆಲ್ವ್ಸ್ ಎಂದು ಅನೇಕರು ತಪ್ಪಾಗಿ ಅರ್ಥೈಸಿಕೊಂಡಿದ್ದಾರೆ. ಇದರಿಂದ ದೀಪಿಕಾಗೆ ಅವಮಾನ ಆಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ಅಂದಹಾಗೆ ಕಮಿಲಾ ಅವರು ಹಾಲಿವುಡ್​ನ ಖ್ಯಾತ ನಟ ಮ್ಯಾಥೀವ್ ಮೆಕ್ಕಾನಹೇ ಅವರನ್ನು ಮದುವೆ ಆಗಿದ್ದಾರೆ.

ಇದನ್ನೂ ಓದಿ: Deepika Padukone: ಆಸ್ಕರ್ ವೇದಿಕೆಯಲ್ಲಿ ‘ನಾಟು ನಾಟು..’ ಹಾಡಿನ ಬಗ್ಗೆ ನಗುಮುಖದಿಂದ ವಿವರಿಸಿದ ದೀಪಿಕಾ ಪಡುಕೋಣೆ

ಆಸ್ಕರ್ ವೇದಿಕೆ ಮೇಲೆ ‘ನಾಟು ನಾಟು..’ ಹಾಡಿನ ಪರ್ಫಾರ್ಮೆನ್ಸ್​ಗೂ ಮೊದಲು ದೀಪಿಕಾ ಪಡುಕೋಣೆ ಅವರು ಈ ಹಾಡಿನ ಬಗ್ಗೆ ವಿವರಣೆ ನೀಡಿದ್ದರು. ಗ್ಲೋಬಲ್ ಸೆನ್ಸೇಷನ್ ಸೃಷ್ಟಿಸಿದ ಹಾಡು ‘ನಾಟು ನಾಟು..’ ಎಂದು ದೀಪಿಕಾ ಕರೆದಿದ್ದರು. ಅವರು ನಗುಮುಖದಲ್ಲೇ ಈ ಹಾಡಿನ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದರು.  ಆಸ್ಕರ್ ವೇದಿಕೆ ಏರುವಾಗ ಕಪ್ಪು ಬಣ್ಣದ ಗೌನ್​ನಲ್ಲಿ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದರು. ಆದರೆ, ಈಗ ಅವರನ್ನು ಬೇರೆ ಹೆಸರಲ್ಲಿ ಕರೆದಿದ್ದು ಅನೇಕರಿಗೆ ಬೇಸರ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:01 pm, Wed, 15 March 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ