AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?

ಪ್ರಾಜೆಕ್ಟ್​ ಕೆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

Deepika Padukone: ಹೈದರಾಬಾದ್​ನಲ್ಲಿ ಶೂಟಿಂಗ್ ಬಿಟ್ಟು ಆಸ್ಪತ್ರೆಗೆ ಓಡಿದ ದೀಪಿಕಾ ಪಡುಕೋಣೆ; ಅಂಥದ್ದೇನಾಯ್ತು?
ದೀಪಿಕಾ ಪಡುಕೋಣೆ
TV9 Web
| Edited By: |

Updated on: Jun 14, 2022 | 6:34 PM

Share

ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಸದ್ಯಕ್ಕೆ ಹೈದರಾಬಾದ್‌ನಲ್ಲಿ ‘ಪ್ರಾಜೆಕ್ಟ್ ಕೆ’ (Project K) ಎಂಬ ಮುಂಬರುವ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ (Deepika Padukone) ಶೂಟಿಂಗ್​ನಲ್ಲಿದ್ದಾಗ ಅವರಿಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಪರೀಕ್ಷೆ ನಡೆಸಿದ್ದು, ಆಕೆಯ ಆರೋಗ್ಯದಲ್ಲಿ ಯಾವುದೇ ಏರುಪೇರಾಗಿಲ್ಲ ಎಂಬುದು ಖಚಿತವಾದ ನಂತರ ದೀಪಿಕಾ ಪಡುಕೋಣೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೀಗ ಶೂಟಿಂಗ್​ನಲ್ಲಿ ಮತ್ತೆ ತೊಡಗಿಸಿಕೊಂಡಿದ್ದಾರೆ.

“ದೀಪಿಕಾ ಪಡುಕೋಣೆಗೆ ಕೊಂಚ ಆರೋಗ್ಯ ಹದಗೆಟ್ಟಿದ್ದರಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ತನ್ನ ಹೃದಯದ ಬಡಿತವು ಏರುಪೇರಾಗುತ್ತಿದೆ ಎಂದು ಅವರಿಗೆ ಅನಿಸತೊಡಗಿತ್ತು. ಇದೀಗ ಚಿಕಿತ್ಸೆಯ ನಂತರ ಅವರು ಈಗ ಪ್ರಾಜೆಕ್ಟ್ ಕೆ ಸೆಟ್‌ಗೆ ಮರಳಿದ್ದಾರೆ ಎಂದು ಸುದ್ದಿ ಪೋರ್ಟಲ್ ವರದಿ ಮಾಡಿದೆ. ಆದರೆ, ದೀಪಿಕಾ ಪಡುಕೋಣೆ ಅವರ ತಂಡದಿಂದ ಇದುವರೆಗೆ ಈ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಹೊರಬಿದ್ದಿಲ್ಲ.

ಇದನ್ನೂ ಓದಿ: Deepika Padukone: ಕಾನ್ ಫಿಲ್ಮ್​​ ಫೆಸ್ಟಿವಲ್ ಆರಂಭ; ಜ್ಯೂರಿ ಆಗಿ ಕಾಣಿಸಿಕೊಂಡ ದೀಪಿಕಾ ಪಡುಕೋಣೆ

ಇನ್ನು, ಪ್ರಾಜೆಕ್ಟ್​ ಕೆ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಪ್ರಭಾಸ್, ಅಮಿತಾಬ್ ಬಚ್ಚನ್ ಮತ್ತು ದಿಶಾ ಪಟಾನಿ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಇದನ್ನು ನಾಗ್ ಅಶ್ವಿನ್ ನಿರ್ದೇಶಿಸಿದ್ದಾರೆ. ಕಳೆದ ತಿಂಗಳು ಚಿತ್ರದ ನಿರ್ದೇಶಕರು ಟ್ವಿಟರ್‌ನಲ್ಲಿ ಈ ಬಗ್ಗೆ ಘೋಷಣೆ ಮಾಡಿದ್ದರು. ಈ ಚಿತ್ರವು ಚಿತ್ರೀಕರಣದ ಆರಂಭಿಕ ಹಂತದಲ್ಲಿದೆ.

ಈ ಸಿನಿಮಾ ಮಾತ್ರವಲ್ಲದೆ ದೀಪಿಕಾ ಪಡುಕೋಣೆ ಇನ್ನೂ ಹಲವಾರು ಇತರ ಪ್ರಾಜೆಕ್ಟ್‌ಗಳನ್ನು ಕೂಡ ಮಾಡುತ್ತಿದ್ದಾರೆ. ಅವರು ಶಾರುಖ್ ಖಾನ್ ಮತ್ತು ಜಾನ್ ಅಬ್ರಹಾಂ ಅವರೊಂದಿಗೆ ಬಹುನಿರೀಕ್ಷಿತ ಪಠಾಣ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ಈ ಚಿತ್ರ ಥಿಯೇಟರ್‌ಗಳಲ್ಲಿ ತೆರೆಕಾಣಲಿದೆ. ಇದಲ್ಲದೆ, ದೀಪಿಕಾ ಹೃತಿಕ್ ರೋಷನ್ ಅಭಿನಯದ ಫೈಟರ್ ಮತ್ತು ಅಮಿತಾಬ್ ಬಚ್ಚನ್ ಜೊತೆಗೆ ದಿ ಇಂಟರ್ನ್‌ ಸಿನಿಮಾದಲ್ಲೂ ಅಭಿನಯಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್