AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಳಿ ಬಂದ ವದಂತಿಗಳಿಗೆ ತೆರೆ ಎಳೆದ ನಟಿ ದೀಪಿಕಾ ಪಡುಕೋಣೆ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ 'ಬ್ರಹ್ಮಾಸ್ತ್ರ 2' ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ವದಂತಿಗಳನ್ನು ಅವರ ತಂಡ ತಳ್ಳಿಹಾಕಿದೆ. ಮೊದಲ ಭಾಗದಲ್ಲಿ ಶಿವಾ ತಾಯಿಯಾಗಿ ಸಣ್ಣ ಪಾತ್ರ ಮಾಡಿದ್ದ ದೀಪಿಕಾ, ಎರಡನೇ ಭಾಗದಲ್ಲಿ ಇರುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಹರಿದಾಡುತ್ತಿದ್ದ ಎಲ್ಲಾ ಸುದ್ದಿಗಳಿಗೆ ತೆರೆ ಎಳೆದಿದ್ದಾರೆ.

ಕೇಳಿ ಬಂದ ವದಂತಿಗಳಿಗೆ ತೆರೆ ಎಳೆದ ನಟಿ ದೀಪಿಕಾ ಪಡುಕೋಣೆ
ದೀಪಿಕಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 25, 2026 | 8:01 AM

Share

ಮುಖ್ಯಾಂಶಗಳು

  • 'ಬ್ರಹ್ಮಾಸ್ತ್ರ 2' ವದಂತಿಗಳಿಗೆ ಬ್ರೇಕ್
  • ಅಧಿಕೃತ ಸ್ಪಷ್ಟನೆ ನೀಡಿದ ದೀಪಿಕಾ ಪಡುಕೋಣೆ ಟೀಮ್
  • ಸಾಲಸಾಲಾಗಿ ದೊಡ್ಡ ಪ್ರಾಜೆಕ್ಟ್‌ಗಳಿಂದ ಔಟ್ 

ಖ್ಯಾತ ನಟಿ ದೀಪಿಕಾ ಪಡುಕೋಣೆ ‘ಬ್ರಹ್ಮಾಸ್ತ್ರ 2’ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಾಲಿವುಡ್‌ನಲ್ಲಿ ಹರಿದಾಡುತ್ತಿತ್ತು. ಆದರೆ ಈ ಎಲ್ಲಾ ಸುದ್ದಿಗಳು ಸಂಪೂರ್ಣ ಸುಳ್ಳು ಎಂದು ಅವರ ತಂಡ ಸ್ಪಷ್ಟಪಡಿಸಿದೆ. ಈ ಕುರಿತು ಅಧಿಕೃತ ಹೇಳಿಕೆ ನೀಡಲಾಗಿದ್ದು, ವದಂತಿಗಳಿಗೆ ಬ್ರೇಕ್ ಬಿದ್ದಿದೆ. ಚಿತ್ರತಂಡದ ಜೊತೆ ದೀಪಿಕಾ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ.

‘ಬ್ರಹ್ಮಾಸ್ತ್ರ’ ಮೊದಲ ಭಾಗದಲ್ಲಿ ದೀಪಿಕಾ ಪಡುಕೋಣೆ ಸಣ್ಣದೊಂದು ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಅವರು ಶಿವಾ ಪಾತ್ರದ ತಾಯಿ ಅಮೃತಾ ಆಗಿ ಮಿಂಚಿದ್ದರು. ಎರಡನೇ ಭಾಗದಲ್ಲಿ ಅವರ ಪಾತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ಇರಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಅವರ ತಂಡ ಈ ಸುದ್ದಿಯನ್ನು ಕಡ್ಡಾಯವಾಗಿ ಅಲ್ಲಗೆಳೆದಿದೆ.

ಎರಡನೇ ಭಾಗದಲ್ಲಿ ದೇವ್ ಎಂಬ ಮುಖ್ಯ ಪಾತ್ರ ಬರಲಿದೆ. ದೇವ್ ಮತ್ತು ಅಮೃತಾ ಪಾತ್ರಗಳು ಪ್ರಮುಖವಾಗಿದ್ದವು. ದೇವ್ ಪಾತ್ರಕ್ಕೆ ರಣವೀರ್ ಸಿಂಗ್ ಅಥವಾ ವಿಜಯ್ ದೇವರಕೊಂಡ ಆಯ್ಕೆಯಾಗಬಹುದು ಎಂಬ ಮಾತು ಕೇಳಿಬಂದಿತ್ತು. ಆದರೆ ಈಗ ದೀಪಿಕಾ ಅವರ ಗೈರುಹಾಜರಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಇತ್ತೀಚೆಗೆ ದೀಪಿಕಾ ಪಡುಕೋಣೆ ಹಲವು ದೊಡ್ಡ ಸಿನಿಮಾಗಳಿಂದ ಹೊರಬಂದಿದ್ದಾರೆ. ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದಿಂದ ಅವರು ಹಿಂದೆ ಸರಿದಿದ್ದರು. ನಾಗ್ ಅಶ್ವಿನ್ ಅವರ ‘ಕಲ್ಕಿ 2898 ಎಡಿ’ ಎರಡನೇ ಭಾಗದಿಂದಲೂ ಹೊರನಡೆದಿದ್ದಾರೆ. ಸಂಭಾವನೆ ಮತ್ತು ಚಿತ್ರೀಕರಣದ ಸಮಯದ ಭಿನ್ನಾಭಿಪ್ರಾಯ ಇದಕ್ಕೆ ಕಾರಣ ಎನ್ನಲಾಗಿದೆ. ಆದರೆ ಚಿತ್ರರಂಗದ ಪ್ರಮುಖರು ದೀಪಿಕಾ ನಿರ್ಧಾರವನ್ನು ಬೆಂಬಲಿಸಿದ್ದಾರೆ. ತಾಯ್ತನದ ಜೊತೆಗೆ ವೃತ್ತಿಜೀವನ ಸರಿದೂಗಿಸುವ ಅವರ ಪ್ರಯತ್ನಕ್ಕೆ ಬೆಂಬಲ ವ್ಯಕ್ತವಾಗಿದೆ.

ಇದನ್ನೂ ಓದಿ: ‘ಸ್ಪಿರಿಟ್’ ಸಿನಿಮಾದಿಂದ ದೀಪಿಕಾ ಪಡುಕೋಣೆ ಹೊರ ನಡೆದಿದ್ದಕ್ಕೆ ಕೊನೆಗೂ ಅಸಲಿ ಕಾರಣ ಬಯಲು

ಪ್ರಸ್ತುತ ದೀಪಿಕಾ ಹಲವು ಪ್ರಮುಖ ಸಿನಿಮಾಗಳಲ್ಲಿ ನಿರತರಾಗಿದ್ದಾರೆ. ಶಾರುಖ್ ಖಾನ್ ನಟನೆಯ ‘ಕಿಂಗ್’ ಚಿತ್ರದಲ್ಲಿ ಅವರು ಅಭಿನಯಿಸುತ್ತಿದ್ದಾರೆ. ಅಟ್ಲೀ ನಿರ್ದೇಶನದ ‘ರಾಕಾ’ ಚಿತ್ರದಲ್ಲೂ ದೀಪಿಕಾ ಪ್ರಮುಖ ಪಾತ್ರದಲ್ಲಿದ್ದಾರೆ. ಆಲ್ಫಾ ಮತ್ತು ಸೈನ್ಸ್ ಫಿಕ್ಷನ್ ಕಥಾಹಂದರ ಹೊಂದಿರುವ ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಮೂಡಿಬರುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ