AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎವರ್​ಗ್ರೀನ್​ ಹೀರೋ ರಜನಿಕಾಂತ್​ಗೆ ನಾಯಕಿಯಾಗಲಿದ್ದಾರೆ ಯಂಗ್​ ಬ್ಯೂಟಿ ದೀಪಿಕಾ ಪಡುಕೋಣೆ

ರಜನಿ ‘ಅಣ್ಣಾಥೆ’ ಸಿನಿಮಾದ ಕೊನೆಯ ಹಂತದ ಶೂಟಿಂಗ್​ಗಾಗಿ ಕೋಲ್ಕತ್ತಾಗೆ ತೆರಳಿದ್ದರು.  ಈಗ ಅವರು ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ ಎನ್ನಲಾಗುತ್ತಿದೆ.

ಎವರ್​ಗ್ರೀನ್​ ಹೀರೋ ರಜನಿಕಾಂತ್​ಗೆ ನಾಯಕಿಯಾಗಲಿದ್ದಾರೆ ಯಂಗ್​ ಬ್ಯೂಟಿ ದೀಪಿಕಾ ಪಡುಕೋಣೆ
ಎವರ್​ಗ್ರೀನ್​ ಹೀರೋ ರಜನಿಕಾಂತ್​ಗೆ ನಾಯಕಿಯಾಗಲಿದ್ದಾರೆ ಯಂಗ್​ ಬ್ಯೂಟಿ ದೀಪಿಕಾ ಪಡುಕೋಣೆ
TV9 Web
| Edited By: |

Updated on:Jul 26, 2021 | 9:39 PM

Share

ನಟ ರಜನಿಕಾಂತ್​ ಅವರಿಗೆ ವಯಸ್ಸು 70 ಆದರೂ ಬೇಡಿಕೆ ಮಾತ್ರ ಕುಗ್ಗಿಲ್ಲ. ರಜನಿ ಕಾಲ್​ಶೀಟ್​ ಪಡೆಯಬೇಕೆಂದು ಅನೇಕ ನಿರ್ಮಾಪಕರು ಈಗಲೂ ಕಾದು ಕುಳಿತಿದ್ದಾರೆ. ಸದ್ಯ, ಕಾಲಿವುಡ್​ ಅಂಗಳದಲ್ಲಿ ರಜನಿಕಾಂತ್​ ಹೊಸ ಚಿತ್ರದ ಬಗ್ಗೆ ಹೊಸ ಗುಸುಗುಸುವೊಂದು ಹರಿದಾಡಿದೆ. ಅಚ್ಚರಿ ಎಂದರೆ ಅವರ ಮುಂದಿನ ಚಿತ್ರಕ್ಕೆ ನಾಯಕಿಯಾಗಿ ದೀಪಿಕಾ ಪಡುಕೋಣೆ ಕಾಲ್​ ಶೀಟ್​ ಕೇಳಲಾಗಿದೆ.

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಬಳಿಕ ಅವರು ಭಾರತಕ್ಕೆ ವಾಪಾಸಾಗಿದ್ದು, ಅಭಿಮಾನಿಗಳು ನಿಟ್ಟುಸಿರುಬಿಟ್ಟರು. ಈ ಬೆನ್ನಲ್ಲೇ ರಜನಿ ‘ಅಣ್ಣಾಥೆ’ ಸಿನಿಮಾದ ಕೊನೆಯ ಹಂತದ ಶೂಟಿಂಗ್​ಗಾಗಿ ಕೋಲ್ಕತ್ತಾಗೆ ತೆರಳಿದ್ದರು.  ಈಗ ಅವರು ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ ಎನ್ನಲಾಗುತ್ತಿದೆ.

ನಿರ್ದೇಶಕ ದೇಸಿಂಗ್​ ಪೆರಿಯಸ್ವಾಮಿ ಜತೆ ರಜನಿ ಕೈ ಜೋಡಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡಿದೆ. ‘ಅಣ್ಣಾಥೆ’ ಚಿತ್ರ ರೀಲೀಸ್​ ಬಳಿ ರಜನಿ ಈ ಚಿತ್ರ ಕೈಗೆತ್ತಿಕೊಳ್ಳಲಿದ್ದಾರೆ. ಈಗಾಗಲೇ ದೇಸಿಂಗ್​ ಅವರು ರಜನಿಗೆ ಕಥೆ ಹೇಳಿದ್ದು, ಸೂಪರ್​​ಸ್ಟಾರ್​ ಇದನ್ನು ಇಷ್ಟಪಟ್ಟಿದ್ದಾರೆ. ಈ ಚಿತ್ರಕ್ಕೆ ದೀಪಿಕಾರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲು ಮಾತುಕತೆ ನಡೆದಿದೆ.

‘ಕೊಚಡಿಯನ್’​ ಸಿನಿಮಾದಲ್ಲಿ ರಜನಿ ಹಾಗೂ ದೀಪಿಕಾ ಒಟ್ಟಾಗಿ ಕೆಲಸ ಮಾಡಿದ್ದರು. ಆದರೆ, ಇದು ಮೋಷನ್ ಕ್ಯಾಪ್ಚರ್​​ ಸಿನಿಮಾ ಆಗಿತ್ತು. ಒಂದೊಮ್ಮೆ ಈ ಹೊಸ ಚಿತ್ರದಲ್ಲಿ ದೀಪಿಕಾ ನಟಿಸೋಕೆ ಒಪ್ಪಿದರೆ ಇದೇ ಮೊದಲ ಬಾರಿಗೆ ರಜನಿ ಜತೆ ಅವರು ನೈಜವಾಗಿ ತೆರೆಹಂಚಿಕೊಂಡಂತಾಗಲಿದೆ ಈ ಬಗ್ಗೆ ಅಧಿಕೃತ ಘೋಷಣೆ ಬಾಕಿ ಇದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದರು. ನಂತರ ಅವರು ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು.

‘ಅಣ್ಣಾಥೆ’ ಸಿನಿಮಾಗೆ ‘ವಿಶ್ವಾಸಮ್​’ ಖ್ಯಾತಿಯ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೀಪಾವಳಿ ನಿಮಿತ್ತ ನವೆಂಬರ್​ 4ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ಅಣ್ಣಾಥೆ ಶೂಟಿಂಗ್ ಮುಗಿದ ಬೆನ್ನಲ್ಲೇ ಕೊವಿಡ್ ಎರಡನೇ ಡೋಸ್ ಲಸಿಕೆ ಪಡೆದ ರಜನಿಕಾಂತ್

Published On - 4:00 pm, Mon, 26 July 21

Follow Us
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ