AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪ್ರಾಜೆಕ್ಟ್ ಕೆ’: ದೀಪಿಕಾ ಪಡುಕೋಣೆ ಲುಕ್ ಬಿಡುಗಡೆ

Project K: ಭಾರತದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ಪ್ರಭಾಸ್​ರ 'ಪ್ರಾಜೆಕ್ಟ್ ಕೆ' ಸಿನಿಮಾದಿಂದ ದೀಪಿಕಾ ಪಡುಕೋಣೆಯ ಫಸ್ಟ್ ಲುಕ್ ರಿಲೀಸ್ ಆಗಿದೆ.

'ಪ್ರಾಜೆಕ್ಟ್ ಕೆ': ದೀಪಿಕಾ ಪಡುಕೋಣೆ ಲುಕ್ ಬಿಡುಗಡೆ
ದೀಪಿಕಾ ಪಡುಕೋಣೆ
ಮಂಜುನಾಥ ಸಿ.
|

Updated on:Jul 18, 2023 | 10:52 PM

Share

‘ಆದಿಪುರುಷ್‘ (Adipurush) ಸಿನಿಮಾ ನಿರೀಕ್ಷೆಗಳನ್ನೆಲ್ಲ ಹುಸಿ ಮಾಡಿದ ಬೆನ್ನಲ್ಲೆ ಇದೀಗ ಎಲ್ಲ ನಿರೀಕ್ಷೆಗಳು ಪ್ರಭಾಸ್​ರ ಹೊಸ ಸಿನಿಮಾ ‘ಸಲಾರ್‘ (Salaar) ಹಾಗೂ ‘ಪ್ರಾಜೆಕ್ಟ್ ಕೆ‘ (Project K) ಕಡೆಗೆ ತಿರುಗಿವೆ. ಪ್ರಶಾಂತ್ ನೀಲ್ ನಿರ್ದೇಶನದ ‘ಸಲಾರ್’ ಸಿನಿಮಾ ಪಕ್ಕಾ ಕಮರ್ಶಿಯಲ್, ಮಾಸ್ ಎಲಿವೇಷನ್ ಸಿನಿಮಾ ಆಗಿದ್ದು ಆ ಸಿನಿಮಾದ ಬಗ್ಗೆ ಪ್ರೇಕ್ಷಕರಿಗೆ ಒಂದು ತೆರನಾದ ನಿರೀಕ್ಷೆ ಇದೆ. ಆದರೆ ಅಸಲಿಗೆ ಬಹಳ ಕುತೂಹಲ ಕೆರಳಿಸಿರುವುದು ಪ್ರಭಾಸ್​ರ ‘ಪ್ರಾಜೆಕ್ಟ್ ಕೆ’ ಸಿನಿಮಾ. ಈ ಸಿನಿಮಾ ಭವಿಷ್ಯ ಹಾಗೂ ಭೂತಕಾಲದ ಕತೆಯನ್ನು ಹೊಂದಿದೆ ಎನ್ನಲಾಗುತ್ತಿದ್ದು, ಮಹಾನ್ ಘಟಾನು-ಘಟಿ ನಟರು ಈ ಸಿನಿಮಾಕ್ಕಾಗಿ ಒಂದಾಗಿದ್ದಾರೆ.

ಇದೀಗ ಸಿನಿಮಾದ ನಾಯಕಿ ದೀಪಿಕಾ ಪಡುಕೋಣೆಯ ಲುಕ್ ಅನ್ನು ‘ಪ್ರಾಜೆಕ್ಟ್ ಕೆ’ ಚಿತ್ರತಂಡ ಬಿಡುಗಡೆ ಮಾಡಿದೆ. ಸಿನಿಮಾಕ್ಕೆ ಬಂಡವಾಳ ಹೂಡಿರುವ ವೈಜಯಂತಿ ಮೂವೀಸ್​ ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ದೀಪಿಕಾ ಪಡುಕೋಣೆಯ ಮೊದಲ ಲುಕ್​ ಅನ್ನು ಹಂಚಿಕೊಂಡಿದ್ದಾರೆ. ಕದರಿದ ಕೂದಲು ಬಿಟ್ಟು, ಯಾವುದೋ ಗುರಿಯೆಡಗೆ ತದೇಕಚಿತ್ತದಿಂದ ನೋಡುತ್ತಿರುವ ದೀಪಿಕಾರ ಲುಕ್ ಪಾತ್ರದ ಬಗ್ಗೆ ಕುತೂಹಲ ಮೂಡಿಸುತ್ತಿದೆ. ದೀಪಿಕಾ ಕೊರಳಿಗೆ ಸುತ್ತುಕೊಂಡಿರುವ ಉಡುಗೆಯೂ ಭಿನ್ನವಾಗಿದ್ದು, ಹಾಲಿವುಡ್​ನ ‘ಡ್ಯೂನ್’ ಸಿನಿಮಾದ ಪಾತ್ರಗಳನ್ನು ನೆನಪಿಸುವಂತಿದೆ.

ದೀಪಿಕಾರ ಲುಕ್ ಹಂಚಿಕೊಂಡಿರುವ ವೈಜಯಂತಿ ಮೂವೀಸ್, ”ಅತ್ಯುತ್ತಮ ಭವಿಷ್ಯಕ್ಕಾಗಿ ಭರವಸೆಯ ಬೆಳಕು” ಎಂದು ಕ್ಯಾಪ್ಷನ್ ನೀಡಿದೆ. ಮತ್ತೊಂದು ಪೋಸ್ಟ್​ನಲ್ಲಿ, ”ಹೊಸ ಪ್ರಪಂಚದ ಭರವಸೆಯನ್ನು ಆಕೆ ತನ್ನ ಕಣ್ಣುಗಳಲ್ಲಿ ತುಂಬಿಕೊಂಡಿದ್ದಾಳೆ” ಎಂದು ಬರೆದಿದ್ದಾರೆ. ‘ಪ್ರಾಜೆಕ್ಟ್ ಕೆ’ ಎಂದರೇನು? ಸಿನಿಮಾದ ಹೆಸರೇನು? ಸಿನಿಮಾದ ಟೀಸರ್ ಇನ್ನಿತರೆಗಳು ಜುಲೈ 21ರಂದು ಬಹಿರಂಗಗೊಳ್ಳಲಿವೆ. ಈಗಾಗಲೇ ‘ಪ್ರಾಜೆಕ್ಟ್ ಕೆ’ ಚಿತ್ರತಂಡ ಅಮೆರಿಕಕ್ಕೆ ತೆರಳಿದ್ದು ಅಲ್ಲಿಯೇ ಸಿನಿಮಾದ ಹೆಸರು, ಟೀಸರ್ ಅಥವಾ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡಲಿದೆ.

ಇದನ್ನೂ ಓದಿ:ವಿಶೇಷ ದಿನಕ್ಕೂ ಮುನ್ನ ‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

‘ಪ್ರಾಜೆಕ್ಟ್ ಕೆ’ ಭಾರಿ ಬಜೆಟ್​ನ ಸಿನಿಮಾ ಆಗಿದ್ದು, ಸಿನಿಮಾದಲ್ಲಿ ದೀಪಿಕಾ ಪಡುಕೋಣೆ, ದಿಶಾ ಪಟಾನಿ ನಾಯಕಿಯರಾಗಿ ನಟಿಸಿದ್ದಾರೆ. ಅಮಿತಾಬ್ ಬಚ್ಚನ್ ಸಹ ಈ ಸಿನಿಮಾದಲ್ಲಿ ನಟಿಸಿದ್ದು, ವಿಲನ್ ಆಗಿ ಸ್ಟಾರ್ ನಟ ಕಮಲ್ ಹಾಸನ್ ನಟಿಸಿದ್ದಾರೆ. ಈ ಸಿನಿಮಾವು ಭವಿಷ್ಯ ಕಾಲ ಹಾಗೂ ಭೂತಕಾಲಗಳ ಕತೆಯನ್ನು ಒಳಗೊಂಡಿದೆ. ಭೂತಕಾಲದ ಜನ ಭವಿಷ್ಯತ್ ಕಾಲದ ಜನರೊಟ್ಟಿಗೆ ಮಾಡುವ ಸಂಘರ್ಷದ ಕತೆಯನ್ನು ‘ಪ್ರಾಜೆಕ್ಟ್ ಕೆ’ ಒಳಗೊಂಡಿದೆ. ಸಿನಿಮಾಕ್ಕೆ ಕತೆಯನ್ನು ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಹಾಗೂ ನಾಗ್ ಅಶ್ವಿನ್ ರಚಿಸಿದ್ದಾರೆ. ಸಿನಿಮಾವನ್ನು ನಾಗ್ ಅಶ್ವಿನ್ ನಿರ್ದೇಶನ ಮಾಡಿದ್ದು, ವೈಜಯಂತಿ ಮೂವೀಸ್ ನಿರ್ಮಾಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:51 pm, Tue, 18 July 23

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್