ರಿಲೀಸ್​ಗೂ ಮೊದಲೇ 8 ಕೋಟಿ ರೂಪಾಯಿ ಗಳಿಕೆ ಮಾಡಿದ ‘ದೇವರ’ ಸಿನಿಮಾ

ಕೆಲವು ವರದಿಗಳ ಪ್ರಕಾರ ಅಮೆರಿಕದ 276 ಲೊಕೇಶನ್​ಗಳಲ್ಲಿ ಈ ಸಿನಿಮಾಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಭಾರತದ ಅನೇಕರು ಅಮೆರಿಕದಲ್ಲಿ ಇದ್ದಾರೆ. ಅವರು ಮುಗಿಬಿದ್ದು ಸಿನಿಮಾ ಟಿಕೆಟ್ ಬುಕಿಂಗ್ ಮಾಡುತ್ತಿದ್ದಾರೆ.  

ರಿಲೀಸ್​ಗೂ ಮೊದಲೇ 8 ಕೋಟಿ ರೂಪಾಯಿ ಗಳಿಕೆ ಮಾಡಿದ ‘ದೇವರ’ ಸಿನಿಮಾ
ದೇವರ
Follow us
ರಾಜೇಶ್ ದುಗ್ಗುಮನೆ
|

Updated on: Sep 14, 2024 | 10:58 AM

ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾ ಸೆಪ್ಟೆಂಬರ್ 27ರಂದು ಬಿಡುಗಡೆ ಆಗುತ್ತಿದೆ. ಕೊರಟಾಲ ಶಿವ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಈಗಾಗಲೇ ದೊಡ್ಡ ಮಟ್ಟದ ಬಿಸ್ನೆಸ್ ಮಾಡಿದೆ. ಈ ಚಿತ್ರ ಕೇವಲ ಭಾರತ ಮಾತ್ರವಲ್ಲದೆ ವಿದೇಶದಲ್ಲೂ ಭರ್ಜರಿ ಗಳಿಕೆ ಮಾಡುತ್ತಿದೆ. ಅಮೆರಿಕದಲ್ಲಿ ಈ ಸಿನಿಮಾ ಈಗಾಗಲೇ 8 ಕೋಟಿ ರೂಪಾಯಿ ಗಳಿಕೆ ಮಾಡಿದೆ ಅನ್ನೋದು ವಿಶೇಷ.

ತೆಲುಗು ಸಿನಿಮಾಗಳಿಗೆ ಅಮೆರಿಕದಲ್ಲಿ ಸಖತ್ ಬೇಡಿಕೆ ಇದೆ. ಸಿನಿಮಾ ರಿಲೀಸ್​ಗೂ ಕೆಲ ವಾರ ಮೊದಲೇ ಚಿತ್ರಕ್ಕೆ ಅಡ್ವಾನ್ಸ್ ಬುಕಿಂಗ್ ಪ್ರಾರಂಭಿಸಲಾಗುತ್ತದೆ. ಈಗ ಜೂನಿಯರ್​ ಎನ್​ಟಿಆರ್ ನಟನೆಯ ‘ದೇವರ’ ಸಿನಿಮಾಗೂ ಅಮೆರಿಕದಲ್ಲಿ ಬುಕಿಂಗ್ ಆರಂಭ ಆಗಿದ್ದು 32 ಸಾವಿರ ಟಿಕೆಟ್​ಗಳು ಮಾರಾಟ ಆಗಿವೆ. ಇದರಿಂದ 8 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಈ ಮೂಲಕ ಸಿನಿಮಾ ದಾಖಲೆ ಬರೆದಿದೆ.

ಕೆಲವು ವರದಿಗಳ ಪ್ರಕಾರ ಅಮೆರಿಕದ 276 ಲೊಕೇಶನ್​ಗಳಲ್ಲಿ ಈ ಸಿನಿಮಾಗೆ ಅಡ್ವಾನ್ಸ್ ಬುಕಿಂಗ್ ಆರಂಭ ಆಗಿದೆ. ಭಾರತದ ಅನೇಕರು ಅಮೆರಿಕದಲ್ಲಿ ಇದ್ದಾರೆ. ಅವರು ಮುಗಿಬಿದ್ದು ಸಿನಿಮಾ ಟಿಕೆಟ್ ಬುಕಿಂಗ್ ಮಾಡುತ್ತಿದ್ದಾರೆ.

ಅಮೆರಿಕದ ಹಾಲಿವುಡ್ ಥಿಯೇಟರ್​ನಲ್ಲಿ ಸೆಪ್ಟೆಂಬರ್ 26ರಂದು ‘ದೇವರ’ ಚಿತ್ರದ ವಿಶೇಷ ಶೋ ಆಯೋಜನೆ ಮಾಡಲಾಗಿದೆ. ಈಗಾಗಲೇ ಜೂನಿಯರ್ ಎನ್​ಟಿಆರ್ ಅವರ ನಟನೆಯ ‘ಆರ್​ಆರ್​ಆರ್’ ಸಿನಿಮಾ ಆಸ್ಕರ್ ಗೆದ್ದಿದೆ. ಈ ಕಾರಣಕ್ಕೆ ಅವರ ಹೆಸರು ಹಾಲಿವುಡ್​ನಲ್ಲಿ ಚಿರಪರಿಚತವಾಗಿದೆ. ಹೀಗಾಗಿ, ಅವರ ಈ ಚಿತ್ರದ ಬಗ್ಗೆಯೂ ನಿರೀಕ್ಷೆ ಸೃಷ್ಟಿ ಆಗಿದೆ.

ಇದನ್ನೂ ಓದಿ: ‘ಹಾಲಿವುಡ್​’ನಲ್ಲಿ ಪ್ರೀಮಿಯರ್ ಆಗಲಿದೆ ‘ದೇವರ’; ಅಮೆರಿಕಕ್ಕೆ ಹಾರಲಿದ್ದಾರೆ ಜೂ. ಎನ್​ಟಿಆರ್

‘ದೇವರ’ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಇದೆ. ಇದು ಜೂನಿಯರ್ ಎನ್​ಟಿಆರ್ ಅವರ 30ನೇ ಸಿನಿಮಾ. ಈ ಚಿತ್ರದಲ್ಲಿ ಬಾಲಿವುಡ್​ನ ಜಾನ್ವಿ ಕಪೂರ್ ಹಾಗೂ ಸೈಫ್ ಅಲಿ ಖಾನ್ ನಟಿಸುತ್ತಿದ್ದಾರೆ. ರಮ್ಯಾ ಕೃಷ್ಣ ಕೂಡ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ವಿಎಫ್​ಎಕ್ಸ್​ಗೆ ತಂಡ 140 ಕೋಟಿ ರೂಪಾಯಿ ಖರ್ಚು ಮಾಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ನೂತನ ಎಐಸಿಸಿ ಕಟ್ಟಡಕ್ಕೆ ಇಂದಿರಾ ಗಾಂಧಿ ಭವನ್ ಎಂದು ಹೆಸರಿಡಲಾಗಿದೆ
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ