ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?

‘ದೇವರ: ಚಾಪ್ಟರ್ 1’ ಸಿನಿಮಾ ಸೆಪ್ಟೆಂಬರ್ 27ರಂದು ರಿಲೀಸ್ ಆಯಿತು. ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. 90ರ ದಶಕದಲ್ಲಿ ಸಿನಿಮಾದ ಕಥೆ ಸಾಗುತ್ತದೆ. ಸಿನಿಮಾ ನಾಲ್ಕು ದಿನಗಳಲ್ಲಿ ಮಾಡಿದ ಗಳಿಕೆ ಬಗ್ಗೆ ಇಲ್ಲಿದೆ ವಿವರ.

ಬಾಕ್ಸ್ ಆಫೀಸ್ ಗಳಿಕೆಯಲ್ಲಿ ಹಿಂದೆ ಬಿದ್ದ ‘ದೇವರ’; ಒಟ್ಟಾರೆ ಕಲೆಕ್ಷನ್ ಎಷ್ಟು?
ಜೂನಿಯರ್ ಎನ್​ಟಿಆರ್
Follow us
ರಾಜೇಶ್ ದುಗ್ಗುಮನೆ
|

Updated on: Oct 01, 2024 | 12:10 PM

‘ದೇವರ’ ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ ಮೊದಲ ದಿನ ಅಬ್ಬರದ ಗಳಿಕೆ ಮಾಡಿತ್ತು. ಆದರೆ, ದಿನ ಕಳೆದಂತೆ ಸಿನಿಮಾದ ಗಳಿಕೆ ತಗ್ಗುತ್ತಿದೆ. ಭಾನುವಾರಕ್ಕೆ (ಸೆಪ್ಟೆಂಬರ್ 29) ಹೋಲಿಕೆ ಮಾಡಿದರೆ ಸೋಮವಾರದ (ಸೆಪ್ಟೆಂಬರ್ 30) ಗಳಿಕೆಯಲ್ಲಿ ಶೇ.68 ಇಳಿಕೆ ಕಂಡಿದೆ. ಚಿತ್ರದ ವಿಶ್ವ ಬಾಕ್ಸ್ ಆಫೀಸ್​ ಕಲೆಕ್ಷನ್ 325 ಕೋಟಿ ರೂಪಾಯಿ ಆಗಿದೆ. ಸಿನಿಮಾದ ಒಟ್ಟಾರೆ ಗಳಿಕ 500 ಕೋಟಿ ರೂಪಾಯಿ ದಾಟುವ ನಿರೀಕ್ಷೆ ಇದೆ.

ಬಾಕ್ಸ್ ಆಫೀಸ್ ವರದಿ ಪ್ರಕಾರ ಈ ಚಿತ್ರ ಸೋಮವಾರ 12.5 ಕೋಟಿ ರೂಪಾಯಿ ಗಳಿಸಲಷ್ಟೇ ಶಕ್ಯವಾಗಿದೆ. ತೆಲುಗು, ಕನ್ನಡ, ಹಿಂದಿ, ತಮಿಳು ಹಾಗೂ ಮಲಯಾಳಂ ಭಾಷೆಗಳಿಂದ ಇಷ್ಟು ಗಳಿಕೆ ಆಗಿದೆ. ಭಾನುವಾರ ಈ ಸಿನಿಮಾ ಸುಮಾರು 40 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಸದ್ಯ ಸೋಮವಾರದ ಪರೀಕ್ಷೆಯಲ್ಲಿ ಸಿನಿಮಾ ಸೋತಿದೆ ಎಂದೇ ಹೇಳಬಹುದು.

ಸೋಮವಾರ ತೆಲುಗು ವರ್ಷನ್​ನಿಂದ 8 ಕೋಟಿ ರೂಪಾಯಿ ಹರಿದು ಬಂದಿದೆ. ಭಾನುವಾರ 27 ಕೋಟಿ ರೂಪಾಯಿ ಕಲೆಕ್ಷನ್ ಆಗಿತ್ತು. ಹಿಂದಿಯಿಂದ ಸೋಮವಾರ 4 ಕೋಟಿ ರೂಪಾಯಿ ಹಾಗೂ ಭಾನುವಾರ 10 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಬುಧವಾರ (ಅಕ್ಟೋಬರ್ 2) ಗಾಂಧೀ ಜಯಂತಿ ಪ್ರಯುಕ್ತ ಸಿನಿಮಾ ಮತ್ತಷ್ಟು ಗಳಿಕೆ ಮಾಡೋ ಸಾಧ್ಯತೆ ಇದೆ.

ಇದನ್ನೂ ಓದಿ: Devara Movie Review: ದೇವರ: ಅಲೆ ಮೂಡದ ಸಾಗರ

2018ರಲ್ಲಿ ರಿಲೀಸ್ ಆದ ‘ಅರವಿಂದ ಸಮೇತ’ ಬಳಿಕ ಜೂನಿಯರ್ ಎನ್​ಟಿಆರ್ ಅವರು ಸೋಲೋ ಹೀರೋ ಆಗಿ ಕಾಣಿಸಿಕೊಂಡಿದ್ದು ‘ದೇವರ’ ಸಿನಿಮಾದಲ್ಲಿ. ಈ ಚಿತ್ರಕ್ಕೆ ಕೊರಟಾಲ ಶಿವ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾಗೆ ಎರಡನೇ ಪಾರ್ಟ್​ ಇನ್ನಷ್ಟೇ ಬರಬೇಕಿದೆ. ಸದ್ಯ ಜೂನಿಯರ್ ಎನ್​ಟಿಆರ್ ಅವರು ‘ವಾರ್ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದಲ್ಲಿ ಹೃತಿಕ್ ರೋಷನ್ ಕೂಡ ಇದ್ದು, 2025ರಲ್ಲಿ ಸಿನಿಮಾ ರಿಲೀಸ್ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
‘ದರ್ಶನ್​ಗೆ ಬೇಲ್ ಕೊಡಬಾರದು, ಸುಪ್ರೀಂ ಕೋರ್ಟ್​ಗೆ ಹಾಕ್ತೀವಿ’: ಪರಮೇಶ್ವರ್
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ವಕ್ಫ್ ಹೋರಾಟ ಪ್ರಧಾನಿ ಮೋದಿ ಆರಂಭಿಸಿದ ಕೇಂದ್ರದ ಯೋಜನೆ: ವಿಜಯೇಂದ್ರ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಎಕ್ಸಿಟ್ ಪೋಲ್​ಗಳು ನೀಡುವ ಭವಿಷ್ಯದ ಮೇಲೆ ವಿಶ್ವಾಸವಿಲ್ಲ: ಶಿವಲಿಂಗೇಗೌಡ
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಪರ್ತ್​ ಟೆಸ್ಟ್‌ನಲ್ಲಿ ಕನ್ನಡಿಗ ದೇವದತ್ ಪಡಿಕ್ಕಲ್​ಗೆ ಆಡುವ ಅವಕಾಶ..!
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ
ಬಡವರ ಅನ್ನ ಕಸಿದು ಮಂತ್ರಿಗಳ ಬಂಗ್ಲೆ ರಿನೋವೇಶನ್ ಗೆ ಹಣ ಬಳಕೆ: ಆರ್​. ಅಶೋಕ