AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿ ಪಲ್ಲವಿ ವಿರುದ್ಧ ಧನುಶ್, ಸೂರ್ಯ ಅಭಿಮಾನಿಗಳ ಅಸಮಾಧಾನ

ಸಾಯಿ ಪಲ್ಲವಿಗೆ ದೊಡ್ಡ ಸಂಖ್ಯೆಯ ಅಭಿಮಾನಿಗಳು ದಕ್ಷಿಣ ಭಾರತದಲ್ಲಿದ್ದಾರೆ. ಅವರ ನಟನೆ, ನೃತ್ಯ, ತೆರೆಯಾಚೆಗಿನ ವ್ಯಕ್ತಿತ್ವಕ್ಕೆ ಮಾರು ಹೋಗದವರು ಕಡಿಮೆ. ಆದರೆ ಇದೀಗ ಅವರ ನಟನೆಯ ‘ಅಮರನ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಆದರೆ ಧನುಶ್ ಹಾಗೂ ಸೂರ್ಯ ಅಭಿಮಾನಿಗಳು ಸಾಯಿ ಪಲ್ಲವಿ ಮೇಲೆ ಅಸಮಾಧಾನ ಹೊರಹಾಕಿದ್ದಾರೆ.

ಸಾಯಿ ಪಲ್ಲವಿ ವಿರುದ್ಧ ಧನುಶ್, ಸೂರ್ಯ ಅಭಿಮಾನಿಗಳ ಅಸಮಾಧಾನ
ಮಂಜುನಾಥ ಸಿ.
|

Updated on: Nov 15, 2024 | 6:05 PM

Share

ಸಾಯಿ ಪಲ್ಲವಿ ದಕ್ಷಿಣದ ಸೂಪರ್ ಸ್ಟಾರ್ ನಟಿ. ಅವರ ನಟನೆ, ಡ್ಯಾನ್ಸ್, ತೆರೆಯಾಚೆಗಿನ ವ್ಯಕ್ತಿತ್ವಕ್ಕೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಸರಳ ಸುಂದರಿ ಸಾಯಿ ಪಲ್ಲವಿಯನ್ನು ಅಜಾತಶತ್ರು ಎಂದು ಸಹ ಕರೆಯಲಾಗುತ್ತಿತ್ತು. ಆದರೆ ಇನ್ನು ಮುಂದೆ ಹಾಗೆ ಕರೆಯುವಂತಿಲ್ಲ. ಸಾಯಿ ಪಲ್ಲವಿ ನಟಿಸಿರುವ ತಮಿಳು ಸಿನಿಮಾ ‘ಅಮರನ್’ ಇತ್ತೀಚೆಗೆ ಬಿಡುಗಡೆ ಆಗಿದ್ದು, ಸೂಪರ್-ಡೂಪರ್ ಹಿಟ್ ಆಗಿದೆ. ಸಿನಿಮಾದಲ್ಲಿ ರೆಬೆಕಾ ವರ್ಗೀಸ್ ಎಂಬ ನಿಜ ಮಹಿಳೆಯ ಪಾತ್ರದಲ್ಲಿ ಅವರು ನಟಿಸಿದ್ದಾರೆ. ಸಿನಿಮಾ ಏನೋ ಸೂಪರ್ ಹಿಟ್ ಆಗಿದೆ. ಆದರೆ ತಮಿಳಿನ ಸ್ಟಾರ್ ನಟರಾದ ಧನುಶ್ ಹಾಗೂ ಸೂರ್ಯ ಅಭಿಮಾನಿಗಳು ಸಾಯಿ ಪಲ್ಲವಿ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ.

‘ಅಮರನ್’ ಸಿನಿಮಾ ಬ್ಲಾಕ್ ಬಸ್ಟರ್ ಆದ ಬಳಿಕ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಾಯಿ ಪಲ್ಲವಿ, ‘ಇದು ನಮ್ಮ ಮೊದಲ ತಮಿಳು ಹಿಟ್ ಸಿನಿಮಾ’ ಎಂದಿದ್ದರು. ಇದು ಧನುಶ್ ಹಾಗೂ ಸೂರ್ಯ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಏಕೆಂದರೆ ಈ ಹಿಂದೆ ಸಾಯಿ ಪಲ್ಲವಿ, ಧನುಶ್ ಹಾಗೂ ಸೂರ್ಯ ಜೊತೆಗೆ ತಮಿಳು ಸಿನಿಮಾಗಳಲ್ಲಿ ನಟಿಸಿದ್ದರು. ಆ ಸಿನಿಮಾಗಳನ್ನು ಫ್ಲಾಪ್ ಎಂದು ಪರೋಕ್ಷವಾಗಿ ಸಾಯಿ ಪಲ್ಲವಿ ಕರೆದಿರುವುದು ಧನುಶ್, ಸೂರ್ಯ ಅಭಿಮಾನಿಗಳ ಅಸಮಾಧಾನಕ್ಕೆ ಕಾರಣವಾಗಿದೆ.

ಅಸಲಿಗೆ ‘ಅಮರನ್’ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸಿರುವ ಮೂರನೇ ಸಿನಿಮಾ. ಈ ಮೊದಲು ಸಾಯಿ ಪಲ್ಲವಿ ಪ್ರಧಾನ ಪಾತ್ರದಲ್ಲಿ ನಟಿಸಿದ್ದ ‘ದಿವ್ಯಾ’ ಹಾಗೂ ‘ಗಾರ್ಗಿ’ ಸಿನಿಮಾಗಳು ತಮಿಳಿನಲ್ಲಿಯೂ ಬಿಡುಗಡೆ ಆಗಿದ್ದವಾದರೂ ಇವನ್ನು ತೆಲುಗು ಸಿನಿಮಾಗಳು ಎಂದೇ ಪರಿಗಣಿಸಲಾಗುತ್ತಿದೆ. ಧನುಶ್ ಜೊತೆಗೆ ‘ಮಾರಿ 2’ ಸಿನಿಮಾನಲ್ಲಿ ಸಾಯಿ ಪಲ್ಲವಿ ನಟಿಸಿದ್ದರು. ಆ ಸಿನಿಮಾದ ‘ರೌಡಿ ಬೇಬಿ’ ಹಾಡು ಭಾರಿ ವೈರಲ್ ಆಗಿತ್ತು. ಆದರೆ ‘ಮಾರಿ’ ಸಿನಿಮಾದಷ್ಟು ‘ಮಾರಿ 2’ ಓಡಲಿಲ್ಲ.

ಇದನ್ನೂ ಓದಿ:‘ಅಮರನ್’ ಸಿನಿಮಾ ಮೂಲಕ ಯಶಸ್ಸು ಕಂಡ ಸಾಯಿ ಪಲ್ಲವಿ, ಶಿವಕಾರ್ತಿಕೇಯನ್

ಆ ನಂತರ ಸೂರ್ಯ ಜೊತೆಗೆ ‘ಎನ್​ಜಿಕೆ’ ಸಿನಿಮಾದಲ್ಲಿ ಸಾಯಿ ಪಲ್ಲವಿ ನಟಿಸಿದರು. ಆ ಸಿನಿಮಾ ಭಾರಿ ಪ್ರಚಾರ, ನಿರೀಕ್ಷೆಗಳ ಮೂಲಕ ಅದ್ಧೂರಿಯಾಗಿ ಬಿಡುಗಡೆ ಏನೋ ಆಯ್ತು ಆದರೆ ಬಾಕ್ಸ್ ಆಫೀಸ್​ನಲ್ಲಿ ಧಾರುಣ ಸೋಲು ಕಂಡಿತು. ಆ ಮೂಲಕ ಸತತ ಎರಡು ಸಿನಿಮಾಗಳಲ್ಲಿ ಸಾಯಿ ಪಲ್ಲವಿ ಸೋಲು ಕಂಡರು. ಆ ನಂತರ ‘ಪಾವ ಕಥೆಗಳ್’ ಹೆಸರಿನ ತಮಿಳು ಅಂಥಾಲಜಿ ಸಿನಿಮಾದಲ್ಲಿ ನಟಿಸಿದರು. ಅದು ನೇರ ಒಟಿಟಿಗೆ ಬಿಡುಗಡೆ ಆಯ್ತು. ಅಕ್ಟೋಬರ್ 31 ಕ್ಕೆ ಬಿಡುಗಡೆ ಆದ ‘ಅಮರನ್’ ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಆ ಮೂಲಕ ಸಾಯಿ ಪಲ್ಲವಿಗೆ ತಮಿಳಿನಲ್ಲಿ ದೊಡ್ಡ ಗೆಲುವು ಸಿಕ್ಕಿದೆ.

ಸಾಯಿ ಪಲ್ಲವಿ ಇದೀಗ ಹಿಂದಿಗೂ ಕಾಲಿಟ್ಟಿದ್ದಾರೆ. ಆಮಿರ್ ಖಾನ್ ನಿರ್ಮಾಣ ಮಾಡುತ್ತಿರುವ ಅವರ ಪುತ್ರ ನಾಯಕನಾಗಿ ನಟಿಸುತ್ತಿರುವ ಸಿನಿಮಾದಲ್ಲಿ ಸಾಯಿ ಪಲ್ಲವಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಅದಾದ ಬಳಿಕ ಭಾರತದ ಈವರೆಗಿನ ಅತಿ ದೊಡ್ಡ ಬಜೆಟ್​ನ ಸಿನಿಮಾ ಎನ್ನಲಾಗುತ್ತಿರುವ ರಾಮಾಯಣ ಆಧರಿಸಿದ ಸಿನಿಮಾದಲ್ಲಿ ಸಾಯಿ ಪಲ್ಲವಿ ಸೀತೆಯಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ರಾಮನಾಗಿ ರಣ್​ಬೀರ್ ಕಪೂರ್ ಹಾಗೂ ರಾವಣನಾಗಿ ಯಶ್ ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ