AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಪ್ರಶಸ್ತಿ ವಿವಾದ; ಇನ್ನೂ ಉತ್ತಮ ಚಿತ್ರಗಳಿದ್ದವು ಎಂಬುದನ್ನು ಒಪ್ಪಿಕೊಂಡ ಧನುಷ್

'ರಾಯನ್' ಹಾಗೂ 'ಕ್ಯಾಪ್ಟನ್ ಮಿಲ್ಲರ್' ಚಿತ್ರಗಳ ರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ ಪ್ರತಿಕ್ರಿಯಿಸಿದ್ದಾರೆ. ತಮ್ಮ ಸಿನಿಮಾಗಳಿಗಿಂತ ಬೇರೆ ಉತ್ತಮ ಚಿತ್ರಗಳು ಇದ್ದವು ಎಂಬುದನ್ನು ಒಪ್ಪಿಕೊಂಡಿರುವ ಅವರು, ಟೀಕೆ ಮಾಡುವ ಬದಲು ಒಬ್ಬ ತಮಿಳು ನಟನಿಗೆ ಸಿಕ್ಕ ಗೌರವವನ್ನು ಸಂಭ್ರಮಿಸಿ ಎಂದು ಮನವಿ ಮಾಡಿದ್ದಾರೆ.

ರಾಷ್ಟ್ರ ಪ್ರಶಸ್ತಿ ವಿವಾದ; ಇನ್ನೂ ಉತ್ತಮ ಚಿತ್ರಗಳಿದ್ದವು ಎಂಬುದನ್ನು ಒಪ್ಪಿಕೊಂಡ ಧನುಷ್
ಧನುಷ್
ರಾಜೇಶ್ ದುಗ್ಗುಮನೆ
|

Updated on: Jul 27, 2026 | 8:45 AM

Share

ಮುಖ್ಯಾಂಶಗಳು

  • ರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ ಉತ್ತರ
  • ಬೇರೆ ಒಳ್ಳೆಯ ಸಿನಿಮಾಗಳು ಇದ್ದವು
  • ಟೀಕಾಕಾರರ ವಾದ ಒಪ್ಪಿಕೊಂಡ ನಟ

ರಾಷ್ಟ್ರ ಪ್ರಶಸ್ತಿ ವಿವಾದಕ್ಕೆ ನಟ ಧನುಷ್ (Dhanush) ಕೊನೆಗೂ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಸಿನಿಮಾಗಳ ಆಯ್ಕೆ ಬಗ್ಗೆ ಕೇಳಿಬಂದ ಟೀಕೆಗಳಿಗೆ ಅವರು ನೇರವಾಗಿಯೇ ಉತ್ತರಿಸಿದ್ದಾರೆ. ಈ ಪ್ರಶಸ್ತಿಯನ್ನು ವಿವಾದ ಮಾಡುವ ಬದಲು ತಮಿಳು ನಟನ ಸಾಧನೆಯಾಗಿ ಸಂಭ್ರಮಿಸಿ ಎಂದು ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ. ಅವರ ಈ ಮಾತುಗಳು ಈಗ ತಮಿಳು ಸಿನಿರಂಗದಲ್ಲಿ ಭಾರಿ ಚರ್ಚೆ ಹುಟ್ಟುಹಾಕಿವೆ.

ಇತ್ತೀಚೆಗೆ ನಡೆದ ಸಮಾರಂಭವೊಂದರಲ್ಲಿ ಧನುಷ್ ಈ ಬಗ್ಗೆ ಮುಕ್ತವಾಗಿ ಮಾತನಾಡಿದರು. 2024ರಲ್ಲಿ ಬಿಡುಗಡೆಯಾದ ತಮ್ಮದೇ ನಿರ್ದೇಶನದ ‘ರಾಯನ್’ ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಸಿನಿಮಾ ರಾಷ್ಟ್ರ ಪ್ರಶಸ್ತಿ ಒಲಿದಿದೆ. ಹಾಗೆಯೇ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ನಟನೆಗೆ ವಿಶೇಷ ತೀರ್ಪುಗಾರರ ಪ್ರಶಸ್ತಿ ಸಿಕ್ಕಿದೆ. ಒಂದೇ ವರ್ಷದಲ್ಲಿ ಎರಡು ದೊಡ್ಡ ಗೌರವಗಳು ಇವರ ಮುಡಿಗೇರಿವೆ.

ಆದರೆ ಈ ಪ್ರಶಸ್ತಿ ಪ್ರಕಟವಾದ ಬೆನ್ನಲ್ಲೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ನಡೆದಿತ್ತು. ‘ರಾಯನ್’ ಚಿತ್ರಕ್ಕಿಂತ ‘ಮಹಾರಾಜ’ ಮತ್ತು ‘ಮೆಯ್ಯಳಗನ್’ ಸಿನಿಮಾಗಳು ಉತ್ತಮವಾಗಿದ್ದವು ಎಂದು ಸಿನಿಪ್ರೇಮಿಗಳು ವಾದಿಸಿದ್ದರು. ಈ ಟೀಕೆಗಳನ್ನು ಧನುಷ್ ಒಪ್ಪಿಕೊಂಡಿದ್ದಾರೆ. ರಾಯನ್ ಚಿತ್ರಕ್ಕಿಂತ ಖಂಡಿತವಾಗಿಯೂ ಬೇರೆ ಒಳ್ಳೆಯ ಸಿನಿಮಾಗಳು ಇದ್ದವು ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ಧನುಷ್ ತಮ್ಮ ಹಳೆಯ ಸಿನಿಮಾಗಳನ್ನು ನೆನಪಿಸಿಕೊಂಡಿದ್ದಾರೆ. ‘ಪುದುಪೇಟ್ಟೈ’, ‘ವಡಾ ಚೆನ್ನೈ’, ‘ಕರ್ಣನ್’ ಮತ್ತು ‘ಮರಿಯನ್’ ಚಿತ್ರಗಳಿಗೆ ಪ್ರಶಸ್ತಿ ಸಿಗಬೇಕಿತ್ತು ಎಂದು ಅಭಿಮಾನಿಗಳು ಅಂದುಕೊಂಡಿದ್ದರು. ಆದರೆ ಆ ಚಿತ್ರಗಳಿಗೆ ಪ್ರಶಸ್ತಿ ಸಿಗಲಿಲ್ಲ. ಆಗ ಯಾರೂ ಕೂಡ ಧ್ವನಿ ಎತ್ತಲಿಲ್ಲ ಎಂದು ಧನುಷ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ಮೈನಾ’ ಸೀರಿಯಲ್ ವಿಶೇಷ ಸಂಚಿಕೆಗಳು; ಕಬಡ್ಡಿ ಅಖಾಡದಲ್ಲಿ ಧೂಳೆಬ್ಬಿಸಿದ ಧನುಷ್

‘ಕೆಲವೊಮ್ಮೆ ನಾವು ಎಷ್ಟು ಶ್ರಮ ಪಟ್ಟರೂ ಪ್ರಶಸ್ತಿಗಳು ಸಿಗುವುದಿಲ್ಲ. ಆದರೆ ಈ ಬಾರಿ ಅದೃಷ್ಟ ಒಲಿದು ಬಂದಿದೆ. ಸಿನಿಮಾ ಹೇಗಿದೆ ಎನ್ನುವುದಕ್ಕಿಂತ ನನ್ನ ಶ್ರಮ ಪ್ರಾಮಾಣಿಕವಾಗಿತ್ತು. ಒಬ್ಬ ತಮಿಳು ನಟನಿಗೆ ಎರಡು ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದನ್ನು ಎಲ್ಲರೂ ಒಟ್ಟಾಗಿ ಸಂಭ್ರಮಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ