Dhanush: ವಿಚ್ಛೇದನದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಧನುಷ್​

ಧನುಷ್ ಅವರ ಮತ್ತೊಂದು ಸಿನಿಮಾ ಘೋಷಣೆಗೆ ರೆಡಿ ಇದೆ ಎನ್ನುವ ಮಾಹಿತಿ ಕೇಳಿಬಂದಿದೆ. ಅದು ಖ್ಯಾತ ನಿರ್ದೇಶಕ ಸುಕುಮಾರ್ ಜತೆ ಅನ್ನೋದು ವಿಶೇಷ.

Dhanush: ವಿಚ್ಛೇದನದ ಬೆನ್ನಲ್ಲೇ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ ಧನುಷ್​
ಧನುಷ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Jan 21, 2022 | 9:37 PM

ಧನುಷ್ (Dhanush)​ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಪತ್ನಿ ಐಶ್ವರ್ಯಾ ರಜನಿಕಾಂತ್ (Aishwarya Rajinikanth)​ ಜತೆ ವಿಚ್ಛೇದನ ಪಡೆಯುವ ಬಗ್ಗೆ ಅವರು ಅಧಿಕೃತ ಘೋಷಣೆ ಮಾಡಿದ್ದರು. ಇದು ಸಾಕಷ್ಟು ಜನರಿಗೆ ಅಚ್ಚರಿ ಮೂಡಿಸಿತ್ತು. ಈ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ. ಧನುಷ್​ ತಂದೆ ಇದೊಂದು ಜಗಳ ಅಷ್ಟೇ ಎಂದು ಹೇಳಿಕೊಂಡಿದ್ದಾರೆ. ಈ ಬಗ್ಗೆ ಗೊಂದಲ ಮುಂದುವರಿದಿದೆ. ಈ ಮಧ್ಯೆ ಧನುಷ್​ ಅಭಿಮಾನಿಗಳಿಗೆ ಸಿಹಿ ಸುದ್ದಿ ಒಂದು ಸಿಕ್ಕಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ಹಾಗಾದರೆ ಏನದು ವಿಚಾರ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಧನುಷ್ ಈಗಾಗಲೇ ತಮಿಳು, ಇಂಗ್ಲಿಷ್, ಮಲಯಾಳಂ​ ಸಿನಿಮಾಗಳಲ್ಲಿ ನಟಿಸಿ ಭೇಷ್​ ಎನಿಸಿಕೊಂಡಿದ್ದಾರೆ. ಇತ್ತೀಚೆಗೆ ಒಟಿಟಿಯಲ್ಲಿ ರಿಲೀಸ್​ ಆದ ‘ಅತರಂಗಿ ರೇ’ ಸಿನಿಮಾ ಮೂಲಕ ಅವರು ಮತ್ತೆ ಬಾಲಿವುಡ್​ಗೆ ಮರಳಿದ್ದಾರೆ. ಹಲವು ಸಿನಿಮಾಗಳು ಅವರ ಕೈಯಲ್ಲಿವೆ. ಇತ್ತೀಚೆಗೆ ಅವರು ‘ವಾತಿ’ ಸಿನಿಮಾದಲ್ಲಿ ನಟಿಸುವುದಾಗಿ ಘೋಷಣೆ ಮಾಡಿದ್ದರು. ಈಗ ಅವರ ಮತ್ತೊಂದು ಸಿನಿಮಾ ಘೋಷಣೆಗೆ ರೆಡಿ ಇದೆ ಎನ್ನುವ ಮಾಹಿತಿ ಕೇಳಿಬಂದಿದೆ. ಅದು ಖ್ಯಾತ ನಿರ್ದೇಶಕ ಸುಕುಮಾರ್ ಜತೆ ಅನ್ನೋದು ವಿಶೇಷ.

ಕಳೆದ ವರ್ಷಾಂತ್ಯಕ್ಕೆ ತೆರೆಗೆ ಬಂದ ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಚಿತ್ರಕ್ಕೆ ಸುಕುಮಾರ್​ ಆ್ಯಕ್ಷನ್​ ಕಟ್​ ಹೇಳಿದ್ದರು. ಈ ಚಿತ್ರ 300 ಕೋಟಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಈ ಸಿನಿಮಾ ಬಳಿಕ ಸುಕುಮಾರ್ ‘ಪುಷ್ಪ 2’ ಚಿತ್ರದಲ್ಲಿ ಬ್ಯುಸಿ ಆಗಿದ್ದಾರೆ. ಈಗ ಹೊಸ ಸಿನಿಮಾದ ಕಥೆಯನ್ನು ಧನುಷ್​ಗೆ ಸುಕುಮಾರ್​ ಅವರು ಹೇಳಿದ್ದಾರೆ. ಇದನ್ನು ಧನುಷ್​ ಇಷ್ಟಪಟ್ಟಿದ್ದಾರೆ ಎನ್ನಲಾಗಿದೆ.

ಹಾಗಾದರೆ ಈ ಸಿನಿಮಾ ಸೆಟ್ಟೇರೋದು ಯಾವಾಗ? ಆ ಪ್ರಶ್ನೆಗೆ ಸದ್ಯಕ್ಕೆ ಉತ್ತರ ಸಿಕ್ಕಿಲ್ಲ. ಧನುಷ್​ ಹಾಗೂ ಸುಕುಮಾರ್​ ಇಬ್ಬರೂ ತಮ್ಮದೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಗಳ ಕೆಲಸಗಳು ಪೂರ್ಣಗೊಂಡ ನಂತರದಲ್ಲಿ ಅವರು ಹೊಸ ಸಿನಿಮಾಗಾಗಿ ಒಂದಾಗಲಿದ್ದಾರೆ ಎನ್ನಲಾಗಿದೆ.

ಧನುಷ್​ ಇತ್ತೀಚೆಗೆ ಹೊಸ ಸಿನಿಮಾ ಒಪ್ಪಿಕೊಂಡಿದ್ದರು. ತಮಿಳು ಹಾಗೂ ತೆಲುಗು ಎರಡೂ ಭಾಷೆಗಳಲ್ಲಿ ಈ ಸಿನಿಮಾ ಸಿದ್ಧಗೊಳ್ಳುತ್ತಿದೆ. ಇದಕ್ಕೆ ತಮಿಳಿನಲ್ಲಿ ‘ವಾತಿ’ ಹಾಗೂ ತೆಲುಗಿನಲ್ಲಿ ‘ಸರ್’ ಎಂದು ಹೆಸರಿಡಲಾಗಿದೆ.  ಸಿತಾರಾ ಎಂಟರ್​ಟೇನ್​ಮೆಂಟ್​​ನ​ ಸೂರ್ಯದೇವ ನಾಗವಂಶಿ ಹಾಗೂ ಫಾರ್ಚೂನ್ ಫೋರ್​ ಸಿನೇಮಾಸ್​​ನ ಸಾಯಿ ಸೌಜನ್ಯ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ‘ರಂಗ್​ ದೇ’ ಖ್ಯಾತಿಯ ವೆಂಕಿ ಅಟ್ಲುರಿ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

ಇದನ್ನೂ ಓದಿ: ‘ಧನುಷ್​ ಒಳ್ಳೆಯ ಅಳಿಯ’ ಎಂದು ಮಗಳ ಗಂಡನನ್ನು ರಜನಿಕಾಂತ್​ ಹೊಗಳಿದ್ದ ವಿಡಿಯೋ ವೈರಲ್​

ಧನುಷ್-ಐಶ್ವರ್ಯಾ ನಡುವೆ ಹೈದರಾಬಾದ್​ನಲ್ಲಿ ನಡೆದಿದ್ದೇನು? ಇಲ್ಲಿದೆ ಇನ್ಸೈಡ್​ ಮಾಹಿತಿ

Published On - 9:36 pm, Fri, 21 January 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್