AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ

ಧನುಷ್ ಅವರ ಹೊಸ ಸಿನಿಮಾಗೆ ‘ಓಂ’ ಎಂದು ಶೀರ್ಷಿಕೆ ಇಡಲಾಗಿದೆ. ಈ ಚಿತ್ರದ ಟೀಸರ್ ನೋಡಿದವರಿಗೆ ‘ಪುಷ್ಪ’ ಸಿನಿಮಾ ನೆನಪಾಗಿದೆ. ಈ ಹೋಲಿಕೆಗಳ ಬಗ್ಗೆ ಚಿತ್ರದ ನಿರ್ದೇಶಕ ರಾಜ್​ಕುಮಾರ್ ಪೆರಿಯಸಾಮಿ ಪ್ರತಿಕ್ರಿಯಿಸಿದ್ದಾರೆ. ಅಕ್ಟೋಬರ್ 16ರಂದು ಅದ್ಧೂರಿಯಾಗಿ ‘ಓಂ’ ಸಿನಿಮಾ ಬಿಡುಗಡೆ ಆಗಲಿದೆ.

ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಸಿನಿಮಾದ ಕಥೆ? ಸ್ಪಷ್ಟನೆ ನೀಡಿದ ನಿರ್ದೇಶಕ
Dhanush, Allu Arjun
ಮದನ್​ ಕುಮಾರ್​
|

Updated on: Jun 19, 2026 | 11:02 PM

Share

ಕಾಲಿವುಡ್ ಸ್ಟಾರ್ ನಟ ಧನುಷ್ (Dhanush) ಅಭಿನಯದ ಮುಂಬರುವ ಬಹುನಿರೀಕ್ಷಿತ ಚಿತ್ರ ‘D55’ ಸಿನಿಮಾಗೆ ಟೈಟಲ್ ಅನಾವರಣ ಆಗಿದೆ. ಈ ಚಿತ್ರದ ಗ್ಲಿಂಪ್ಸ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಚಿತ್ರಕ್ಕೆ ‘ಓಂ’ (OM) ಎಂದು ಹೆಸರಿಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಮೊದಲ ಝಲಕ್ ಭಾರಿ ಸದ್ದು ಮಾಡುತ್ತಿದೆ. ಆದರೆ, ಈ ಗ್ಲಿಂಪ್ಸ್ ನೋಡಿದ ನೆಟ್ಟಿಗರು ಹಾಗೂ ಸಿನಿಪ್ರಿಯರು, ಧನುಷ್ ಅವರ ಈ ಹೊಸ ಚಿತ್ರವನ್ನು ಅಲ್ಲು ಅರ್ಜುನ್ ನಟನೆಯ ಬ್ಲಾಕ್‌ಬಸ್ಟರ್ ಸಿನಿಮಾ ‘ಪುಷ್ಪ’ (Pushpa) ಚಿತ್ರಕ್ಕೆ ಹೋಲಿಸಲು ಶುರು ಮಾಡಿದ್ದಾರೆ.

ಚಿತ್ರತಂಡ ಬಿಡುಗಡೆ ಮಾಡಿರುವ ‘ಓಂ’ ಟೈಟಲ್ ಗ್ಲಿಂಪ್ಸ್‌ನಲ್ಲಿ ಧನುಷ್ ಗಡ್ಡ ಬಿಟ್ಟು, ರಗಡ್ ಲುಕ್‌ನಲ್ಲಿ ಕಾಡಿನ ನಡುವೆ ಕಾಡುಕಳ್ಳನಂತೆ ಕಾಣಿಸಿಕೊಂಡಿದ್ದಾರೆ. ಜೊತೆಗೆ ಈ ವಿಡಿಯೋದಲ್ಲಿ ರಕ್ತಚಂದನದ ದೃಶ್ಯಗಳೂ ಇವೆ. ‘ಪುಷ್ಪ’ ಸಿನಿಮಾ ಸಂಪೂರ್ಣವಾಗಿ ರಕ್ತಚಂದನದ ಕಳ್ಳಸಾಗಣೆ ಹಿನ್ನೆಲೆಯನ್ನು ಹೊಂದಿದ್ದರಿಂದ, ಪ್ರೇಕ್ಷಕರು ತಕ್ಷಣವೇ ‘ಓಂ’ ಚಿತ್ರವನ್ನು ‘ಪುಷ್ಪ’ಗೆ ಹೋಲಿಸಿದ್ದಾರೆ.

ಈ ಕುರಿತು ಸಂದರ್ಶನವೊಂದರಲ್ಲಿ ಪ್ರಶ್ನಿಸಿದಾಗ ಉತ್ತರಿಸಿದ ನಿರ್ದೇಶಕ ರಾಜ್​ಕುಮಾರ್ ಪೆರಿಯಸಾಮಿ, ‘ನಾವು ಚಿತ್ರದ ಕೇವಲ ಒಂದು ಸಣ್ಣ ದೃಶ್ಯವನ್ನು ಮಾತ್ರ ತೋರಿಸಿದ್ದೇವೆ. ‘ಓಂ’ ಸಿನಿಮಾದಲ್ಲಿ ಇನ್ನು ಸಾಕಷ್ಟು ವಿಭಿನ್ನ ಅಂಶಗಳಿವೆ. ಸಿನಿಮಾ ನೋಡಿದಾಗ ಮಾತ್ರ ಅದು ಸಂಪೂರ್ಣವಾಗಿ ತಿಳಿಯುತ್ತದೆ. ಟೈಟಲ್ ಟೀಸರ್ ನೋಡಿದಾಗ ಪ್ರತಿಯೊಬ್ಬರಿಗೂ ಅವರದ್ದೇ ಆದ ವಿಭಿನ್ನ ದೃಷ್ಟಿಕೋನ ಮೂಡುತ್ತದೆ. ನಾವು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಲು ಮತ್ತು ಚರ್ಚೆ ಹುಟ್ಟುಹಾಕಲು ಮಾತ್ರ ಇದನ್ನು ಬಿಡುಗಡೆ ಮಾಡಿದ್ದೇವೆ’ ಎಂದು ಸ್ಪಷ್ಟನೆ ನೀಡಿದ್ದಾರೆ.

‘ಪುಷ್ಪ’ ಸಿನಿಮಾ ರೀತಿಯೇ ‘ಓಂ’ ಚಿತ್ರ ಕೂಡ ಭರ್ಜರಿ ಆ್ಯಕ್ಷನ್ ದೃಶ್ಯಗಳನ್ನು ಹೊಂದಿರಲಿದ್ದು, ಎರಡು ಭಾಗಗಳಲ್ಲಿ ತೆರೆಗೆ ಬರಲಿದೆ. ಮೊದಲ ಭಾಗಕ್ಕೆ ‘ಓಂ ಚಾಪ್ಟರ್ 1: ಉಧಿರಂ – ದಿ ಬ್ಲಡ್ ವುಡ್’ ಎಂದು ಹೆಸರಿಡಲಾಗಿದೆ. ಚಿತ್ರವು ಅಕ್ಟೋಬರ್ 16ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಟೀಸರ್ ಮತ್ತು ಶೀರ್ಷಿಕೆಯಿಂದ ಕೌತುಕ ಮೂಡಿದೆ.

ಇದನ್ನೂ ಓದಿ: ಅಂದು ಶಿವಣ್ಣ, ಇಂದು ಧನುಷ್; ‘ಓಂ’ ಶೀರ್ಷಿಕೆಯಲ್ಲಿ ಹೊಸ ಸಿನಿಮಾ ಘೋಷಣೆ

‘ಓಂ’ ಚಿತ್ರದಲ್ಲಿ ಧನುಷ್ ಜೊತೆಗೆ ಮಲಯಾಳಂ ಸ್ಟಾರ್ ನಟ ಮಮ್ಮುಟ್ಟಿ ಅವರು ಪ್ರಮುಖ ಪಾತ್ರದಲ್ಲಿದ್ದರೆ, ಸಾಯಿ ಪಲ್ಲವಿ ಹಾಗೂ ಶ್ರೀಲೀಲಾ ನಾಯಕಿಯರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸಾಯಿ ಅಭ್ಯಂಕರ್ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ‘ಅಮರನ್’ ಖ್ಯಾತಿಯ ರಾಜ್​ಕುಮಾರ್ ಪೆರಿಯಸಾಮಿ ಅವರು ನಿರ್ದೇಶನ ಮಾಡಿರುವುದರಿಂದ ಹೈಪ್ ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ