AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ ಧನುಷ್; ನಾಲ್ಕು ವರ್ಷ ಸಖತ್ ಬ್ಯುಸಿ

ತಮಿಳುನಾಡು ರಾಜಕೀಯಕ್ಕೆ ನಟ ಧನುಷ್ ಪ್ರವೇಶ ಮಾಡಲಿದ್ದಾರೆ ಎಂಬ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿ ಹರಿದಾಡುತ್ತಿವೆ. ಆದರೆ ಅವರ ಕೈಯಲ್ಲಿ ಸದ್ಯ ಸಾಲು ಸಾಲು ಸಿನಿಮಾಗಳಿದ್ದು, ಮುಂದಿನ 3-4 ವರ್ಷಗಳ ಕಾಲ ಬ್ಯುಸಿಯಾಗಿದ್ದಾರೆ. ಹೀಗಾಗಿ ಧನುಷ್ ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಸದ್ಯಕ್ಕೆ ರಾಜಕೀಯಕ್ಕೆ ಬರಲ್ಲ ಧನುಷ್; ನಾಲ್ಕು ವರ್ಷ ಸಖತ್ ಬ್ಯುಸಿ
ಧನುಷ್
ರಾಜೇಶ್ ದುಗ್ಗುಮನೆ
|

Updated on:Oct 29, 2026 | 3:13 PM

Share

ತಮಿಳುನಾಡು ರಾಜಕೀಯದಲ್ಲಿ ಈಗ ಹೊಸ ಸಂಚಲನ ಶುರುವಾಗಿದೆ. ನಟ ವಿಜಯ್ ಮೊದಲ ಯತ್ನದಲ್ಲೇ ಮುಖ್ಯಮಂತ್ರಿಯಾಗಿದ್ದಾರೆ. ಇದು ಅನೇಕ ಸಿನಿಮಾ ನಾಯಕರಿಗೆ ಪ್ರೇರಣೆ ನೀಡಿದೆ. ಹಲವು ಹೊಸ ನಟರು ರಾಜಕೀಯ ಕನಸು ಕಾಣುತ್ತಿದ್ದಾರೆ. ಇದೇ ಸಾಲಿನಲ್ಲಿ ಧನುಷ್ ಹೆಸರು ಕೇಳಿಬರುತ್ತಿದೆ. ಆದರೆ, ಅವರು ಸದ್ಯಕ್ಕೆ ರಾಜಕೀಯಕ್ಕೆ ಎಂಟ್ರಿ ಕೊಡೋದು ಅನುಮಾನ ಎಂಬ ಮಾತು ಕೇಳಿ ಬಂದಿದೆ.

ಧನುಷ್‌ ರಾಜಕೀಯ ಪ್ರವೇಶದ ಬಗ್ಗೆ ಚರ್ಚೆಗಳು ಜೋರಾಗಿವೆ. ಅವರು ಅಭಿಮಾನಿ ಬಳಗದ ಮೂಲಕ ಸಾಮಾಜಿಕ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಮಧ್ಯೆ ಅವರು ಬಿಜೆಪಿ ಹೈಕಮಾಂಡ್ ಅವರೊಂದಿಗೆ ಮಾತುಕತೆ ನಡೆಸಿದೆ ಎನ್ನಲಾಗಿದೆ. ಅವರನ್ನು ಎಐಎಡಿಎಂಕೆ ಪಕ್ಷಕ್ಕೆ ಕರೆತರಲು ಯತ್ನ ನಡೆಯುತ್ತಿದೆ ಎಂದು ವರದಿ ಆಗಿದೆ. ಆದರೆ, ಅವರ ರಾಜಕೀಯ ಸಿದ್ಧತೆ ನಿಧಾನಗತಿಯಲ್ಲಿ ಇದೆ.

ಧನುಷ್ ಅವರ ಮುಂದಿನ ಸಿನಿಮಾ ‘ಓಂ’. ಈ ಸಿನಿಮಾವನ್ನು ರಾಜ್‌ಕುಮಾರ್ ಪೆರಿಯಸಾಮಿ ನಿರ್ದೇಶಿಸಿದ್ದಾರೆ. ಈ ಸಿನಿಮಾ ನವೆಂಬರ್​​ನಲ್ಲಿ ತೆರೆಗೆ ಬರಲಿದೆ. ಈ ಚಿತ್ರದ ಪ್ರಚಾರದ ಮಧ್ಯೆಯೇ ನಟ ಧನುಷ್ ಈಗಾಗಲೇ ಹೊಸ ಸಿನಿಮಾದ ಶೂಟಿಂಗ್ ಆರಂಭಿಸಿದ್ದಾರೆ. ಅವರ ಕೈಯಲ್ಲಿ ಪ್ರಸ್ತುತ ಐದು ಸಿನಿಮಾಗಳಿವೆ ಎನ್ನಲಾಗಿದೆ.

ಇದನ್ನೂ ಓದಿ: 42 ವರ್ಷ ವಯಸ್ಸಿನ ಧನುಷ್​ಗೆ 20ರ ಪ್ರಾಯದ ಸಾರಾ ಅರ್ಜುನ್ ಜೋಡಿ

ಈ ಐದು ಸಿನಿಮಾಗಳ ಚಿತ್ರೀಕರಣಕ್ಕೆ ಮೂರರಿಂದ ನಾಲ್ಕು ವರ್ಷ ಬೇಕಾಗಬಹುದು. ಧನುಷ್ ಹೀಗಾಗಿ ಅವರಿಗೆ ರಾಜಕೀಯಕ್ಕೆ ನೀಡಲು ಸಮಯ ಸಿಗುವುದು ಕಷ್ಟ. ಸಿನಿಮಾ ಕೆಲಸಗಳ ನಡುವೆ ರಾಜಕೀಯ ಸಿದ್ಧತೆ ಕಷ್ಟಕರವಾಗಿದೆ. ಪ್ರಸ್ತುತ ಸನ್ನಿವೇಶದಲ್ಲಿ ಅವರ ರಾಜಕೀಯ ಪ್ರವೇಶ ಅನುಮಾನವಾಗಿದೆ.

ಧನುಷ್ ಇತ್ತೀಚೆಗೆ ಸಾರ್ವಜನಿಕರೊಂದಿಗೆ ಸಭೆ ನಡೆಸಿದ್ದರು. ಅವರು ಅಭಿಮಾನಿಗಳನ್ನೂ ಭೇಟಿಯಾಗಿ ಸಮಾಲೋಚನೆ ನಡೆಸಿದ್ದರು. ಹೀಗಾಗಿ ಅವರು ಶೀಘ್ರದಲ್ಲೇ ರಾಜಕೀಯಕ್ಕೆ ಬರುತ್ತಾರೆ ಎಂದು ಭಾವಿಸಲಾಗಿತ್ತು. ಆದರೆ ಅವರ ಸಿನಿಮಾ ಬ್ಯುಸಿ ಶೆಡ್ಯೂಲ್ ಇದನ್ನು ತಡೆದಿದೆ. ಮುಂದಿನ ದಿನಗಳಲ್ಲಿ ಅವರ ನಿರ್ಧಾರ ಬದಲಾಗುವ ಸಾಧ್ಯತೆಯೂ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 3:05 pm, Thu, 29 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More