Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ.

Dhanush: ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ‘D50’ ಲುಕ್​​ ರಿವೀಲ್ ಮಾಡಿದ ನಟ ಧನುಷ್
ರೆಹಮಾನ್- ಧನುಷ್

Updated on: Jul 20, 2023 | 11:56 AM

ನಟ ಧನುಷ್ (Dhanush) ಅವರು ಒಂದೇ ರೀತಿಯ ಪಾತ್ರಕ್ಕೆ ಕಟ್ಟುಬಿದ್ದವರಲ್ಲ. ಅವರು ಚಿತ್ರದಿಂದ ಚಿತ್ರಕ್ಕೆ ಹೊಸ ಅವತಾರ ತಾಳುತ್ತಾರೆ. ಸದ್ಯ ‘ಕ್ಯಾಪ್ಟನ್ ಮಿಲ್ಲರ್’ (Captain Miller Movie) ಸಿನಿಮಾದ ಶೂಟಿಂಗ್​ನಲ್ಲಿ ಅವರು ಬ್ಯುಸಿ ಇದ್ದಾರೆ. ಇದರ ಜೊತೆಗೆ ಮುಂದಿನ ಚಿತ್ರ ‘D50’ ಕೆಲಸದಲ್ಲೂ ಅವರು ಬ್ಯುಸಿ ಆಗಿದ್ದಾರೆ. ಇತ್ತೀಚೆಗೆ ಅವರು ಇನ್​ಸ್ಟಾಗ್ರಾಮ್ ಲೈವ್​ ಬಂದಿದ್ದರು. ಈ ವೇಳೆ ಅವರು ಅವರ ಮುಂದಿನ ಸಿನಿಮಾದ ಲುಕ್ ರಿವೀಲ್ ಮಾಡಲಾಗಿದೆ. ಇದು ಎಲ್ಲರ ಗಮನ ಸೆಳೆಯುತ್ತಿದೆ.

ಧನುಷ್ ಹಾಗೂ ಎಆರ್​ ರೆಹಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು. 2013ರಲ್ಲಿ ರಿಲೀಸ್ ಆದ ‘ಮರಿಯಾನ್’ ಚಿತ್ರಕ್ಕೆ 10 ವರ್ಷಗಳ ಸಂಭ್ರಮ. ಇದರ ನೆನಪನ್ನು ಧನುಷ್ ಹಾಗೂ ರೆಹಮಾನ್ ಆಚರಿಸಿಕೊಂಡಿದ್ದರು. ಧನುಷ್ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದ ಈ ಚಿತ್ರಕ್ಕೆ ರೆಹಮಾನ್ ಅವರು ಸಂಗೀತ ಸಂಯೋಜನೆ ಮಾಡಿದ್ದರು. ಇಬ್ಬರೂ ಲೈವ್ ಬಂದು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ವೇಳೆ ಧನುಷ್ ಅವರ ಲುಕ್ ಗಮನ ಸೆಳೆದಿದೆ.

ಧನುಷ್ ಅವರು ಇತ್ತೀಚೆಗೆ ತಿರುಪತಿಗೆ ತೆರಳಿದ್ದರು. ಈ ವೇಳೆ ಬಾಲ್ಡ್ ಲುಕ್​ನಲ್ಲಿ ಅವರು ಗಮನ ಸೆಳೆದಿದ್ದರು. ಇದು ಅವರ ಮುಂದಿನ ಸಿನಿಮಾ ಲುಕ್ ಎಂದೇ ಎಲ್ಲರೂ ಭಾವಿಸಿದ್ದಾರೆ. ಆದರೆ, ಈ ಬಗ್ಗೆ ಅವರ ಕಡೆಯಿಂದ ಯಾವುದೇ ಅಧಿಕೃತ ಘೋಷಣೆ ಆಗಿಲ್ಲ. ಈಗ ಅವರು ಲೈವ್ ಬಂದ ಸಂದರ್ಭದಲ್ಲಿ ತಲೆಗೆ ಟೋಪಿ ಹಾಕಿದ್ದರು. ಸದ್ಯ ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ಇದನ್ನೂ ಓದಿ: ‘ಕ್ಯಾಪ್ಟನ್ ಮಿಲ್ಲರ್’ ಫಸ್ಟ್ ಲುಕ್ ರಿಲೀಸ್; ಧನುಶ್ ಲುಕ್ ನೋಡಿ ಶಿವಣ್ಣನ ಮೆಚ್ಚುಗೆ

‘ಕ್ಯಾಪ್ಟನ್ ಮಿಲ್ಲರ್’ ಚಿತ್ರದ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ಈ ಚಿತ್ರ ಸ್ವಾತಂತ್ರ್ಯ ಪೂರ್ವ ಕಥೆಯನ್ನು ಹೊಂದಿದೆ. ಈ ಚಿತ್ರದಲ್ಲಿ ಕನ್ನಡದ ನಟ ಶಿವರಾಜ್​ಕುಮಾರ್ ಅಭಿನಯಿಸಿದ್ದಾರೆ. ಇಷ್ಟು ದಿನ ಕನ್ನಡ ಸಿನಿಮಾಗಳ ಮೂಲಕ ಗಮನ ಸೆಳೆದಿದ್ದ ಶಿವಣ್ಣ ಈಗ ತಮಿಳು ಸಿನಿಮಾಗಳಲ್ಲೂ ನಟಿಸಿದ್ದಾರೆ. ಈ ಕಾರಣಕ್ಕೂ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us