AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಥಗ್ ಲೈಫ್’ ಸಿನಿಮಾ ಮೊದಲ ದಿನದ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’

ಜೂನ್ 20 ರಂದು ಬಿಡುಗಡೆಯಾದ ಧನುಷ್ ನಟನೆಯ ‘ಕುಬೇರ’ ಮತ್ತು ಆಮಿರ್ ಖಾನ್ ನಟನೆಯ ‘ಸಿತಾರೆ ಜಮೀನ್ ಪರ್’ ಚಿತ್ರಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಪ್ರದರ್ಶನ ನೀಡಿವೆ. ಈ ಎರಡೂ ಚಿತ್ರಗಳು ಉತ್ತಮ ವಿಮರ್ಶೆಗಳನ್ನು ಪಡೆದುಕೊಂಡಿವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಉತ್ತಮ ಗಳಿಕೆ ಮಾಡುವ ನಿರೀಕ್ಷೆಯಿದೆ.

‘ಥಗ್ ಲೈಫ್’ ಸಿನಿಮಾ ಮೊದಲ ದಿನದ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’
 ‘ಥಗ್ ಲೈಫ್’ ಸಿನಿಮಾ ಗಳಿಕೆ ಹಿಂದಿಕ್ಕಲು ವಿಫಲವಾದ ‘ಕುಬೇರ’, ‘ಸಿತಾರೇ ಜಮೀನ್ ಪರ್’
ರಾಜೇಶ್ ದುಗ್ಗುಮನೆ
|

Updated on: Jun 21, 2025 | 7:01 AM

Share

ಈ ಮೊದಲು ರಿಲೀಸ್ ಆಗಿ ಫ್ಲಾಪ್ ಎನಿಸಿಕೊಂಡಿದ್ದ ‘ಥಗ್ ಲೈಫ್’ (Thuf Life Movie) ಚಿತ್ರ ಮೊದಲ ದಿನ 15 ಕೋಟಿ ರೂಪಾಯಿ ಗಳಿಕೆ ಮಾಡಿತ್ತು. ಈ ಸಿನಿಮಾ ನಂತರದ ದಿನಗಳಲ್ಲಿ ಹೀನಾಯ ಕಲೆಕ್ಷನ್ ಮಾಡಿತು. ಈ ಚಿತ್ರ ಇನ್ನೂ 50 ಕೋಟಿ ರೂಪಾಯಿ ಗಳಿಸಲು ಸಾಧ್ಯವಾಗಿಲ್ಲ. ಈ ಸಿನಿಮಾ ರಿಲೀಸ್ ಆದ ಎರಡು ವಾರಗಳ ಬಳಿಕ ಎರಡು ಸಿನಿಮಾಗಳು ರಿಲೀಸ್ ಆಗಿವೆ. ಜೂನ್ 20ರಂದು ಧನುಶ್ ನಟನೆಯ ‘ಕುಬೇರ’ ಹಾಗೂ ಆಮಿರ್ ಖಾನ್ ಅಭಿನಯದ ‘ಸಿತಾರೇ ಜಮೀನ್ ಪರ್’ ಸಿನಿಮಾಗಳು ತೆರೆಗೆ ಬಂದಿವೆ.  ಈ ಎರಡೂ ಸಿನಿಮಾಗಳ ಮೊದಲ ದಿನದ ಕಲೆಕ್ಷನ್​ನಲ್ಲಿ ‘ಥಗ್ ಲೈಫ್’ ಚಿತ್ರವನ್ನು ಹಿಂದಿಕ್ಕಿಲ್ಲ.

‘ಕುಬೇರ’ ಸಿನಿಮಾ ಗಳಿಕೆ

ಧನುಶ್, ರಶ್ಮಿಕಾ ಮಂದಣ್ಣ, ನಾಗಾರ್ಜುನ ಮೊದಲಾದವರು ನಟಿಸಿರೋ ‘ಕುಬೇರ’ ಸಿನಿಮಾ ಜೂನ್ 20ರಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ರಿಲೀಸ್ ಆಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 13 ಕೋಟಿ ರೂಪಾಯಿ. ಈ ಮೂಲಕ ಧನುಶ್ ಚಿತ್ರ ಸಾಧಾರಣ ಓಪನಿಂಗ್ ಪಡೆದುಕೊಂಡಿದೆ.

‘ಕುಬೇರ’ ಚಿತ್ರಕ್ಕೆ ಒಳ್ಳೆಯ ರೇಟಿಂಗ್ ಸಿಕ್ಕಿದೆ. ಈ ಸಿನಿಮಾಗೆ ಬುಕ್ ಮೈ ಶೋನಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ರೇಟಿಂಗ್ ನೀಡಿದ್ದು, 8.7 ರೇಟಿಂಗ್ ಸಿಕ್ಕಿದೆ. ಹೀಗಾಗಿ, ಮುಂದಿನ ದಿನಗಳಲ್ಲಿ ಸಿನಿಮಾ ಒಳ್ಳೆಯ ಗಳಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ. ಚಿತ್ರ ಅನಾಯಾಸವಾಗಿ 100 ಕೋಟಿ ರೂಪಾಯಿ ಕ್ಲಬ್ ಸೇರುವ ನಿರೀಕ್ಷೆ ಇದೆ.

ಇದನ್ನೂ ಓದಿ
Image
ನಿಜವಾದ ವಿಷಕಾರಿ ಜಂತುಗಳ ಜೊತೆ ರಾಜ್​ಕುಮಾರ್ ಶೂಟ್; ಇದಕ್ಕೆ ಗುಂಡಿಗೆ ಬೇಕು
Image
ಸೆಲೆಬ್ರಿಟಿಗಳು ಎಷ್ಟು ಗಂಟೆಗೆ ಕೊನೆಯ ಊಟ ಮಾಡುತ್ತಾರೆ? ಇಲ್ಲಿದೆ ಮಾಹಿತಿ
Image
ಲಕ್ಷ್ಮೀ ನಿವಾಸದ ಲಕ್ಷ್ಮೀ ಪಾತ್ರಕ್ಕೆ ಶ್ವೇತಾ ಗುಡ್​ಬೈ; ಹೊಸ ಕಲಾವಿದೆ ಇವರೇ
Image
ರುಕ್ಮಿಣಿ ವಸಂತ್ ಶರ್ಟ್​ ಮೇಲೆ ಟೈಗರ್ ಚಿತ್ರ; ಇದರ ಹಿಂದಿದೆ ದೊಡ್ಡ ರಹಸ್ಯ

ಇದನ್ನೂ ಓದಿ: ಭಿಕ್ಷುಕನ ವೇಷ ಧರಿಸಲು ಕೋಟಿ ಕೋಟಿ ಸಂಭಾವನೆ ಪಡೆದ ಧನುಶ್

‘ಸಿತಾರೇ ಜಮೀನ್ ಪರ್’

ಆಮಿರ್ ಖಾನ್ ನಟನೆಯ ‘ಸಿತಾರೇ ಜಮೀನ್ ಪರ್’ ಚಿತ್ರ ಕೂಡ ಶುಕ್ರವಾರ ತೆರೆಗೆ ಬಂದಿದೆ. ಈ ಸಿನಿಮಾ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ. ಈ ಸಿನಿಮಾ ಮೊದ ದಿನ 11.50 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಆಮಿರ್ ಖಾನ್ ಅವರು ಆ್ಯಕ್ಷನ್ ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ಈ ರೀತಿಯ ಭಿನ್ನ ಪ್ರಯೋಗ ಮಾಡಿದಾಗ ಸಿನಿಮಾದ ಗಳಿಕೆ ಆಗಲು ಹೆಚ್ಚಿನ ಸಮಯ ಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ