AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ

Dhanveer Gowda movie: ಇತ್ತೀಚೆಗೆ ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ.

ಥುಳಿಯುವ ಪ್ರಯತ್ನ, ನಾವೂ ತೋರಿಸ್ತೀವಿ: ಧನ್ವೀರ್ ಗೌಡ
Dhanveer Gowda
ಮಂಜುನಾಥ ಸಿ.
|

Updated on: Feb 28, 2026 | 9:28 PM

Share

ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಪರಸ್ಪರ ‘ಥುಳಿಯುವ’ ಸಂಸ್ಕೃತಿ ಹೆಚ್ಚಾದಂತಿದೆ. ಹೊಸ ಸಿನಿಮಾ ಬಿಡುಗಡೆ ಸಮಯದಲ್ಲಿಯೂ ನಡೆಯುವ ಪತ್ರಿಕಾಗೋಷ್ಠಿಗಳಲ್ಲಿ ಈ ರೀತಿಯ ಮಾತುಗಳು ಸಾಮಾನ್ಯ ಆಗಿಬಿಟ್ಟಿವೆ. ‘ನಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಯುತ್ತಿದೆ, ನಮ್ಮನ್ನು ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ’ ಎಂಬ ಮಾತುಗಳು ಪದೇ ಪದೇ ಕೇಳಲು ಸಿಗುತ್ತಿವೆ. ಇದು ಸತ್ಯವೋ ಅಥವಾ ತಾವು ಸಂತ್ರಸ್ತರು ಎಂದು ತೋರಿಸಿಕೊಂಡು ಸಿಂಪತಿ ಗಿಟ್ಟಿಸಿಕೊಳ್ಳುವ ಪ್ರಯತ್ನವೋ ತಿಳಿಯದು. ಇದೀಗ ಧನ್ವೀರ್ ಗೌಡ ಅವರು ಸಹ ಇಂಥಹುದೇ ಮಾತುಗಳನ್ನಾಡಿದ್ದಾರೆ.

ಧನ್ವೀರ್ ನಟನೆಯ ‘ಹಯಗ್ರೀವ’ ಸಿನಿಮಾ ನಿನ್ನೆ ಸಂಜೆ ಬಿಡುಗಡೆ ಆಗಿದೆ. ತಾಂತ್ರಿಕ ಕಾರಣಗಳಿಂದ ಸಿನಿಮಾದ ಮೊದಲೆರಡು ಶೋಗಳು ರದ್ದಾಗಿದ್ದವು, ಸಂಜೆ ವೇಳೆಗೆ ಸಿನಿಮಾ ಬಿಡುಗಡೆ ಆಯ್ತು. ಮೊದಲ ದಿನ ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆಯೇ ದೊರಕಿದೆ. ನಿನ್ನೆ ಚಿತ್ರಮಂದಿರ ಭೇಟಿ ವೇಳೆ ಮಾತನಾಡಿದ ಧನ್ವೀರ್ ಗೌಡ, ಕೆಲವರು ತಮ್ಮ ಸಿನಿಮಾದ ವಿರುದ್ಧ ಪಿತೂರಿ ನಡೆಸಿದ್ದಾರೆಂದು, ಅಂಥಹವರಿಂದಲೇ ತಮ್ಮ ಸಿನಿಮಾದ ಮೊದಲ ಎರಡು ಶೋಗಳು ರದ್ದಾಗಿವೆ ಎಂದು ಹೇಳಿದರು.

‘ಹಯಗ್ರೀವ’ ಸಿನಿಮಾದ ನಿರ್ಮಾಪಕರು ಇತ್ತೀಚೆಗೆ ಮಾತನಾಡಿ, ತಮ್ಮ ಸಿನಿಮಾದ ವಿರುದ್ಧ ನೆಗೆಟಿವ್ ಪ್ರಚಾರ ಮಾಡಲೆಂದೇ ವಾಟ್ಸ್ ಆಫ್ ಗ್ರೂಪ್ ರಚಿಸಲಾಗಿದೆ ಎಂದಿದ್ದರು. ಈ ಬಗ್ಗೆಯೂ ಮಾತನಾಡಿದ ಧನ್ವೀರ್, ಪರೋಕ್ಷವಾಗಿ ಟಾಂಗ್ ನೀಡುತ್ತಾ, ‘ನಮ್ಮ ಮೇಲೆ ಲವ್ ಜಾಸ್ತಿ ಆಗಿದೆ. ಆದರೆ ನಮ್ಮ ಪ್ರೀತಿಯನ್ನು ನಾವು ಮುಂದಿನ ದಿನಗಳಲ್ಲಿ ತೋರಿಸ್ತೀವಿ’ ಎಂದು ಡೈಲಾಗ್ ಹೊಡೆದರು.

ಇದನ್ನೂ ಓದಿ:‘ದರ್ಶನ್ ಕೇಸಲ್ಲಿ ನೀನು ತಲೆ ತೂರಿಸಬೇಡ’: ಧನ್ವೀರ್ ಗೌಡಗೆ ಪೊಲೀಸ್ ವಾರ್ನಿಂಗ್

‘ಥುಳಿಯುವ ಪ್ರಯತ್ನ ಮಾಡುತ್ತಿದ್ದಾರೆ, ಆದರೆ ಆ ದೇವರು ಬಿಟ್ಟರೆ ನಮ್ಮನ್ನು ಇನ್ಯಾರೂ ಸಹ ಥುಳಿಯಲು ಆಗಲ್ಲ’ ಎಂದ ಧನ್ವೀರ್ ಗೌಡ, ಮುಂದಿನ ದಿನಗಳಲ್ಲಿ ವಿಶೇಷ ಪತ್ರಿಕಾಗೋಷ್ಠಿ ಮಾಡಿ, ತಮ್ಮ ಸಿನಿಮಾದ ವಿರುದ್ಧ ತಮ್ಮ ವಿರುದ್ಧ ನಡೆದ ಪಿತೂರಿಯ ಪೂರ್ಣ ಮಾಹಿತಿ ಹಂಚಿಕೊಳ್ಳುವುದಾಗಿ ಸಹ ಹೇಳಿದರು.

‘ಹಯಗ್ರಿವ’ ಸಿನಿಮಾನಲ್ಲಿ ಧನ್ವೀರ್ ಜೊತೆಗೆ ಸಂಜನಾ ಆನಂದ್ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾನಲ್ಲಿ ಗಿಲ್ಲಿ ನಟ ಹಾಸ್ಯ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಸಿನಿಮಾ ನಿರ್ದೇಶನ ಮಾಡಿರುವುದು ರಘುಕುಮಾರ್, ಸಿನಿಮಾನಲ್ಲಿ ಧನ್ವೀರ್ ಪೊಲೀಸ್ ಅಧಿಕಾರಿ ಪಾತ್ರದಲ್ಲಿ ನಟಿಸಿದ್ದಾರೆ. ಪಾತ್ರಕ್ಕಾಗಿ ಅವರು ಸಿಕ್ಸ್​ಪ್ಯಾಕ್ ಸಹ ಮಾಡಿದ್ದರಂತೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ