Let’s Get Married Movie: ‘ಲೆಟ್ಸ್ ಗೆಟ್ ಮ್ಯಾರೀಡ್’ ಎಂದ ಎಂ.ಎಸ್​. ಧೋನಿ; ಇದು ಮೊದಲ ಸಿನಿಮಾ ಟೈಟಲ್

MS Dhoni Tamil Movie: ಧೋನಿ ಎಂಟರ್​​ಟೇನ್​ಮೆಂಟ್ ನಿರ್ಮಾಣದ ಮೊದಲ ಚಿತ್ರದ ಟೈಟಲ್ ರಿಲೀಸ್ ಮಾಡಲಾಗಿದೆ. ಕಾಡಿನ ಮಧ್ಯೆ ಇರುವ ರಸ್ತೆಯಲ್ಲಿ ವ್ಯಾನ್ ಒಂದು ಸಾಗುವ ರೀತಿಯಲ್ಲಿ ಗ್ರಾಫಿಕ್ಸ್ ಮಾಡಲಾಗಿದೆ.

Let's Get Married Movie: ‘ಲೆಟ್ಸ್ ಗೆಟ್ ಮ್ಯಾರೀಡ್’ ಎಂದ ಎಂ.ಎಸ್​. ಧೋನಿ; ಇದು ಮೊದಲ ಸಿನಿಮಾ ಟೈಟಲ್
ಎಲ್​ಜಿಎಂ ಟೈಟಲ್
Follow us
ರಾಜೇಶ್ ದುಗ್ಗುಮನೆ
| Updated By: Digi Tech Desk

Updated on:Jan 27, 2023 | 6:02 PM

ಕ್ರಿಕೆಟರ್​ ಎಂ.ಎಸ್​. ಧೋನಿ (MS Dhoni) ಅವರು ಸಿನಿಮಾ ನಿರ್ಮಾಣಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿ ಖಚಿತವಾಗಿತ್ತು. ಆದರೆ, ಈ ಸಿನಿಮಾ ಯಾವುದು? ಇದನ್ನು ನಿರ್ದೇಶನ ಮಾಡೋದು ಯಾರು ಎನ್ನುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿರಲಿಲ್ಲ. ಈಗ ಈ ವಿಚಾರದಲ್ಲಿ ಧೋನಿ ಎಂಟರ್​ಟೇನ್​ಮೆಂಟ್ ಕಡೆಯಿಂದ ಘೋಷಣೆ ಆಗಿದೆ. ಅವರ ಮೊದಲ ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್​’ (Lets  Get Married) ಎಂದು ಶೀರ್ಷಿಕೆ ಇಡಲಾಗಿದೆ.

ಧೋನಿಗೂ ತಮಿಳುನಾಡಿಗೂ ಉತ್ತಮ ನಂಟಿದೆ. ಇದಕ್ಕೆ ಕಾರಣ ಐಪಿಎಲ್. ಧೋನಿ ಅವರು ಈ ಮೊದಲಿನಿಂದಲೂ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ಹೀಗಾಗಿ, ತಮಿಳುನಾಡಿನಲ್ಲಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈ ಕಾರಣಕ್ಕೆ ಮೊದಲ ಚಿತ್ರವನ್ನು ತಮಿಳಿನಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.

ಧೋನಿ ಎಂಟರ್​​ಟೇನ್​ಮೆಂಟ್ ನಿರ್ಮಾಣದ ಮೊದಲ ಚಿತ್ರದ ಟೈಟಲ್ ರಿಲೀಸ್ ಮಾಡಲಾಗಿದೆ. ಕಾಡಿನ ಮಧ್ಯೆ ಇರುವ ರಸ್ತೆಯಲ್ಲಿ ವ್ಯಾನ್ ಒಂದು ಸಾಗುವ ರೀತಿಯಲ್ಲಿ ಗ್ರಾಫಿಕ್ಸ್ ಮಾಡಲಾಗಿದೆ. ‘ಎಲ್​ಜಿಎಂ’ ಎಂಬುದು ಸಿನಿಮಾ ಟೈಟಲ್​ನ ಶಾರ್ಟ್​ಫಾರ್ಮ್​. ರಮೇಶ್ ತಮಿಳ್​ಮಣಿ ಅವರು ಚಿತ್ರವನ್ನು ನಿರ್ದೇಶನ ಮಾಡಿದರೆ, ಸಾಕ್ಷಿ ಸಿಂಗ್ ಧೋನಿ ಅವರು ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ತಮಿಳು ಸಿನಿಮಾ ಮಾತ್ರವಲ್ಲದೆ ಇನ್ನೂ ಹಲವು ನಿರ್ದೇಶಕರ ಜತೆ ಧೋನಿ ಮಾತುಕತೆಯಲ್ಲಿ ಇದ್ದಾರೆ. ಧೋನಿಗೆ ಈ ಮೊದಲಿನಿಂದಲೂ ಸಿನಿಮಾ ಬಗ್ಗೆ ಆಸಕ್ತಿ ಇದೆ. ಕ್ರಿಕೆಟ್​ನಿಂದ ನಿವೃತ್ತಿ ಪಡೆದ ಬಳಿಕ ಅವರು ಈ ಬಗ್ಗೆ ಗಮನಹರಿಸುತ್ತಿದ್ದಾರೆ. ಮೂಲಗಳ ಪ್ರಕಾರ ವೆಬ್​ ಸೀರಿಸ್​ಗಳನ್ನು ನಿರ್ಮಾಣ ಮಾಡುವತ್ತವೂ ಧೋನಿ ಗಮನ ಹರಿಸುತ್ತಿದ್ದಾರೆ ಎನ್ನಲಾಗಿದೆ.

ಸಿನಿಮಾ ಕಥೆ ಬಗ್ಗೆ ಹೇಳಿದ್ದ ರಮೇಶ್

‘ಧೋನಿ ಪತ್ನಿ ಸಾಕ್ಷಿ ಅವರು ಒಂದು ಕಥೆಯ ಪರಿಕಲ್ಪನೆಯನ್ನು ಹೇಳಿದ್ದರು. ಇದು ಧೋನಿಗೆ ಇಷ್ಟವಾಗಿದೆ. ಇದೇ ವಿಚಾರದ ಮೇಲೆ ಸಿನಿಮಾ ಮಾಡಲು ಅವರು ನಿರ್ಧರಿಸಿದ್ದಾರೆ. ಫ್ಯಾಮಿಲಿ ಎಂಟರ್​ಟೇನ್​ಮೆಂಟ್ ಮಾದರಿಯಲ್ಲಿ ಈ ಸಿನಿಮಾ ಮೂಡಿ ಬರಲಿದೆ’ ಎಂದು ರಮೇಶ್ ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:27 pm, Fri, 27 January 23

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು