AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಪಮಾ ಬ್ರೇಕಪ್​ಗೆ ಧ್ರುವ್ ಕಾರಣವೇ? ಕೊನೆಗೂ ಮೌನ ಮುರಿದ ನಟ

ತಮ್ಮ ವೈಯಕ್ತಿಕ ಜೀವನದ ಮೇಲಿನ ಟೀಕೆಗಳ ಕುರಿತು ನಟ ಧ್ರುವ ವಿಕ್ರಮ್ ಮೊದಲ ಬಾರಿಗೆ ಬಹಿರಂಗವಾಗಿ ಮಾತನಾಡಿದ್ದಾರೆ. ಋಣಾತ್ಮಕ ವಿಷಯಗಳನ್ನು ನಿರ್ಲಕ್ಷಿಸಿ ಸಿನಿಮಾಗಳತ್ತ ಗಮನ ಹರಿಸುತ್ತಿರುವುದಾಗಿ ಹೇಳಿದ್ದಾರೆ. ಆಪ್ತರ ಬೆಂಬಲವೇ ತಮ್ಮ ಶಕ್ತಿ ಎಂದಿರುವ ಅವರು, ಮುಂಬರುವ ಚಿತ್ರಗಳ ಕೆಲಸಗಳಲ್ಲಿ ನಿರತರಾಗಿದ್ದಾರೆ.

ಅನುಪಮಾ ಬ್ರೇಕಪ್​ಗೆ ಧ್ರುವ್ ಕಾರಣವೇ? ಕೊನೆಗೂ ಮೌನ ಮುರಿದ ನಟ
ಧ್ರುವ್-ಅನುಪಮಾ
ರಾಜೇಶ್ ದುಗ್ಗುಮನೆ
|

Updated on: Aug 18, 2026 | 8:47 AM

Share

ಮುಖ್ಯಾಂಶಗಳು

  • ವೈಯಕ್ತಿಕ ಜೀವನದ ಟೀಕೆಗಳಿಗೆ ಹೆದರಲ್ಲ ಎಂದ ಧ್ರುವ್ ವಿಕ್ರಮ್
  • ಸತ್ಯದ ಹಾದಿಯಲ್ಲಿ ಸಾಗಿದರೆ ನೆಗೆಟಿವಿಟಿ ಮಾಯ ಎಂದ ನಟ
  • ಬ್ರೇಕಪ್ ವಿವಾದದ ನಡುವೆಯೂ ಸಿನಿಮಾಗಳತ್ತ ಯುವ ನಟನ ಗಮನ

ತಮಿಳು ಚಿತ್ರರಂಗದ ಯುವ ನಟ ಧ್ರುವ ವಿಕ್ರಮ್ (Dhruv Vikram) ತಮ್ಮ ವೈಯಕ್ತಿಕ ಜೀವನದ ಮೇಲಿನ ಟೀಕೆಗಳ ಕುರಿತು ಮೌನ ಮುರಿದಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಇಂತಹ ಟೀಕೆಗಳು ಸಹಜ ಎಂದು ಅವರು ಒಪ್ಪಿಕೊಂಡಿದ್ದಾರೆ. ಆರಂಭದಲ್ಲಿ ಈ ಮಾತುಗಳು ತಮ್ಮ ಮನಸ್ಸಿಗೆ ನೋವು ಉಂಟುಮಾಡಿದ್ದವು ಎಂದು ಅವರು ತಿಳಿಸಿದ್ದಾರೆ. ಆದರೆ ಚಿತ್ರರಂಗಕ್ಕೆ ಬಂದಮೇಲೆ ಇವೆಲ್ಲವನ್ನೂ ಎದುರಿಸಲು ಸಿದ್ಧವಾಗಿರುವುದಾಗಿ ಧ್ರುವ ಧೈರ್ಯದಿಂದ ಹೇಳಿದ್ದಾರೆ.

ಋಣಾತ್ಮಕ ಚಿಂತನೆಗಳಿಗೆ ಧ್ರುವ ಗುಡ್‌ಬೈ

ತಮ್ಮ ವಿರುದ್ಧ ಕೇಳಿಬರುವ ಋಣಾತ್ಮಕ ಮಾತುಗಳಿಗೆ ಧ್ರುವ ಯಾವುದೇ ಕಿವಿಕೊಡುತ್ತಿಲ್ಲ. ‘ಮನುಷ್ಯ ಸತ್ಯದ ಹಾದಿಯಲ್ಲಿ ಸಾಗಿದಾಗ ಹೊರಗಿನ ಅಪಸ್ವರಗಳು ತಾನಾಗಿಯೇ ಅಳಿದುಹೋಗುತ್ತವೆ. ಈ ಸತ್ಯವನ್ನು ನಾನು ಜೀವನದಲ್ಲಿ ದೃಢವಾಗಿ ನಂಬಿದ್ದೇನೆ. ನನ್ನನ್ನು ಪ್ರೀತಿಸುವ ಮತ್ತು ಬೆಂಬಲಿಸುವ ಅಭಿಮಾನಿಗಳಿಂದ ನಾನು ಶಕ್ತಿ ಕಂಡುಕೊಳ್ಳುತ್ತಿದ್ದೇನೆ. ಪ್ರತಿಯೊಂದು ನೆಗೆಟಿವ್ ವಿಚಾರವನ್ನು ಧನಾತ್ಮಕವಾಗಿ ಎದುರಿಸುವ ಸಾಮರ್ಥ್ಯ ಬೆಳೆಸಿಕೊಂಡಿದ್ದೇನೆ’ ಎಂದಿದ್ದಾರೆ ಅವರು.

ಕಷ್ಟದ ಸಮಯದಲ್ಲಿ ಜೊತೆ ನಿಂತ ಆಪ್ತರು

ಧ್ರುವ ವಿಕ್ರಮ್ ಅವರಿಗೆ ಅತ್ಯಂತ ಆಪ್ತರಾದ ಸಣ್ಣ ಸ್ನೇಹಿತರ ಬಳಗವಿದೆಯಂತೆ. ‘ನನ್ನ ಜೀವನದ ಪ್ರತಿಯೊಂದು ಕಷ್ಟದ ಹಂತದಲ್ಲೂ ಈ ಗೆಳೆಯರು ಜೊತೆಯಾಗಿ ನಿಂತಿದ್ದಾರೆ. ಇಂತಹ ಪ್ರೀತಿಯ ಆಪ್ತರ ಪ್ರೋತ್ಸಾಹವೇ ನನಗೆ ಮುಂದೆ ಸಾಗಲು ದೊಡ್ಡ ಧೈರ್ಯ ನೀಡಿದೆ. ಚಿತ್ರರಂಗದಲ್ಲಿ ಮತ್ತಷ್ಟು ಸಾಧನೆ ಮಾಡಲು ಈ ಬೆಂಬಲವೇ ಮೂಲ ಕಾರಣವಾಗಿದೆ. ವೃತ್ತಿಜೀವನದತ್ತ ಸಂಪೂರ್ಣ ಗಮನ ಹರಿಸಲು ಈ ಸೌಹಾರ್ದತೆ ಸಹಕಾರಿಯಾಗಿದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ಅನುಪಮಾ ಪರಮೇಶ್ವರನ್ ಮಾಡಿದ ಟೀಕೆಗಳಿಗೆ ಧ್ರುವ್ ವಿಕ್ರಮ್ ತಿರುಗೇಟು

ಬ್ರೇಕಪ್ ಸುದ್ದಿ

ಅನುಪಮಾ ಪರಮೇಶ್ವರನ್ ಹಾಗೂ ಧ್ರುವ್ ಲವ್ ಬ್ರೇಕಪ್ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ನಟಿ ತಮ್ಮ ಸಂಬಂಧದಲ್ಲಿದ್ದ ಕಹಿ ನೆನಪುಗಳ ಕುರಿತು ಬಹಿರಂಗವಾಗಿ ಮಾತನಾಡಿದ್ದರು. ಕಳೆದ ಎರಡು ವರ್ಷಗಳಲ್ಲಿ ಅನುಭವಿಸಿದ ಮಾನಸಿಕ ಕಿರುಕುಳದ ಬಗ್ಗೆಯೂ ಅನುಪಮಾ ಹೇಳಿಕೊಂಡಿದ್ದರು. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಆದರೆ ಧ್ರುವ್ ಈ ಎಲ್ಲ ಆರೋಪಗಳಿಗೆ ತಲೆ ಕೆಡಿಸಿಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಗೋಕಳ್ಳರು ಕರುವನ್ನು ಎಳೆದೊಯ್ಯುವಾಗ ಹಿಂದೆ ಓಡಿದ ತಾಯಿ!
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಬಿಗ್ ಬಾಸ್ ಎಲಿಮಿನೇಷನ್: ಅಪಾಯದಲ್ಲಿ ಕಿರಣ್ ಶಾಸ್ತ್ರಿ, ಸಂಗೀತಾ, ಲಿಖಿತ್
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ
ಫ್ಲೈದುಬೈ ಪ್ರಕರಣ: ಸಹ ಪೈಲಟ್ ಕೃತ್ಯವನ್ನು ಶ್ಲಾಘಿಸಿದ ಅಲ್-ಖೈದಾ