AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ತಂಡ ಸೇರಲಿರುವ ಮತ್ತೊಬ್ಬ ಸ್ಟಾರ್ ಹೀರೋ

Dhurandhar 2 movie: ಮಾರ್ಚ್​​ನಲ್ಲಿ ಬಿಡುಗಡೆ ಆಗಲಿರುವ ‘ಧುರಂಧರ್ 2’ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ‘ಧುರಂಧರ್’ ದೊಡ್ಡ ಹಿಟ್ ಆಗಿರುವ ಕಾರಣ, ‘ಧುರಂಧರ್ 2’ ಸಿನಿಮಾವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ನಿರ್ಮಿಸಿಲು ಚಿತ್ರತಂಡ ಸಜ್ಜಾಗಿದ್ದು, ಇದೀಗ ‘ಧುರಂಧರ್ 2’ ಸಿನಿಮಾಕ್ಕೆ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಎಂಟ್ರಿ ಸಹ ಆಗಲಿದೆ ಎನ್ನಲಾಗುತ್ತಿದೆ.

‘ಧುರಂಧರ್ 2’ ತಂಡ ಸೇರಲಿರುವ ಮತ್ತೊಬ್ಬ ಸ್ಟಾರ್ ಹೀರೋ
Dhurandhar
ಮಂಜುನಾಥ ಸಿ.
|

Updated on: Jan 22, 2026 | 3:30 PM

Share

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನು ಬರೆಯುತ್ತಿದೆ. ಸಿನಿಮಾ ಬಿಡುಗಡೆ ಆಗಿ ಎರಡು ತಿಂಗಳಾಗುತ್ತಾ ಬಂದಿದೆ, ಆದರೆ ಈಗಲೂ ಸಹ ಹಲವು ಕಡೆಗಳಲ್ಲಿ ತುಂಬಿದ ಗೃಹಗಳ ಪ್ರದರ್ಶನವನ್ನು ಕಾಣುತ್ತಿದೆ ‘ಧುರಂಧರ್’ ಸಿನಿಮಾ. ಸಿನಿಮಾದ ಹವಾ ಎಷ್ಟಿದೆಯಂತೆ ಮಾರ್ಚ್ ತಿಂಗಳಲ್ಲಿ ಬಿಡುಗಡೆ ಆಗಲಿರುವ ಸಿನಿಮಾದ ಎರಡನೇ ಭಾಗವಾದ ‘ಧುರಂಧರ್ 2’ ಭಾರತದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದೆನಿಸಿಕೊಂಡಿದೆ. ‘ಧುರಂಧರ್’ ದೊಡ್ಡ ಹಿಟ್ ಆಗಿರುವ ಕಾರಣ, ‘ಧುರಂಧರ್ 2’ ಸಿನಿಮಾವನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ನಿರ್ಮಿಸಿಲು ಚಿತ್ರತಂಡ ಸಜ್ಜಾಗಿದ್ದು, ಇದೀಗ ‘ಧುರಂಧರ್ 2’ ಸಿನಿಮಾಕ್ಕೆ ಮತ್ತೊಬ್ಬ ಬಾಲಿವುಡ್ ಸ್ಟಾರ್ ನಟನ ಎಂಟ್ರಿ ಸಹ ಆಗಲಿದೆ ಎನ್ನಲಾಗುತ್ತಿದೆ.

‘ಧುರಂಧರ್’ ಸಿನಿಮಾ ನಿರ್ದೇಶಿಸಿರುವ ಆದಿತ್ಯ ಧರ್ ಅವರ ಮೊದಲ ಸಿನಿಮಾ ‘ಉರಿ: ದಿ ಸರ್ಜಿಕಲ್ ಸ್ಟ್ರೈಕ್’. ‘ಧುರಂಧರ್’ ರೀತಿ ಆ ಸಿನಿಮಾ ಸಹ ಸೈನ್ಯ ಮತ್ತು ದೇಶಪ್ರೇಮದ ಜಾನರ್ ಅನ್ನು ಒಳಗೊಂಡಿತ್ತು. ಸಿನಿಮಾನಲ್ಲಿ ವಿಕ್ಕಿ ಕೌಶಲ್ ನಾಯಕನಾಗಿ ನಟಿಸಿದ್ದರು. ‘ಉರಿ’ಗೆ ಮೊದಲು ಒಳ್ಳೆಯ ನಟ ಎಂದಷ್ಟೆ ಎನಿಸಿಕೊಂಡಿದ್ದ ವಿಕ್ಕಿ ಕೌಶಲ್, ‘ಉರಿ’ಯ ಬಳಿಕ ಸ್ಟಾರ್ ನಟ ಆದರು. ರೊಮ್ಯಾಂಟಿಕ್, ರಿಯಲ್ ಲೈಫ್ ಕತೆಗಳಲ್ಲಿ ಮಾತ್ರವಲ್ಲ ಪಕ್ಕಾ ಆಕ್ಷನ್ ಸಿನಿಮಾಗಳಿಗೂ ಸರಿಹೊಂದುವ ನಟ ತಾವು ಎಂಬುದನ್ನು ವಿಕ್ಕಿ ಕೌಶಲ್ ‘ಉರಿ’ ಮೂಲಕ ಸಾಬೀತುಪಡಿಸಿದರು. ಇದೀಗ ಆದಿತ್ಯ ಧರ್ ಅವರು, ತಮ್ಮ ಮೊದಲ ಸಿನಿಮಾದ ನಾಯಕನನ್ನು ‘ಧುರಂಧರ್ 2’ ಸಿನಿಮಾಕ್ಕೆ ಕರೆ ತರಲು ಮುಂದಾಗಿದ್ದಾರೆ.

ಇದೀಗ ಹರಿದಾಡುತ್ತಿರುವ ಸುದ್ದಿಗಳಂತೆ ವಿಕ್ಕಿ ಕೌಶಲ್ ಅವರು ‘ಧುರಂಧರ್ 2’ ಸಿನಿಮಾನಲ್ಲಿ ಇರಲಿದ್ದಾರಂತೆ. ಅಸಲಿಗೆ ‘ಉರಿ’ ಸಿನಿಮಾನಲ್ಲಿ ‘ಧುರಂಧರ್’ ಸಿನಿಮಾದ ನಾಯಕ ಜಸ್ಕೀರತ್ ಸಿಂಗ್ ರಂಗಿ (ಸಿನಿಮಾನಲ್ಲಿ ರಣ್ವೀರ್ ಸಿಂಗ್ ನಿಜ ಹೆಸರು) ಉಲ್ಲೇಖ ಇದೆ. ‘ಉರಿ’ ಸಿನಿಮಾನಲ್ಲಿ ನಾಯಕ, ಮಹಿಳಾ ಸೈನ್ಯಾಧಿಕಾರಿಯೊಟ್ಟಿಗೆ ಮಾತನಾಡುವಾಗ ಆಕೆ ‘ಜಸ್ಕೀರತ್ ಸಿಂಗ್ ರಂಗಿ ನನ್ನ ಪತಿ, ಅವರು ನೌಶೇರಾನಲ್ಲಿ ನಡೆದ ಆಪರೇಷನ್​​ನಲ್ಲಿ ಹುತಾತ್ಮರಾಗಿದ್ದಾರೆ’ ಎಂದು ಹೇಳುತ್ತಾರೆ. ಅಂತೆಯೇ ಇದೀಗ ‘ಧುರಂಧರ್ 2’ ಸಿನಿಮಾನಲ್ಲಿ ‘ಉರಿ’ ಸಿನಿಮಾದ ನಾಯಕ ವಿಹಾನ್ ಶೇರ್ಗಿಲ್ (ವಿಕ್ಕಿ ಕೌಶಲ್ ಪಾತ್ರದ ಹೆಸರು) ಸಹ ಎಂಟ್ರಿ ಕೊಡಲಿದ್ದಾರೆ. ಆದರೆ ಇದು ಅತಿಥಿ ಪಾತ್ರ ಮಾತ್ರವೇ ಆಗಿರಲಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ಸಿನಿಪ್ರಿಯರಿಗೆ ಖುಷಿ ಸುದ್ದಿ; ಒಟಿಟಿಗೆ ಬರೋಕೆ ರೆಡಿ ಆಯ್ತು ‘ಧುರಂಧರ್’

‘ಧುರಂಧರ್’ ಸಿನಿಮಾನಲ್ಲಿ ಅಕ್ಷಯ್ ಕುಮಾರ್ ಪಾತ್ರ ಸಖತ್ ಹಿಟ್ ಆಗಿದ್ದು, ‘ಧುರಂಧರ್ 2’ ಸಿನಿಮಾನಲ್ಲಿಯೂ ಅವರ ಪಾತ್ರವನ್ನು ಮುಂದುವರೆಸಲಿದ್ದಾರೆ ಎನ್ನಲಾಗುತ್ತಿದೆ. ‘ಧುರಂಧರ್’ ಸಿನಿಮಾನಲ್ಲಿ ಆ ಪಾತ್ರ ಮರಣ ಹೊಂದಿದೆಯಾದರೂ ಫ್ಲ್ಯಾಷ್​​ ಬ್ಯಾಕ್​​ಗಳಲ್ಲಿ ಅಕ್ಷಯ್ ಪಾತ್ರವನ್ನು ಮತ್ತೆ ತರಲಾಗುತ್ತದೆಯಂತೆ. ಇದೀಗ ಅದರ ಜೊತೆಗೆ ವಿಕ್ಕಿ ಕೌಶಲ್ ಪಾತ್ರವೂ ಬಂದಲ್ಲಿ ಪ್ರೇಕ್ಷಕರಿಗೆ ಡಬಲ್ ಧಮಾಕ ಆಗಲಿದೆ. ‘ಧುರಂಧರ್ 2’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ನರೇಗಾ ಹೆಸರು ಬದಲಾವಣೆ ವಿವಾದ, ರಾಜ್ಯಪಾಲರ ಭಾಷಣ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಕೊನೆಯ ಓವರ್​ನಲ್ಲಿ 3 ಸಿಕ್ಸ್​ ಸಿಡಿಸಿ 3 ರನ್​ಗಳಿಂದ ಗೆದ್ದ ಹೋಬಾರ್ಟ್​ ಪಡೆ
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಬೀದಿಯಲ್ಲಿ ವ್ಯಕ್ತಿಯ ಬೆನ್ನಟ್ಟಿ ಚಾಕುವಿನಿಂದ ಇರಿದು ಪುರುಷರ ಗುಂಪು
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
ಮಾಲೀಕರ ಅಂತ್ಯಕ್ರಿಯೆಗೂ ಟ್ರ್ಯಾಕ್ಟರ್ ಹತ್ತಿ ಬಂದ ನಾಯಿ
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
2 ಓವರ್​ಗಳ ಮೂಲಕ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ ಅಫ್ಘಾನ್ ಸ್ಪಿನ್ನರ್
ಆಂಧ್ರಪ್ರದೇಶ: ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಮೂವರು ಸಜೀವ ದಹನ
ಆಂಧ್ರಪ್ರದೇಶ: ಟ್ರಕ್​ಗೆ ಡಿಕ್ಕಿ ಹೊಡೆದ ಬಸ್, ಮೂವರು ಸಜೀವ ದಹನ