AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್

ಪವನ್ ಕಲ್ಯಾಣ್ ಅವರ 'ಉಸ್ತಾದ್ ಭಗತ್ ಸಿಂಗ್' ಚಿತ್ರವು 'ಧುರಂಧರ್ 2' ಅಬ್ಬರದ ಮುಂದೆ ನೆಲಕಚ್ಚಿದೆ. ಧುರಂಧರ್ 2 ವಿಶ್ವಾದ್ಯಂತ 1000 ಕೋಟಿಗೂ ಹೆಚ್ಚು ಗಳಿಸಿ ಭರ್ಜರಿ ಯಶಸ್ಸು ಕಂಡರೆ, ಉಸ್ತಾದ್ ಭಗತ್ ಸಿಂಗ್ ಭಾರತದಲ್ಲಿ ಕೇವಲ 66 ಕೋಟಿ ರೂಪಾಯಿ ಗಳಿಸಿದೆ. ರಾಜಕೀಯದಲ್ಲಿ ಬ್ಯುಸಿ ಆಗಿರುವ ಪವನ್ ಕಲ್ಯಾಣ್ ಅವರ ಸಿನಿಮಾ ಬದ್ಧತೆ ಕಳೆದುಕೊಂಡಿದ್ದು, ಇದು ಚಿತ್ರದ ಕಲೆಕ್ಷನ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ.

‘ಧುರಂಧರ್ 2’ ಅಬ್ಬರಕ್ಕೆ ಮಕಾಡೆ ಮಲಗಿದ ಪವನ್ ಕಲ್ಯಾಣ್ ಸಿನಿಮಾ; ಹೀನಾಯ ಕಲೆಕ್ಷನ್
ಪವನ್-ರಣವೀರ್
TV9 Web
| Edited By: |

Updated on: Mar 27, 2026 | 7:03 AM

Share

ಪವನ್ ಕಲ್ಯಾಣ್ ಅವರು ರಾಜಕೀಯದಲ್ಲಿ ಬ್ಯುಸಿ ಇರುವುದರಿಂದ ಅವರ ಸಿನಿಮಾ ಅಭಿಮಾನಿಗಳಿಗೆ ಅಷ್ಟು ಸಂತೋಷ ಸಿಗುತ್ತಿಲ್ಲ. ಅವರು ಒಪ್ಪಿಕೊಂಡ ಮೂರು ಸಿನಿಮಾಗಳನ್ನು ಹೇಗೋ ಮುಗಿಸಿಕೊಟ್ಟರು. ಆದರೆ, ಯಾವ ಸಿನಿಮಾದಲ್ಲೂ ಬದ್ಧತೆ ಕಾಣಿಸಿಲ್ಲ. ಕಾಟಾಚಾರಕ್ಕೆ ಅವರು ಸಿನಿಮಾ ಶೂಟ್ ಮುಗಿಸಿಕೊಟ್ಟರು. ‘ಓಜಿ’, ‘ಹರಿ ಹರ ವೀರ ಮಲ್ಲು’ ಸಿನಿಮಾ ಸಾಧಾರಣ ಪ್ರದರ್ಶನ ನೀಡಿದ ಬಳಿಕ ಅವರ ನಟನೆಯ ‘ಉಸ್ತಾದ್ ಭಗತ್ ಸಿಂಗ್’ ಚಿತ್ರವು ‘ಧುರಂಧರ್ 2’ (Dhurandhar 2) ಅಬ್ಬರದಿಂದ ತತ್ತರಿಸಿದೆ.

‘ಧುರಂಧರ್ 2’ ಸಿನಿಮಾ ಅಬ್ಬರದ ಕಲೆಕ್ಷನ್ ಮಾಡುತ್ತಿದೆ. ಗುರುವಾರ (ಮಾರ್ಚ್ 26) 49 ಕೋಟಿ ರೂಪಾಯಿ ಗಳಿಕೆ ಮಾಡಿದೆ. ವಾರದ ದಿನವೂ ಇಷ್ಟು ಅಬ್ಬರದ ಗಳಿಕೆ ಆಗುತ್ತಿರುವುದು ನಿಜಕ್ಕೂ ಶಾಕಿಂಗ್ ಎನಿಸಿದೆ. ಈ ಸಿನಿಮಾಗೆ ಗುರುವಾರ ಬರೋಬ್ಬರಿ 19,493 ಶೋಗಳನ್ನು ನೀಡಲಾಗಿತ್ತು. ಈ ಚಿತ್ರದ ಭಾರತದ ನೆಟ್ ಕಲೆಕ್ಷನ್ 674 ಕೋಟಿ ರೂಪಾಯಿ ಆಗಿದೆ. ಭಾರತದ ಗ್ರಾಸ್ ಕಲೆಕ್ಷನ್ 805 ಕೋಟಿ ರೂಪಾಯಿ ಆಗಿದೆ. ಈ ಸಿನಿಮಾಗೆ ವಿಶ್ವ ಮಟ್ಟದಲ್ಲಿ 1067 ಕೋಟಿ ರೂಪಾಯಿ ಗಳಿಕೆ ಆಗಿದೆ.

ಗುರುವಾರ ‘ಧುರಂಧರ್ 2’ ಸಿನಿಮಾದ ತೆಲುಗು ವರ್ಷನ್​ಗೆ 2.50 ಕೋಟಿ ರೂಪಾಯಿ ಗಳಿಕೆ ಆಗಿದೆ. ಆದರೆ, ಇದೇ ದಿನ ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾ ಗಳಿಕೆ ಮಾಡಿದ್ದು ಕೇವಲ 1 ಕೋಟಿ ರೂಪಾಯಿ ಮಾತ್ರ. ಇದು ಚಿತ್ರಕ್ಕೆ ಭಾರೀ ಹಿನ್ನಡೆ ತಂದಿದೆ.

ಪವನ್ ಕಲ್ಯಾಣ್ ಸಿನಿಮಾ ಭಾರತದಲ್ಲಿ 66 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರಲ್ಲಿ ಅರ್ಧದಷ್ಟು ಗಳಿಕೆ ಮೊದಲ ದಿನವೇ ಬಂದಿತ್ತು. ಆ ಬಳಿಕ ಸಿನಿಮಾದ ಗಳಿಕ ಸಂಪೂರ್ಣವಾಗಿ ತಗ್ಗಿ ಹೋಗಿದೆ. ಮುಂದಿನ ದಿನಗಳಲ್ಲಿ ‘ಉಸ್ತಾದ್ ಭಗತ್ ಸಿಂಗ್’ ಪರಿಸ್ಥಿತಿ ಮತ್ತಷ್ಟು ಹೀನಾಯ ಆಗಬಹುದು.

ಇದನ್ನೂ ಓದಿ: ಕೇವಲ ಒಂದು ಕೋಟಿ ಗಳಿಸಿದ ಪವನ್ ಕಲ್ಯಾಣ್ ಸಿನಿಮಾ; ‘ಧುರಂಧರ್ 2’ ಎದುರು ಮಂಕಾದ ಉಸ್ತಾದ್

ಪವನ್ ಕಲ್ಯಾಣ್ ಅವರು ಸದ್ಯಕ್ಕಂತೂ ಸಿನಿಮಾ ಮಾಡುತ್ತಿಲ್ಲ. ಅವರು ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಆಗಿದ್ದು, ತಮ್ಮ ಕೆಲಸವನ್ನು ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಗೆದ್ದು ಮತ್ತೆ ಅಧಿಕಾರಕ್ಕೆ ಬಂದರೆ ಅವರು ಸಿನಿಮಾ ರಂಗದಿಂದಲೇ ದೂರ ಆಗಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
TV9 Web
TV9 Web

TV9 Kannada

Read More
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮುಡಾ ಹಗರಣ: ಸೈಟ್​​ ಖರೀದಿಸಿದವರಲ್ಲಿ ಹೆಚ್ಚಿದ ಆತಂಕ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಮಳೆಗಾಲದಲ್ಲಿ ಕೆಸರುಮಯ ರಸ್ತೆ, ಆಟದ ಮೈದಾನವೂ ಇಲ್ಲ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ಸಿದ್ದರಾಮಯ್ಯ ಪ್ರತಿಮೆ ತೆರವುಗೊಳಿಸಿದ್ದಕ್ಕೆ ಸಿಡಿದೆದ್ದ ಕುರುಬ ಸಮುದಾಯ
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ತುಂಗಭದ್ರಾ ಡ್ಯಾಮ್‌ನಿಂದ ಕಾರ್ಖಾನೆಗಳಿಗೆ ಅನಧಿಕೃತ ನೀರು ಸರಬರಾಜು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಸಚಿವ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಚಿತ್ರದುರ್ಗದಲ್ಲಿ ಮಹಾಗಣಪತಿ ಉತ್ಸವಕ್ಕೆ ನಗರ ದೇವತೆಗಳ ಮೆರುಗು
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಬೆಂಗಳೂರಿನ ಮಟನ್ ಶಾಪ್‌ನಲ್ಲಿ ನಡೀತಿತ್ತು ಡ್ರಗ್ಸ್ ಮಾರಾಟ! ಇಬ್ಬರ ಬಂಧನ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಕಾಮನ್‌ವೆಲ್ತ್ ಪವರ್‌ಲಿಫ್ಟಿಂಗ್: ಕನ್ನಡಿಗ ಸಚಿನ್ ಸಾಳುಂಕೆಗೆ ಬೆಳ್ಳಿ ಪದಕ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಧಾರಾಕಾರ ಮಳೆಗೆ ಮಂಡ್ಯ, ಹನೂರು ತತ್ತರ: ಎಂ.ಎಂ. ಹಿಲ್ಸ್‌ನಲ್ಲಿ ಗುಡ್ಡ ಕುಸಿತ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ
ಬೆಂಗಳೂರಿನ ಅಂಚೆಪಾಳ್ಯದಲ್ಲಿ ಚಿರತೆ ಪ್ರತ್ಯಕ್ಷ