AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಟಾಕ್ಸಿಕ್’ ಪೋಸ್ಟರ್ ಹಂಚಿಕೊಂಡು ಯಶ್ ಬೆಂಬಲಕ್ಕೆ ನಿಂತ ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್

‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಅವರು ‘ಟಾಕ್ಸಿಕ್’ ಸಿನಿಮಾಗೆ ಬೆಂಬಲ ನೀಡಿದ್ದಾರೆ. ಇದರಿಂದ ಯಶ್ ಅವರ ಅಭಿಮಾನಿಗಳಿಗೆ ಖುಷಿ ಆಗಿದೆ. ಈ ಮೊದಲು ‘ಧುರಂಧರ್’ ಮತ್ತು ‘ಟಾಕ್ಸಿಕ್’ ಚಿತ್ರಗಳ ನಡುವೆ ಪೈಪೋಟಿ ಏರ್ಪಟ್ಟಿತ್ತು. ಆದರೆ ‘ಟಾಕ್ಸಿಕ್’ ತಂಡ ರಿಲೀಸ್ ದಿನಾಂಕ ಬದಲಾಯಿಸಿಕೊಂಡಿತ್ತು.

‘ಟಾಕ್ಸಿಕ್’ ಪೋಸ್ಟರ್ ಹಂಚಿಕೊಂಡು ಯಶ್ ಬೆಂಬಲಕ್ಕೆ ನಿಂತ ‘ಧುರಂಧರ್’ ನಿರ್ದೇಶಕ ಆದಿತ್ಯ ಧರ್
Aditya Dhar, Yash
ಮದನ್​ ಕುಮಾರ್​
|

Updated on: Sep 01, 2026 | 9:27 PM

Share

‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾ (Toxic) ಬಿಡುಗಡೆ ಆಗಿ ಒಂದು ವಾರ ಕಳೆದಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲು ಕಷ್ಟಪಡುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಮುಖ್ಯವಾಗಿ ಉತ್ತರ ಭಾರತದ ಪ್ರೇಕ್ಷಕರಿಂದ ಹೆಚ್ಚು ಟೀಕೆಗಳು ಕೇಳಿಬರುತ್ತಿವೆ. ಈ ಎಲ್ಲದರ ಮಧ್ಯೆ ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ (Aditya Dhar) ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ.

ಆದಿತ್ಯ ಧರ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಯಶ್ ಅವರ ಫೋಟೋ ಒಂದನ್ನು ಹಂಚಿಕೊಂಡಿದ್ದು, ‘Yash’ ಎಂದು ಬರೆದು ತೋಳ್ಬಲ ಹಾಗೂ ಹಾರ್ಟ್ ಎಮೋಜಿಗಳನ್ನು ಜೋಡಿಸಿದ್ದಾರೆ. ಅವರು ನೇರವಾಗಿ ‘ಟಾಕ್ಸಿಕ್’ ಸಿನಿಮಾದ ಟೀಕೆಗಳ ಬಗ್ಗೆ ಮಾತನಾಡದಿದ್ದರೂ, ಪ್ರಸ್ತುತ ಸನ್ನಿವೇಶದಲ್ಲಿ ಅವರು ಯಶ್ ಅವರಿಗೆ ನೀಡಿದ ಈ ಬೆಂಬಲವು ಅಭಿಮಾನಿಗಳ ಗಮನ ಸೆಳೆದಿದೆ.

‘ಟಾಕ್ಸಿಕ್’ ಸಿನಿಮಾ ಪ್ರದರ್ಶನ ಮತ್ತು ಬಾಕ್ಸ್ ಆಫೀಸ್ ಗಳಿಕೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಈ ಸಮಯದಲ್ಲಿ, ಪ್ರಸಿದ್ಧ ನಿರ್ದೇಶಕರೊಬ್ಬರು ಬಹಿರಂಗವಾಗಿ ಬೆಂಬಲ ಸೂಚಿಸಿರುವುದು ಯಶ್ ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಬಗ್ಗೆ ಅವರು ಮುಂದಿನ ದಿನಗಳಲ್ಲಿ ಹೆಚ್ಚು ವಿವರ ನೀಡುವ ನಿರೀಕ್ಷೆ ಇದೆ.

ಆದಿತ್ಯ ಧರ್ ಅವರ ಈ ಪೋಸ್ಟ್ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆಯೊಂದು ಆರಂಭವಾಗಿದೆ. ಬಾಲಿವುಡ್‌ನಲ್ಲಿ ಬಿಗ್ ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶಿಸುವ ಆದಿತ್ಯ ಧರ್ ಹಾಗೂ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಾಸ್ ಇಮೇಜ್ ಹೊಂದಿರುವ ಯಶ್ ಒಂದಾದರೆ ಹೇಗಿರುತ್ತದೆ ಎಂದು ನೆಟ್ಟಿಗರು ಕಲ್ಪಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಶೀಘ್ರದಲ್ಲೇ ಒಂದು ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾ ಮೂಡಿಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.

ಇದನ್ನೂ ಓದಿ: ‘ಧುರಂಧರ್’ ಹೊಗಳುವ ನೆಪದಲ್ಲಿ ‘ಟಾಕ್ಸಿಕ್’ ತೆಗಳಿದ್ರಾ ರಾಮ್ ಗೋಪಾಲ್ ವರ್ಮಾ?

ಹಿಂದಿ ಪ್ರೇಕ್ಷಕರ ವಲಯದಲ್ಲಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಮನೆಮಾಡಿತ್ತು. ಹಾಗಾಗಿ ಮೊದಲ ದಿನವೇ ಈ ಸಿನಿಮಾಗೆ ಉತ್ತರ ಭಾರತದಿಂದ ಭರ್ಜರಿ ಕಲೆಕ್ಷನ್ ಆಯಿತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಮೂಡಿಬಂದಿಲ್ಲ ಎಂಬ ಕಾರಣಕ್ಕೆ ಚಿತ್ರದ ಬಗ್ಗೆ ನೆಗೆಟಿವ್ ಮಾತುಗಳು ಹೆಚ್ಚಿದ್ದವು. ಈಗ ಆದಿತ್ಯ ಧರ್ ಅವರು ಈ ಸಿನಿಮಾಗೆ ಬೆಂಬಲ ನೀಡಿರುವುದರಿಂದ ಅಭಿಮಾನಿಗಳಲ್ಲಿ ಚರ್ಚೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ದೆಹಲಿಯಲ್ಲಿ ಇಂಡಿ ಮೈತ್ರಿಕೂಟದ ಪ್ರತಿಭಟನೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಬಸ್ ಚಾಲನೆ ಮಾಡುತ್ತಲೇ ಮೊಬೈಲ್‌ನಲ್ಲಿ ಹರಟೆ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು