
‘ರಾಕಿಂಗ್ ಸ್ಟಾರ್’ ಯಶ್ (Yash) ಅಭಿನಯದ ‘ಟಾಕ್ಸಿಕ್’ ಸಿನಿಮಾ (Toxic) ಬಿಡುಗಡೆ ಆಗಿ ಒಂದು ವಾರ ಕಳೆದಿದೆ. ಚಿತ್ರಮಂದಿರಗಳಲ್ಲಿ ಈ ಸಿನಿಮಾ ಪ್ರದರ್ಶನ ಕಾಣುತ್ತಿದ್ದು, ಗಲ್ಲಾಪೆಟ್ಟಿಗೆಯಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್ ಮಾಡಲು ಕಷ್ಟಪಡುತ್ತಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ. ಮುಖ್ಯವಾಗಿ ಉತ್ತರ ಭಾರತದ ಪ್ರೇಕ್ಷಕರಿಂದ ಹೆಚ್ಚು ಟೀಕೆಗಳು ಕೇಳಿಬರುತ್ತಿವೆ. ಈ ಎಲ್ಲದರ ಮಧ್ಯೆ ‘ಧುರಂಧರ್’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ (Aditya Dhar) ಅವರು ಯಶ್ ಬೆಂಬಲಕ್ಕೆ ನಿಂತಿದ್ದಾರೆ.
ಆದಿತ್ಯ ಧರ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಯಶ್ ಅವರ ಫೋಟೋ ಒಂದನ್ನು ಹಂಚಿಕೊಂಡಿದ್ದು, ‘Yash’ ಎಂದು ಬರೆದು ತೋಳ್ಬಲ ಹಾಗೂ ಹಾರ್ಟ್ ಎಮೋಜಿಗಳನ್ನು ಜೋಡಿಸಿದ್ದಾರೆ. ಅವರು ನೇರವಾಗಿ ‘ಟಾಕ್ಸಿಕ್’ ಸಿನಿಮಾದ ಟೀಕೆಗಳ ಬಗ್ಗೆ ಮಾತನಾಡದಿದ್ದರೂ, ಪ್ರಸ್ತುತ ಸನ್ನಿವೇಶದಲ್ಲಿ ಅವರು ಯಶ್ ಅವರಿಗೆ ನೀಡಿದ ಈ ಬೆಂಬಲವು ಅಭಿಮಾನಿಗಳ ಗಮನ ಸೆಳೆದಿದೆ.
‘ಟಾಕ್ಸಿಕ್’ ಸಿನಿಮಾ ಪ್ರದರ್ಶನ ಮತ್ತು ಬಾಕ್ಸ್ ಆಫೀಸ್ ಗಳಿಕೆ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿರುವ ಈ ಸಮಯದಲ್ಲಿ, ಪ್ರಸಿದ್ಧ ನಿರ್ದೇಶಕರೊಬ್ಬರು ಬಹಿರಂಗವಾಗಿ ಬೆಂಬಲ ಸೂಚಿಸಿರುವುದು ಯಶ್ ಅಭಿಮಾನಿಗಳಿಗೆ ಸಂತಸ ತಂದಿದೆ. ಈ ಬಗ್ಗೆ ಅವರು ಮುಂದಿನ ದಿನಗಳಲ್ಲಿ ಹೆಚ್ಚು ವಿವರ ನೀಡುವ ನಿರೀಕ್ಷೆ ಇದೆ.
ಆದಿತ್ಯ ಧರ್ ಅವರ ಈ ಪೋಸ್ಟ್ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಹೊಸ ಚರ್ಚೆಯೊಂದು ಆರಂಭವಾಗಿದೆ. ಬಾಲಿವುಡ್‌ನಲ್ಲಿ ಬಿಗ್ ಆ್ಯಕ್ಷನ್ ಸಿನಿಮಾಗಳನ್ನು ನಿರ್ದೇಶಿಸುವ ಆದಿತ್ಯ ಧರ್ ಹಾಗೂ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಮಾಸ್ ಇಮೇಜ್ ಹೊಂದಿರುವ ಯಶ್ ಒಂದಾದರೆ ಹೇಗಿರುತ್ತದೆ ಎಂದು ನೆಟ್ಟಿಗರು ಕಲ್ಪಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರ ಕಾಂಬಿನೇಷನ್‌ನಲ್ಲಿ ಶೀಘ್ರದಲ್ಲೇ ಒಂದು ಬಿಗ್ ಬಜೆಟ್ ಆ್ಯಕ್ಷನ್ ಸಿನಿಮಾ ಮೂಡಿಬರಲಿ ಎಂದು ಅಭಿಮಾನಿಗಳು ಆಶಿಸುತ್ತಿದ್ದಾರೆ.
ಇದನ್ನೂ ಓದಿ: ‘ಧುರಂಧರ್’ ಹೊಗಳುವ ನೆಪದಲ್ಲಿ ‘ಟಾಕ್ಸಿಕ್’ ತೆಗಳಿದ್ರಾ ರಾಮ್ ಗೋಪಾಲ್ ವರ್ಮಾ?
ಹಿಂದಿ ಪ್ರೇಕ್ಷಕರ ವಲಯದಲ್ಲಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಹೆಚ್ಚು ನಿರೀಕ್ಷೆ ಮನೆಮಾಡಿತ್ತು. ಹಾಗಾಗಿ ಮೊದಲ ದಿನವೇ ಈ ಸಿನಿಮಾಗೆ ಉತ್ತರ ಭಾರತದಿಂದ ಭರ್ಜರಿ ಕಲೆಕ್ಷನ್ ಆಯಿತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಸಿನಿಮಾ ಮೂಡಿಬಂದಿಲ್ಲ ಎಂಬ ಕಾರಣಕ್ಕೆ ಚಿತ್ರದ ಬಗ್ಗೆ ನೆಗೆಟಿವ್ ಮಾತುಗಳು ಹೆಚ್ಚಿದ್ದವು. ಈಗ ಆದಿತ್ಯ ಧರ್ ಅವರು ಈ ಸಿನಿಮಾಗೆ ಬೆಂಬಲ ನೀಡಿರುವುದರಿಂದ ಅಭಿಮಾನಿಗಳಲ್ಲಿ ಚರ್ಚೆ ಶುರುವಾಗಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.