AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಮದುವೆಯಾದರೇ ಹಿರಿಯ ನಟಿ ಸಿಮ್ರಾನ್? ಜಯರಾಮ್ ಜೊತೆಗಿನ ಪೋಸ್ಟರ್ ಅಸಲಿಯತ್ತು ಇಲ್ಲಿದೆ

ನಟಿ ಸಿಮ್ರಾನ್ ಹಾಗೂ ನಟ ಜಯರಾಮ್ ಮದುವೆಯಾಗಿದ್ದಾರೆ ಎಂಬ ಸುದ್ದಿ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ. ಆದರೆ, ಇದು ನಿಜವಾದ ವಿವಾಹವಲ್ಲ; ಎಸ್. ವೈ. ಗೌತಮ್ ರಾಜ್ ನಿರ್ದೇಶನದ ನೂತನ ರೋಮ್ಯಾಂಟಿಕ್ ಕಾಮಿಡಿ ಸಿನಿಮಾದ ವಿಶೇಷ ಪ್ರಚಾರದ ಭಾಗವಾಗಿ ಈ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ಮತ್ತೆ ಮದುವೆಯಾದರೇ ಹಿರಿಯ ನಟಿ ಸಿಮ್ರಾನ್? ಜಯರಾಮ್ ಜೊತೆಗಿನ ಪೋಸ್ಟರ್ ಅಸಲಿಯತ್ತು ಇಲ್ಲಿದೆ
ಸಿಮ್ರನ್-ಜಯರಾಮ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 27, 2026 | 11:15 AM

Share

ಮುಖ್ಯಾಂಶಗಳು

  • ಸಿಮ್ರಾನ್-ಜಯರಾಮ್ ಮದುವೆ ಫೋಟೋ ವೈರಲ್
  • 'ಪಂಚತಂತ್ರಂ' ಜೋಡಿ 24 ವರ್ಷಗಳ ನಂತರ ಮತ್ತೆ ಒಂದೇ ಪರದೆಯಲ್ಲಿ
  • ವಿಭಿನ್ನ ಕಥಾಹಂದರದ ನೂತನ ಸಿನಿಮಾ

ದಕ್ಷಿಣ ಭಾರತೀಯ ಚಿತ್ರರಂಗದ ಖ್ಯಾತ ನಟಿ ಸಿಮ್ರಾನ್ ಹಾಗೂ ಹಿರಿಯ ನಟ ಜಯರಾಮ್ ಅವರು ಮದುವೆಯ ಉಡುಪಿನಲ್ಲಿ ಪರಸ್ಪರ ಹೂವಿನ ಹಾರ ಹಾಕಿ ಅಪ್ಪಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. 50 ವರ್ಷದ ಸಿಮ್ರಾನ್ ಹಾಗೂ ಜಯರಾಮ್ ಮದುವೆಯಾಗಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದ್ದಂತೆ ನೆಟಿಜನ್‌ಗಳು ಆಶ್ಚರ್ಯ ವ್ಯಕ್ತಪಡಿಸಿ ಕಾಮೆಂಟ್ ಮಾಡಲಾರಂಭಿಸಿದ್ದಾರೆ. ಆದರೆ, ಈ ವೈರಲ್ ಫೋಟೋಗಳ ಹಿಂದಿನ ನಿಜವಾದ ಕಥೆಯೇ ಬೇರೆ.

ಈ ಇಬ್ಬರೂ ಹಿರಿಯ ನಟರು ನಿಜವಾಗಿಯೂ ಮದುವೆಯಾಗಿಲ್ಲ. ಪ್ರಸ್ತುತ ಇಬ್ಬರೂ ತಮ್ಮ ವೈಯಕ್ತಿಕ ಜೀವನದಲ್ಲಿ ಈಗಾಗಲೇ ವಿವಾಹಿತರಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸದ್ದು ಮಾಡುತ್ತಿರುವ ಈ ಫೋಟೋಗಳು, ಅವರು ಒಟ್ಟಿಗೆ ನಟಿಸುತ್ತಿರುವ ಹೊಸ ಸಿನಿಮಾದ ಪ್ರಚಾರಕ್ಕಾಗಿ ಮಾಡಿದ ನವೀನ ಅಭಿಯಾನದ ಭಾಗವಾಗಿದೆ.

‘ರಾಕ್ಷಸಿ’ ಹಾಗೂ ‘ಕಳುವೇತ್ತಿ ಮೂರ್ಖನ್’ ಚಿತ್ರಗಳ ಮೂಲಕ ಪ್ರಸಿದ್ಧರಾಗಿರುವ ನಿರ್ದೇಶಕ ಎಸ್. ವೈ. ಗೌತಮ್ ರಾಜ್ ನಿರ್ದೇಶನದ ನೂತನ ಚಿತ್ರದಲ್ಲಿ ಸಿಮ್ರಾನ್ ಮತ್ತು ಜಯರಾಮ್ ನಾಯಕ-ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನಟ ಆರ್‍ಯ ಅವರ ‘ದ ಶೋ ಪೀಪಲ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಪೂಜಾ ಸಮಾರಂಭ ಇತ್ತೀಚೆಗೆ ಅದ್ಧೂರಿಯಾಗಿ ನೆರವೇರಿತ್ತು.

ಈ ಮುಂಚೆ 2002ರಲ್ಲಿ ಬಿಡುಗಡೆಯಾಗಿದ್ದ ಕಮಲ್ ಹಾಸನ್ ಅಭಿನಯದ ಹಿಟ್ ಸಿನಿಮಾ ‘ಪಂಚತಂತ್ರಂ’ನಲ್ಲಿ ಸಿಮ್ರಾನ್ ಮತ್ತು ಜಯರಾಮ್ ಒಟ್ಟಿಗೆ ನಟಿಸಿದ್ದರು. ಆದರೆ, ಆ ಚಿತ್ರದಲ್ಲಿ ಸಿಮ್ರಾನ್ ಅವರಿಗೆ ಕಮಲ್ ಹಾಸನ್ ಜೋಡಿಯಾಗಿದ್ದರು. ಸುಮಾರು 24 ವರ್ಷಗಳ ನಂತರ ಇವರಿಬ್ಬರೂ ಮತ್ತೆ ಒಂದೇ ಪರದೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದು, ಪೂರ್ಣಪ್ರಮಾಣದ ನಾಯಕ-ನಾಯಕಿಯಾಗಿ ಜೋಡಿಯಾಗುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಈ ಚಿತ್ರವು ಸಂಪೂರ್ಣ ರೋಮ್ಯಾಂಟಿಕ್ ಕಾಮಿಡಿ ಹಾಗೂ ಫ್ಯಾಮಿಲಿ ಎಂಟರ್‌ಟೈನರ್ ಕಥಾಹಂದರವನ್ನು ಹೊಂದಿದೆ. 90ರ ದಶಕದ ಪೀಳಿಗೆ ಹಾಗೂ ಇಂದಿನ ಜನರೇಷನ್ ಝೆನ್​ ಜಿ ನಡುವಿನ ಚಿಂತನೆಗಳು, ಬಾಂಧವ್ಯಗಳು ಮತ್ತು ಜೀವನಶೈಲಿಯಲ್ಲಿರುವ ವ್ಯತ್ಯಾಸಗಳನ್ನು ಅತ್ಯಂತ ಹಾಸ್ಯಮಯವಾಗಿ ಚಿತ್ರಿಸುವ ಪ್ರಯತ್ನವನ್ನು ನಿರ್ದೇಶಕರು ಮಾಡಿದ್ದಾರೆ. ಎರಡು ವಿಭಿನ್ನ ತಲೆಮಾರುಗಳು ಮುಖಾಮುಖಿಯಾದಾಗ ಎದುರಾಗುವ ಸನ್ನಿವೇಶಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸಲಿವೆ.

ಇದನ್ನೂ ಓದಿ: ರಿಲೀಸ್​ಗೆ ರೆಡಿ ಆಯ್ತು ಮೋಕ್ಷಿತಾ ಪೈ ಹೊಸ ಸಿನಿಮಾ; ಡಿಗ್ಲಾಮ್ ಲುಕ್​ನಲ್ಲಿ ಮಿಂಚಲಿದ್ದಾರೆ ನಟಿ

ಈ ಸಿನಿಮಾದಲ್ಲಿ ಸಿಮ್ರಾನ್ ಮತ್ತು ಜಯರಾಮ್ ಅವರೊಂದಿಗೆ ಪೊನ್ವೇಲ್, ದೇವಿಕಾ ಸತೀಶ್ ಹಾಗೂ ಭಗವತಿ ಪೆರುಮಾಳ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸುತ್ತಿದ್ದು, ಚಿತ್ರದ ಕುರಿತ ಹೆಚ್ಚಿನ ಮಾಹಿತಿಯನ್ನು ಚಿತ್ರತಂಡ ಶೀಘ್ರದಲ್ಲೇ ಅಧಿಕೃತವಾಗಿ ಪ್ರಕಟಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಅತ್ತಿಬೆಲೆ ಪೆಟ್ರೋಲ್ ಬಂಕ್​ಗೆ ನುಗ್ಗಿದ ಜಾಗ್ವಾರ್ ಕಾರು: ಭಾರಿ ಅಗ್ನಿ ಅವಘಡ
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಯಾರಿಗೆ ವೆಂಕಟೇಶ್ವರ ಸ್ವಾಮಿ ಕೃಪೆ?, ಯಾರಿಗೆ ಧನಲಾಭ?
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ