‘ಪ್ರಾಜೆಕ್ಟ್ ಕೆ’ಗೆ 150 ಕೋಟಿ ಸಂಭಾವನೆ ಪಡೆದರೇ ಪ್ರಭಾಸ್? ನಿರ್ಮಾಪಕಿ ಹೇಳಿದ್ದೇನು?

Prabhas: ನಟ ಪ್ರಭಾಸ್ ತಮ್ಮ ಮುಂಬರುವ ಪ್ರಾಜೆಕ್ಟ್ ಕೆ ಸಿನಿಮಾಕ್ಕಾಗಿ 150 ಕೋಟಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ಈ ಬಗ್ಗೆ ಸಿನಿಮಾದ ಕಾರ್ಯಕಾರಿ ನಿರ್ಮಾಪಕಿ ಸ್ಪಷ್ಟನೆ ನೀಡಿದ್ದಾರೆ.

'ಪ್ರಾಜೆಕ್ಟ್ ಕೆ'ಗೆ 150 ಕೋಟಿ ಸಂಭಾವನೆ ಪಡೆದರೇ ಪ್ರಭಾಸ್? ನಿರ್ಮಾಪಕಿ ಹೇಳಿದ್ದೇನು?
ಪ್ರಭಾಸ್-ಪ್ರಾಜೆಕ್ಟ್ ಕೆ
Follow us
|

Updated on: Jul 06, 2023 | 9:30 PM

ಪ್ರಭಾಸ್ ನಟನೆಯ ಆದಿಪುರುಷ್ (Adipurush) ಸಿನಿಮಾ ಕೆಲವು ದಿನಗಳ ಹಿಂದೆ ಬಿಡುಗಡೆ ಆಗಿ ಹೀನಾಯ ಸೋಲು ಕಂಡಿದೆ. ಬಾಕ್ಸ್ ಆಫೀಸ್​ನಲ್ಲಿ (Box Office) ತಕ್ಕ ಮಟ್ಟಿನ ಕಲೆಕ್ಷನ್ ಮಾಡಿದೆಯಾದರೂ ಸಿನಿಮಾದ ಬಗ್ಗೆ ಇದ್ದ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದೆ. ಆದಿಪುರುಷ್ ಸಿನಿಮಾದಿಂದ ಪ್ರಭಾಸ್ ಅಭಿಮಾನಿಗಳು ನಿರಾಸೆಗೊಂಡಿದ್ದು ಅವರ ನಿರೀಕ್ಷೆ ಇದೀಗ ಸಲಾರ್ ಹಾಗೂ ಪ್ರಾಜೆಕ್ಟ್ ಕೆ ಎಡೆಗೆ ತಿರುಗಿದೆ. ಸಲಾರ್ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಆದರೆ ಪ್ರಾಜೆಕ್ಟ್ ಕೆ ಸಿನಿಮಾದ ಚಿತ್ರೀಕರಣ ಇನ್ನೂ ಚಾಲ್ತಿಯಲ್ಲಿದೆ. ಈ ನಡುವೆ ಪ್ರಾಜೆಕ್ಟ್ ಕೆ (Project K) ಸಿನಿಮಾಕ್ಕೆ ಪ್ರಭಾಸ್ ಭಾರಿ ಮೊತ್ತದ ಸಂಭಾವನೆ ಪಡೆದಿದ್ದಾರೆ ಎಂದು ಸುದ್ದಿಯಾಗಿತ್ತು. ಈ ಬಗ್ಗೆ ಸಿನಿಮಾದ ಕಾರ್ಯಕಾರಿ ನಿರ್ಮಾಪಕಿ ಪ್ರಿಯಾಂಕಾ ದತ್ತ ಸ್ಪಷ್ಟನೆ ನೀಡಿದ್ದಾರೆ.

ಪ್ರಾಜೆಕ್ಟ್ ಕೆ ಸಿನಿಮಾದ ನಿರ್ಮಾಪಕ ಅಶ್ವಿನ್ ದತ್ತ ಪುತ್ರಿ ಪ್ರಿಯಾಂಕಾ ದತ್ತ ‘ಪ್ರಾಜೆಕ್ಟ್ ಕೆ’ ಸಿನಿಮಾದ ಕಾರ್ಯಕಾರಿಣಿ ನಿರ್ಮಾಪಕಿಯಾಗಿದ್ದಾರೆ. ಈ ಸಿನಿಮಾದ ನಿರ್ದೇಶಕ ನಾಗ್ ಅಶ್ವಿನ್ ಅವರ ಪತ್ನಿಯೂ ಸಹ ಹೌದು. ಭಾರಿ ಬಜೆಟ್​ನಲ್ಲಿ ನಿರ್ಮಾಣವಾಗುತ್ತಿರುವ ಪ್ರಾಜೆಕ್ಟ್ ಕೆ ಸಿನಿಮಾದ ನಟರ ಸಂಭಾವನೆ ಬಗ್ಗೆ ಅಲ್ಲಲ್ಲಿ ಸುದ್ದಿಗಳು ಹರಿದಾಡುತ್ತಿದ್ದು ಈ ಸಿನಿಮಾದ ನಟ ಸಂಭಾವನೆಗೆ ಸುಮಾರು 300 ಕೋಟಿ ಖರ್ಚು ಮಾಡಲಾಗಿದೆ ಅದರಲ್ಲಿ ದೊಡ್ಡ ಭಾಗವನ್ನು ಪ್ರಭಾಸ್ ಒಬ್ಬರಿಗೇ ನೀಡಲಾಗಿದೆ ಎನ್ನಲಾಗುತ್ತಿದೆ.

ಪ್ರಾಜೆಕ್ಟ್ ಕೆ ಸಿನಿಮಾಕ್ಕಾಗಿ ಪ್ರಭಾಸ್ ಒಬ್ಬರೇ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಅದೆಲ್ಲ ಸುಳ್ಳು ಎಂದು ಸ್ವತಃ ಪ್ರಿಯಾಂಕಾ ದತ್ತ ಸ್ಪಷ್ಟನೆ ನೀಡಿದ್ದಾರೆ. ಪ್ರಭಾಸ್ ಎಷ್ಟು ಸಂಭಾವನೆ ಪಡೆದಿದ್ದಾರೆ ಎಂಬುದನ್ನು ಪ್ರಿಯಾಂಕಾ ತಿಳಿಸಿಲ್ಲವಾದರೂ 150 ಕೋಟಿ ಸಂಭಾವನೆ ಪಡೆದಿರುವುದು ಸುಳ್ಳು ಎಂದು ಖಾತ್ರಿಪಡಿಸಿದ್ದಾರೆ. ಅಲ್ಲದೆ ಈ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ಕಮಲ್ ಹಾಸನ್ ಸಹ 100 ಕೋಟಿ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಮಾತುಗಳು ಹರಿದಾಡಿದ್ದವು ಆದರೆ ಅದೂ ಸಹ ಸುಳ್ಳು ಎಂದಾಗಿದ್ದು ಕಮಲ್​ಗೆ 30 ಕೋಟಿ ರೂಪಾಯಿ ಸಂಭಾವನೆ ನೀಡಲಾಗುತ್ತಿದೆಯಂತೆ.

ಇದನ್ನೂ ಓದಿ:Project K Budget: ‘ಪ್ರಾಜೆಕ್ಟ್​ ಕೆ’ ಕಲಾವಿದರ ಒಟ್ಟು ಸಂಭಾವನೆ 200 ಕೋಟಿ ರೂ? ಇದರಲ್ಲಿ ಪ್ರಭಾಸ್​, ಕಮಲ್​ ಹಾಸನ್​ ಪಾಲು ಎಷ್ಟು?

ಪ್ರಾಜೆಕ್ಟ್ ಕೆ ಸಿನಿಮಾ ಭಾರತದ ಈವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಆಗಿರಲಿದೆ. ಈ ಸಿನಿಮಾಕ್ಕೆ ಸುಮಾರು 600 ಕೋಟಿ ವೆಚ್ಚ ಮಾಡುತ್ತಿದ್ದಾರೆ ನಿರ್ಮಾಪಕ ಅಶ್ವಿನ್ ದತ್ತ. ಭಾರತದಲ್ಲಿ ಈ ವರೆಗೆ ಯಾರೂ ಬಳಸದ ಮಾದರಿಯ ವಿಎಫ್​ಕ್ಸ್ ಹಾಗೂ ಅತ್ಯಂತ ಅದ್ಧೂರಿ ಸೆಟ್​ಗಳನ್ನು ಬಳಸಲಾಗುತ್ತಿದೆ. ಈ ಸಿನಿಮಾದ ಕತೆಯೂ ಭಿನ್ನವಾಗಿದ್ದು ಭವಿಷ್ಯ ಹಾಗೂ ಭೂತಕಾಲದ ಪ್ರಪಂಚಗಳ ಬಗೆಗಿನ ಸಿನಿಮಾ ಇದಾಗಿದೆ. ಸಿನಿಮಾದಲ್ಲಿ ಪ್ರಭಾಸ್ ಎರಡು ಷೇಡ್​ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಪ್ರಾಜೆಕ್ಟ್ ಕೆ ಸಿನಿಮಾಕ್ಕೆ ಹಿರಿಯ ನಿರ್ದೇಶಕ ಸಿಂಗೀತಂ ಶ್ರೀನಿವಾಸ್ ಕತೆ ಬರೆದಿದ್ದು ಚಿತ್ರಕತೆಯನ್ನು ನಾಗ್ ಅಶ್ವಿನ್ ಬರೆದಿದ್ದಾರೆ. ಸಿನಿಮಾದಲ್ಲಿ ಪ್ರಭಾಸ್ ಜೊತೆಗೆ ದೀಪಿಕಾ ಪಡುಕೋಣೆ, ದಿಶಾ ಪಟಾನಿ ನಾಯಕಿಯರಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಅಮಿತಾಬ್ ಬಚ್ಚನ್, ಕಮಲ್ ಹಾಸನ್ ಅಂಥಹಾ ದಿಗ್ಗಜ ನಟರೂ ಇದ್ದಾರೆ. ಭಾರಿ ದೊಡ್ಡ ತಾರಾಗಣ ಈ ಸಿನಿಮಾದಲ್ಲಿದೆ. ಈ ಸಿನಿಮಾಕ್ಕಾಗಿ ಮಹೀಂದ್ರಾ ಸಂಸ್ಥೆಯ ಮೂಲಕ ಅತ್ಯಾಧುನಿಕ ಮಾದರಿ ಕಾರುಗಳನ್ನು ಸಹ ಮಾಡಿಸಲಾಗಿದೆ. ಸಿನಿಮಾದ ಅಧಿಕೃತ ಹೆಸರನ್ನು ಇನ್ನು ಕೆಲವೇ ದಿನಗಳಲ್ಲಿ ಚಿತ್ರತಂಡ ಘೋಷಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ