ರೇವ್​ ಪಾರ್ಟಿ ಸ್ಥಳದಲ್ಲೇ ವಿಡಿಯೋ ಮಾಡಿ ‘ಹೈದರಾಬಾದ್​ನಲ್ಲಿ ಇದೀನಿ’ ಅಂತ ಸುಳ್ಳು ಹೇಳಿದ ನಟಿ ಹೇಮಾ

ಬೆಂಗಳೂರಿನ ರೇವ್​ ಪಾರ್ಟಿಗೂ ತಮಗೂ ಯಾವುದೇ ಸಂಬಂಧ ಇಲ್ಲ ಎಂದು ನಟಿ ಹೇಮಾ ಅವರು ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದರು. ಆದರೆ ಅವರು ಸುಳ್ಳು ಹೇಳಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ರೇವ್​ ಪಾರ್ಟಿ ನಡೆದ ಫಾರ್ಮ್​ ಹೌಸ್​ನ ಆವರಣದಿಂದಲೇ ಅವರು ಈ ವಿಡಿಯೋ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಆ ಬಗ್ಗೆ ಇಲ್ಲಿದೆ ವಿವರ..

ರೇವ್​ ಪಾರ್ಟಿ ಸ್ಥಳದಲ್ಲೇ ವಿಡಿಯೋ ಮಾಡಿ ‘ಹೈದರಾಬಾದ್​ನಲ್ಲಿ ಇದೀನಿ’ ಅಂತ ಸುಳ್ಳು ಹೇಳಿದ ನಟಿ ಹೇಮಾ
Hema
Follow us
ರಾಚಪ್ಪಾಜಿ ನಾಯ್ಕ್
| Updated By: ಮದನ್​ ಕುಮಾರ್​

Updated on: May 20, 2024 | 3:27 PM

ತೆಲುಗು ನಟಿ ಹೇಮಾ (Telugu Actress Hema) ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್​ ಸಿಟಿಯಲ್ಲಿ ನಡೆದ ರೇವ್​ ಪಾರ್ಟಿಯಲ್ಲಿ ಅವರು ಭಾಗಿ ಆಗಿರುವ ಸುದ್ದಿ ಹೊರಬಿದ್ದಿದೆ. ಆದರೆ ತಾವು ಈ ಪಾರ್ಟಿಯಲ್ಲಿ ಇರಲಿಲ್ಲ ಎಂದು ವಿಡಿಯೋ ಮೂಲಕ ಹೇಮಾ ಅವರು ಸ್ಪಷ್ಟಪಡಿಸಿದ್ದರು. ಅದರ ಬೆನ್ನಲ್ಲೇ ಅಸಲಿ ವಿಷಯ ಗೊತ್ತಾಗಿದೆ. ರೇವ್​ ಪಾರ್ಟಿ (Rave Party) ನಡೆದ ಬೆಂಗಳೂರಿನ ರೆಸಾರ್ಟ್​ನಿಂದಲೇ ವಿಡಿಯೋ ಮಾಡಿ ‘ನಾನು ಹೈದರಾಬಾದ್​​ನಲ್ಲಿ ಇದ್ದೀನಿ’ ಎಂದು ಹೇಮಾ ಸುಳ್ಳು ಹೇಳಿದ್ದಾರೆ.

ಬೆಂಗಳೂರಿನ ಜಿ.ಆರ್. ಫಾರ್ಮ್​​ಹೌಸ್​ ರೇವ್​​ ಪಾರ್ಟಿ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ಮೇ 20ರ ಮುಂಜಾನೆ ಸಿಸಿಬಿ ಪೊಲೀಸರು ದಾಳಿ ಮಾಡಿದರು. ಈ ವೇಳೆ ಅನೇಕರು ಸಿಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಪಾರ್ಟಿಯಲ್ಲಿ ನಟಿ ಹೇಮಾ ಕೂಡ ಇದ್ದರು ಎನ್ನಲಾಗಿದೆ. ಬಳಿಕ ಅವರು ಶೌಚಾಲಯಕ್ಕೆ ಹೋಗುವುದಾಗಿ ಹೇಳಿ, ಪಾರ್ಟಿ ನಡೆದ ಫಾರ್ಮ್​ಹೌಸ್​ನ ಆವರಣದಲ್ಲೇ ಸ್ನೇಹಿತನನ್ನು ಕರೆಸಿಕೊಂಡು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ತೆಲುಗು ನಟಿಯರು ಭಾಗಿಯಾಗಿದ್ದ ರೇವ್​​ಪಾರ್ಟಿ ಮೇಲೆ ಸಿಸಿಬಿ ದಾಳಿ; ಡ್ರಗ್ಸ್, ಕೊಕೇನ್ ಪತ್ತೆ

‘ನಾನು ಎಲ್ಲಿಗೂ ಹೋಗಿಲ್ಲ. ಹೈದರಾಬಾದ್​ನಲ್ಲಿ ಒಂದು ಫಾರ್ಮ್​ಹೌಸ್​ನಲ್ಲಿ ಇದ್ದೇನೆ. ನನ್ನ ಬಗ್ಗೆ ಕೇಳಿಬಂದಿರುವ ಸುದ್ದಿ ಫೇಕ್​. ಅದನ್ನು ನಂಬಬೇಡಿ’ ಎಂದು ಹೇಮಾ ವಿಡಿಯೋ ಮಾಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಇದು ವೈರಲ್​ ಆಗಿದೆ. ಆದರೆ ಅವರು ಈಗಲೂ ಜಿ.ಆರ್. ಫಾರ್ಮ್​​ಹೌಸ್​ನಲ್ಲೇ ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಅವರು ವಿಡಿಯೋ ಮಾಡಿದ ಸ್ಥಳವನ್ನು ಸಿಸಿಬಿ ಪೊಲೀಸರು ಪರಿಶೀಲಿಸಿದ್ದಾರೆ.

ಕಾಲಿಗೆ ಬಿದ್ದು ಬೇಡಿಕೊಂಡ್ರಾ?

ತೆಲುಗಿನ ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡಿ ಹೇಮಾ ಅವರು ಫೇಮಸ್​ ಆಗಿದ್ದಾರೆ. ರೇವ್​ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿರುವುದು ಅವರಿಗೆ ಮುಜುಗರ ತಂದಿದೆ. ಹಾಗಾಗಿ ತಮ್ಮ ಹೆಸರು ಬಹಿರಂಗಪಡಿಸದಂತೆ ಅಧಿಕಾರಿಗಳ ಬಳಿ ಅವರು ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ, ಒಂದು ವೇಳೆ ಹೆಸರು ಬಹಿರಂಗಪಡಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆಂದು ಬೆದರಿಕೆ ಹಾಕಿದ್ದಾರೆ ಹಾಗೂ ಅಧಿಕಾರಿಗಳ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ