AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಲ್ ರಾಜು ಜೊತೆ ಸಿನಿಮಾ ಮಾಡಲಿದ್ದಾರೆ ಯಶ್, ಆದರೆ ಯಾವಾಗ?

Yash-Dil Raju: ಯಶ್ ಜೊತೆಗೆ ಕೆಲಸ ಮಾಡಲು ಭಾರತದ ದೊಡ್ಡ ದೊಡ್ಡ ನಿರ್ಮಾಪಕರು ಸಾಲುಗಟ್ಟಿ ನಿಂತಿದ್ದಾರೆ. ತೆಲುಗಿನ ಖ್ಯಾತ ವಿತರಕ ಮತ್ತು ನಿರ್ಮಾಪಕ ದಿಲ್ ರಾಜು ಸಹ ಯಶ್ ಜೊತೆಗೆ ಸಿನಿಮಾ ಮಾಡಲು ತುದಿಗಾಲಲ್ಲಿದ್ದು, ಈ ಬಗ್ಗೆ ಯಶ್ ಜೊತೆಗೆ ಮಾತುಕತೆ ಸಹ ಆಡಿದ್ದಾರಂತೆ.

ದಿಲ್ ರಾಜು ಜೊತೆ ಸಿನಿಮಾ ಮಾಡಲಿದ್ದಾರೆ ಯಶ್, ಆದರೆ ಯಾವಾಗ?
Dil Raju Yash1
ಮಂಜುನಾಥ ಸಿ.
|

Updated on: Aug 23, 2026 | 3:22 PM

Share

ನಿನ್ನೆ (ಆಗಸ್ಟ್ 22) ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ (Toxic) ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ಭಾರಿ ಅದ್ಧೂರಿಯಾಗಿ ನಡೆದಿದೆ. ತೆಲುಗು ರಾಜ್ಯಗಳಲ್ಲಿ ಸಿನಿಮಾ ವಿತರಣೆ ಮಾಡಲಿರುವ ಖ್ಯಾತ ವಿತರಕ ಮತ್ತು ನಿರ್ಮಾಪಕ ದಿಲ್ ರಾಜು ಸೇರಿದಂತೆ ‘ಟಾಕ್ಸಿಕ್’ ಸಿನಿಮಾದ ಪ್ರಮುಖ ನಟ, ನಟಿಯರು, ನಿರ್ಮಾಪಕರು, ತಂತ್ರಜ್ಞರು ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ದಿಲ್ ರಾಜು ಅವರು ಯಶ್ ಅವರ ಬಗ್ಗೆ ಮಾತನಾಡುತ್ತಾ, ‘ಯಶ್ ಈಗಾಗಲೇ ತಮ್ಮ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡಿದ್ದಾರೆ’ ಎಂದರು.

ಯಶ್ ಅವರನ್ನು ಅವರ ದೂರದೃಷ್ಟಿ, ಮಹಾತ್ವಾಕಾಂಕ್ಷೆ, ಸಿನಿಮಾ ಬಗ್ಗೆ ಪ್ರೀತಿ, ಫ್ಯಾಷನ್ ಅನ್ನು ಬಹುವಾಗಿ ಕೊಂಡಾಡಿದ ದಿಲ್ ರಾಜು, ‘ಟಾಕ್ಸಿಕ್’ ಸಿನಿಮಾದ ಕೆಲ ದೃಶ್ಯಗಳನ್ನೂ ನೋಡಿಯೇ, ಯಶ್ ಹಾಗೂ ಕೆವಿಎನ್ ವೆಂಕಟ್ ಅವರು ಹೇಳಿದ ದರ ಕೊಟ್ಟು ವಿತರಣೆ ಹಕ್ಕು ಖರೀದಿ ಮಾಡಿದ್ದೇನೆ ಎಂದರು. ‘ಕೆಜಿಎಫ್ 2’ ಅನ್ನೂ ಮೀರಿಸುವ ರೀತಿಯ ಸಿನಿಮಾ ಇದಾಗಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಅದೇ ಕಾರ್ಯಕ್ರದಲ್ಲಿ ನಿರೂಪಕಿ ಸುಮಾ ಅವರು, ‘ಯಶ್ ಅವರೊಟ್ಟಿಗೆ ತೆಲುಗು ಸಿನಿಮಾ ಯಾವಾಗ ಮಾಡುತ್ತೀರ?’ ಎಂದು ದಿಲ್ ರಾಜು ಅವರನ್ನು ಪ್ರಶ್ನೆ ಮಾಡಿದರು.

ಅದಕ್ಕೆ ಉತ್ತರಿಸಿದ ನಿರ್ಮಾಪಕ ದಿಲ್ ರಾಜು, ‘ಈಗ ಬಗ್ಗೆ ನಾವು ಮೊದಲೇ ಮಾತನಾಡಿಕೊಂಡಿದ್ದೇವೆ. ಯಶ್ ಸಹ ಓಕೆ ಎಂದಿದ್ದಾರೆ. ಖಂಡಿತ ಸಿನಿಮಾ ಮಾಡೋಣ, ಒಳ್ಳೆಯ ಕತೆ ಬರಲಿ, ನಾವು ಸಿನಿಮಾ ಮಾಡುವ ಕತೆ ನಮ್ಮನ್ನು ಹುಡುಕಿಕೊಂಡು ಬರುತ್ತದೆ. ಅಲ್ಲಿಯ ವರೆಗೆ ಕಾಯೋಣ ಎಂದಿದ್ದಾರೆ’ ಎಂದರು ದಿಲ್ ರಾಜು. ಆ ಮೂಲಕ ಯಶ್ ಅವರೊಟ್ಟಿಗೆ ಸಿನಿಮಾ ಮಾಡಲು ತಾವು ರೆಡಿ ಹಾಗೂ ಯಶ್ ಸಹ ಇದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.

ಇದನ್ನೂ ಓದಿ:ಬಿಡುಗಡೆಗೂ ಮೊದಲೇ ‘ಧುರಂಧರ್ 2’ ದಾಖಲೆ ಮುರಿದ ‘ಟಾಕ್ಸಿಕ್’ ಸಿನಿಮಾ

ಯಶ್, ಒಂದು ಸಿನಿಮಾ ಮಾಡಲು ನಾಲ್ಕೈದು ವರ್ಷಗಳನ್ನೇ ತೆಗೆದುಕೊಳ್ಳುತ್ತಾರೆ. ‘ಕೆಜಿಎಫ್ 2’ ಸಿನಿಮಾ 2022 ರಲ್ಲಿ ಬಿಡುಗಡೆ ಆಗಿತ್ತು. ಈಗ ನಾಲ್ಕೂ ವರ್ಷಗಳ ಬಳಿಕ ಅವರ ‘ಟಾಕ್ಸಿಕ್’ ರಿಲೀಸ್ ಆಗಲಿದೆ. ಆದರೆ ಯಶ್ ಅಭಿಮಾನಿಗಳಿಗೆ ಖುಷಿ ಸುದ್ದಿಯೆಂದರೆ ಇದೇ ವರ್ಷ ಅವರು ನಟಿಸಿರುವ ‘ರಾಮಾಯಣ’ ಸಹ ಬಿಡುಗಡೆ ಆಗಲಿದೆ. ನಾಲ್ಕು ವರ್ಷ ಕಾದಿದ್ದಕ್ಕೆ ಒಂದೇ ವರ್ಷದಲ್ಲಿ ಎರಡೆರಡು ಸಿನಿಮಾಗಳು ಬಿಡುಗಡೆ ಆಗುತ್ತವೆ.

ಇನ್ನು ದಿಲ್ ರಾಜು ಸಹ ಬಹಳ ದೊಡ್ಡ ನಿರ್ಮಾಪಕ. 400 ಕ್ಕೂ ಹೆಚ್ಚು ಸಿನಿಮಾಗಳಣ್ನು ವಿತರಣೆ ಮಾಡಿದ್ದಾರೆ. 60ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ರಾಮ್ ಚರಣ್, ಅಲ್ಲು ಅರ್ಜುನ್, ಪ್ರಭಾಸ್, ವೆಂಕಟೇಶ್, ಜೂ ಎನ್​​ಟಿಆರ್, ಪವನ್ ಕಲ್ಯಾಣ್ ಹೀಗೆ ತೆಲುಗಿನ ಬಹುತೇಕ ಸ್ಟಾರ್ ನಟರುಗಳ ಜೊತೆಗೆ ಒಂದಕ್ಕಿಂತಲೂ ಹೆಚ್ಚು ಸಿನಿಮಾಗಳನ್ನು ಮಾಡಿದ್ದಾರೆ. ಇದೀಗ ವಿಜಯ್ ದೇವರಕೊಂಡ ನಟನೆಯ ‘ರೌಡಿ ಜನಾರ್ಧನ್’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ