AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ

ದಿಲೀಪ್​ ಕುಮಾರ್​ ಅವರಿಗೀಗ 98 ವರ್ಷ. ಇಂದು ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡಿದೆ ಎಂದೂ ಆಸ್ಪತ್ರೆ ಮಾಹಿತಿ ನಿಡಿದೆ. ವಯೋಸಹಜವಾಗಿ ಅವರಲ್ಲಿ ನಿಶ್ಯಕ್ತಿ ಇದೆ.

Dilip Kumar: ಬಾಲಿವುಡ್​ ಖ್ಯಾತ ನಟ ದಿಲೀಪ್​ ಕುಮಾರ್​ ಮತ್ತೆ ಆಸ್ಪತ್ರೆಗೆ ದಾಖಲು; ಐಸಿಯುನಲ್ಲಿ ಚಿಕಿತ್ಸೆ
ದಿಲೀಪ್​ ಕುಮಾರ್​
TV9 Web
| Edited By: |

Updated on:Jun 30, 2021 | 12:46 PM

Share

ಬಾಲಿವುಡ್ ಖ್ಯಾತ ನಟ ದಿಲೀಪ್​ ಕುಮಾರ್​ ಅನಾರೋಗ್ಯದಿಂದ ಮುಂಬೈನ ಹಿಂದುಜಾ ಆಸ್ಪತ್ರೆಗೆ ನಿನ್ನೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಅವರಿಗೆ ಈಗ ತೀವ್ರ ನಿಗಾ ಘಟಕ (ICU)ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆಯೂ ದಿಲೀಪ್​ ಕುಮಾರ್​ಗೆ ಇದೇ ಸಮಸ್ಯೆಯಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಪಡೆದು ಡಿಸ್​ಚಾರ್ಜ್​ ಆಗಿ 10 ದಿನಗಳ ನಂತರ ಮತ್ತೊಮ್ಮೆ ಉಸಿರಾಡಲಾಗದೆ ಕಷ್ಟಪಡುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ದಿಲೀಪ್​ ಕುಮಾರ್​ ಅವರಿಗೀಗ 98 ವರ್ಷ. ಇಂದು ಆರೋಗ್ಯದಲ್ಲಿ ಸ್ವಲ್ಪಮಟ್ಟಿನ ಚೇತರಿಕೆ ಕಂಡಿದೆ ಎಂದೂ ಆಸ್ಪತ್ರೆ ಮಾಹಿತಿ ನಿಡಿದೆ. ವಯೋಸಹಜವಾಗಿ ಅವರಲ್ಲಿ ನಿಶ್ಯಕ್ತಿ ಇದೆ. ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿರುವ ಕಾರಣ ಯಾವುದೇ ರಿಸ್ಕ್​ ತೆಗೆದುಕೊಳ್ಳುವುದು ಬೇಡವೆಂದು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಉಲ್ಲೇಖಿಸಿದೆ. ದಿಲೀಪ್​ ಕುಮಾರ್​ ಜೂನ್​ 6ರಂದು ಸಹ ಇದೇ ಆಸ್ಪತ್ರೆಗೆ ದಾಖಲಾಗಿದ್ದರು. ಅವರ ಶ್ವಾಸಕೋಶದಲ್ಲಿ ಸಮಸ್ಯೆ ಇರುವುದು ಗೊತ್ತಾಗಿತ್ತು. ಆಗ 5 ದಿನ ಆಸ್ಪತ್ರೆಯಲ್ಲಿ ಇದ್ದು ಚಿಕಿತ್ಸೆ ಪಡೆದಿದ್ದರು.

ದಿಲೀಪ್​ ಕುಮಾರ್ ಬಾಲಿವುಡ್​ನಲ್ಲಿ ಮಿಂಚಿದವರು. ಮೊಘಲ್​ ಎ ಅಜಮ್​, ದೇವ್​ದಾಸ್​, ನಯಾ ದೌರ್​ ಮತ್ತು ರಾಮ್​ ಔರ್​ ಶ್ಯಾಮ್​ನಂತಹ ಅದ್ಭುತ ಸಿನಿಮಾಗಳನ್ನು ಕೊಟ್ಟು ಹೆಸರುಗಳಿಸಿದವರು. ಅಪಾರ ಅಭಿಮಾನಿ ಬಳಗವನ್ನು ಸೃಷ್ಟಿಸಿಕೊಂಡಿರುವ ನಟ. ಇವರ ಕೊನೇ ಸಿನಿಮಾ 1998ರಲ್ಲಿ ಬಿಡುಗಡೆಯಾದ ಕ್ವಿಲಾ.

ಇದನ್ನೂ ಓದಿ: ಮತ್ತೆ ಪ್ರಯಾಣಿಕರಿಂದ ಜೀವಕಳೆ ಪಡೆದುಕೊಂಡ ಕೆಂಪೇಗೌಡ ಅಂತರಾಷ್ಟ್ರಿಯ ವಿಮಾನ ನಿಲ್ದಾಣ; ಟ್ಯಾಕ್ಸಿ ಚಾಲಕರ ಮೊಗದಲ್ಲಿ ಮಂದಹಾಸ

Dilip Kumar Admitted to Mumbai Hospital after Complaints of breathlessness

Published On - 12:45 pm, Wed, 30 June 21

Follow Us
TV9 Web
TV9 Web

TV9 Kannada

Read More
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ಹೈದರಾಬಾದ್‌ನಲ್ಲಿ ಮೈ ಹೋಮ್ ವ್ಯೋಮ ಗ್ರ್ಯಾಂಡ್ ಲಾಂಚ್
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಜಿಗಿದ ವ್ಯಕ್ತಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
ಇಂದು ನವರಾತ್ರಿಯ ಮೂರನೇ ದಿನ; ಚಂದ್ರಘಂಟಾ ದೇವಿಯ ಆರಾಧನೆಯಿಂದ ಕಾರ್ಯಸಿದ್ಧಿ
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
'ರಾಹುಲ್ ಗಾಂಧಿ ಎಡಪಂಥೀಯ ಸಿದ್ಧಾಂತ ಹೇರಲು ಯತ್ನಿಸುತ್ತಿದ್ದಾರೆ'; ಫಡ್ನವೀಸ್
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಅವಧಿಗೂ ಮುನ್ನ SIR ಅಂತ್ಯ: 2.01 ಲಕ್ಷ ಮತದಾರರ ಹೆಸರು ಡಿಲೀಟ್​
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಕಾಂಗ್ರೆಸ್​​​ನ 25 ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಹಿಂಡಲಗಾ ಜೈಲಿಗೆ ಹೋಗ್ತಿದ್ದ ಪ್ರಜ್ವಲ್ ಇದ್ದ ವಾಹನ ಅರ್ಧಕ್ಕೆ ವಾಪಸ್
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಬೃಹತ್ ಪ್ರತಿಭಟನೆ ಬಳಿಕ ಸುಪ್ರೀಂ ಕೋರ್ಟ್ ತಲುಪಿದ ರಾಹುಲ್ ಗಾಂಧಿ, ಖರ್ಗೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ
ಮಂಜನಿಗೆ ಮುಂದೆ ಒಳ್ಳೆಯ ಭವಿಷ್ಯ ಇದೆ: ಸಂಗೀತಾ ಭಟ್ ಅಚ್ಚರಿಯ ಹೇಳಿಕೆ