ದಿಲೀಪ್​ ಕುಮಾರ್​ಗೆ ಆಗಿರೋ ಸಮಸ್ಯೆ ಏನು? ಹಿರಿಯ ನಟನ ಆರೋಗ್ಯದ ಬಗ್ಗೆ ಹೊಸ ಅಪ್​ಡೇಟ್​

ದಿಲೀಪ್​ ಕುಮಾರ್​ಗೆ ಆಗಿರೋ ಸಮಸ್ಯೆ ಏನು? ಹಿರಿಯ ನಟನ ಆರೋಗ್ಯದ ಬಗ್ಗೆ ಹೊಸ ಅಪ್​ಡೇಟ್​
ದಿಲೀಪ್​ ಕುಮಾರ್​

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

Rajesh Duggumane

|

Jun 06, 2021 | 7:12 PM

ಭಾರತೀಯ ಚಿತ್ರರಂಗದ ಹಿರಿಯ ನಟ ದಿಲೀಪ್​ ಕುಮಾರ್​ ಅವರಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಭಾನುವಾರ (ಜೂ.6) ಬೆಳಗ್ಗೆ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಅವರ ಆರೋಗ್ಯದ ಬಗ್ಗೆ ಹೊಸ ಅಪ್​​ಡೇಟ್​ ಒಂದು ಸಿಕ್ಕಿದೆ. ದಿಲೀಪ್​ ಅವರಿಗೆ ಕೃತಕ ಉಸಿರಾಟ ಅಳವಡಿಸಲಾಗಿದೆ. ಇದಲ್ಲದೆ, ಕೆಲ ವರದಿಗಳ ಪ್ರಕಾರ ಅವರು ಪ್ಲೆರಲ್ ಎಫ್ಯೂಷನ್ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ವೈದ್ಯಕೀಯ ಭಾಷೆಯಯಲ್ಲಿ ಪ್ಲೆರಲ್ ಎಫ್ಯೂಷನ್ ಎಂದರೆ ಶ್ವಾಸಕೋಶದಲ್ಲಿ ನೀರು ತುಂಬುವುದು ಎಂದರ್ಥ. ಸದ್ಯ ದಿಲೀಪ್ ಕುಮಾರ್ ಅವರಿಗೆ ಮುಂಬೈನ ಪಿಡಿ ಹಿಂದುಜಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರುತ್ತಿದ್ದಾರೆ.

ಕಳೆದ ತಿಂಗಳು ಕೂಡ ಇದೇ ಆಸ್ಪತ್ರೆಗೆ ದಿಲೀಪ್​ ಕುಮಾರ್​ ದಾಖಲಾಗಿದ್ದರು. ಸಾಮಾನ್ಯ​ ಆರೋಗ್ಯ ತಪಾಸಣೆಗಾಗಿ ಅವರು ತೆರಳಿದ್ದರು ಎನ್ನಲಾಗಿತ್ತು. ಎರಡು ದಿನಗಳ ಬಳಿಕ ಅವರನ್ನು ಡಿಸ್ಚಾರ್ಜ್​ ಮಾಡಲಾಗಿತ್ತು. ಈಗ ಅವರು ಮತ್ತೆ ಅಸ್ವಸ್ಥಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿದೆ.

1944ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ದಿಲೀಪ್​ ಕುಮಾರ್​ ಅವರು 5 ದಶಕಗಳ ಕಾಲ ಸಕ್ರಿಯರಾಗಿದ್ದರು. ಕೊಹಿನೂರ್​, ಮುಘಲ್-ಏ-ಆಜಮ್​, ಶಕ್ತಿ, ನಯಾ ದೌರ್​, ರಾಮ್​ ಔರ್​ ಶ್ಯಾಮ್​ ಮುಂತಾದ ಕ್ಲಾಸಿಕ್​ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ದಿಲೀಪ್​ ಕುಮಾರ್​ ನಟಿಸಿದ ಕೊನೇ ಸಿನಿಮಾ ‘ಖಿಲಾ’1998ರಲ್ಲಿ ತೆರೆಕಂಡಿತು. ಆ ನಂತರ ಅವರು ಯಾವುದೇ ಚಿತ್ರದಲ್ಲೂ ಬಣ್ಣ ಹಚ್ಚಿಲ್ಲ.

ದೇಶದೆಲ್ಲೆಡೆ ಕೊರೊನಾ ವೈರಸ್​ ಎರಡನೇ ಅಲೆ ಹರಡಿದೆ. ಈ ಸಂದರ್ಭದಲ್ಲಿ ದಿಲೀಪ್​ ಕುಮಾರ್​ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಅವರು ಬೇಗ ಗುಣಮುಖರಾಗಲಿ ಎಂದು ಎಲ್ಲರೂ ಪ್ರಾರ್ಥನೆ ಮಾಡುತ್ತಿದ್ದಾರೆ.

ಇದನ್ನೂ ಓದಿ: ಖ್ಯಾತ ನಟ ದಿಲೀಪ್​ ಕುಮಾರ್​ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲು; ಅಭಿಮಾನಿಗಳಲ್ಲಿ ಆತಂಕ

Follow us on

Related Stories

Most Read Stories

Click on your DTH Provider to Add TV9 Kannada