AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ‘ಜೂಲಿ’ ಸಿನಿಮಾ ನಾಯಕ ಅರೆಸ್ಟ್​ ಆಗಿದ್ದೇಕೆ? ಏನಿದು ನದಿ ಹೂಳೆತ್ತುವ ಹಗರಣ?

ಮಿಥಿ ನದಿ ಹೂಳೆತ್ತುವ ಕಾಮಗಾರಿಯಲ್ಲಾದ 65 ಕೋಟಿಗೂ ಅಧಿಕ ಭಾರಿ ಆರ್ಥಿಕ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಡಿಮೋ ಮೋರಿಯಾ ಅವರನ್ನು ಮುಂಬೈ ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಸುದೀರ್ಘ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ನಂತರ ನಟನನ್ನು ವಶಕ್ಕೆ ಪಡೆಯಲಾಗಿದ್ದು, ಈ ಸುದ್ದಿ ತೀವ್ರ ಸಂಚಲನ ಮೂಡಿಸಿದೆ.

ಕನ್ನಡದ ‘ಜೂಲಿ’ ಸಿನಿಮಾ ನಾಯಕ ಅರೆಸ್ಟ್​ ಆಗಿದ್ದೇಕೆ? ಏನಿದು ನದಿ ಹೂಳೆತ್ತುವ ಹಗರಣ?
ಜೂಲಿ ನಟ
ರಾಜೇಶ್ ದುಗ್ಗುಮನೆ
|

Updated on:Oct 03, 2026 | 2:55 PM

Share

ಮುಖ್ಯಾಂಶಗಳು

  • ಮಿಥಿ ನದಿ ಹೂಳೆತ್ತುವ ಹಗರಣ
  • ಸ್ಯಾಂಡಲ್‌ವುಡ್ 'ಜೂಲಿ' ನಟ ಡಿಮೋ ಮೋರಿಯಾ ಬಂಧನ
  • ಬಿಎಂಸಿಗೆ 65 ಕೋಟಿ ರೂಪಾಯಿ ನಷ್ಟ

ಬಾಲಿವುಡ್‌ನ ಪ್ರಸಿದ್ಧ ನಟ ಹಾಗೂ ರೂಪದರ್ಶಿ ಡಿಮೋ ಮೋರಿಯಾ ಅವರನ್ನು ಮುಂಬೈ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗ ಬಂಧಿಸಿದೆ. ಶುಕ್ರವಾರ ಅಂದರೆ ಅಕ್ಟೋಬರ್ 2 ರಂದು ಸುದೀರ್ಘ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ ಅಧಿಕಾರಿಗಳು ನಂತರ ಅವರನ್ನು ವಶಕ್ಕೆ ಪಡೆದಿದ್ದಾರೆ. ಮುಂಬೈನ ಮಿಥಿ ನದಿ ಹೂಳೆತ್ತುವ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿಗಳ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ. ಕನ್ನಡದಲ್ಲಿ ಸ್ಯಾಂಡಲ್‌ವುಡ್ ನಟಿ ರಮ್ಯಾ ಅವರೊಂದಿಗೆ ‘ಜೂಲಿ’ ಸಿನಿಮಾದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದಿದ್ದ ಈ ನಟನ ದಿಢೀರ್ ಬಂಧನ ಸುದ್ದಿ ಚಿತ್ರರಂಗದಲ್ಲಿ ಚರ್ಚೆಗೆ ಕಾರಣ ಆಗಿದೆ.

ಈ ಪ್ರಕರಣವು ಬೃಹನ್ಮುಂಬೈ ಮಹಾನಗರ ಪಾಲಿಕೆ ಕೈಗೆತ್ತಿಕೊಂಡ ಮಿಥಿ ನದಿ ಸ್ವಚ್ಛತಾ ಯೋಜನೆಗೆ ಸಂಬಂಧಿಸಿದೆ. ನದಿಯ ಹೂಳು ತೆಗೆಯುವ ಗುತ್ತಿಗೆ ನೀಡಿಕೆಯಲ್ಲಿ ಸಾಲು ಸಾಲು ಅಕ್ರಮಗಳು ನಡೆದಿವೆ ಎಂದು ತನಿಖಾಧಿಕಾರಿಗಳು ಆರೋಪಿಸಿದ್ದಾರೆ. ಅಧಿಕಾರಿಗಳು ಹಾಗೂ ಮಧ್ಯವರ್ತಿಗಳು ಶಾಮೀಲಾಗಿ ಟೆಂಡರ್ ಪ್ರಕ್ರಿಯೆಯನ್ನು ತಿರುಚಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ. ನದಿಯಿಂದ ತೆಗೆದ ಹೂಳಿನ ಪ್ರಮಾಣವನ್ನು ಸುಳ್ಳಾಗಿ ಹೆಚ್ಚಿಸಿ ತೋರಿಸಿ ಅಕ್ರಮ ಎಸಗಲಾಗಿದೆ.

ಈ ಹಗರಣದಿಂದಾಗಿ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಒಟ್ಟು 65.54 ಕೋಟಿ ರೂಪಾಯಿಗಳ ಭಾರಿ ಆರ್ಥಿಕ ನಷ್ಟವಾಗಿದೆ. ಆರ್ಥಿಕ ಅಪರಾಧಗಳ ವಿಭಾಗವು ಗುತ್ತಿಗೆದಾರರು ಸಲ್ಲಿಸಿದ ನಕಲಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಯೋಜನೆಯ ಹಣ ದುರುಪಯೋಗ ಮತ್ತು ಅಕ್ರಮ ಪಾವತಿಗಳ ಬಗ್ಗೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾದ ಪ್ರತಿಯೊಬ್ಬರ ವಿರುದ್ಧವೂ ಕಟ್ಟುನಿಟ್ಟಿನ ಕ್ರಮಕ್ಕೆ ತನಿಖಾ ಸಂಸ್ಥೆ ಮುಂದಾಗಿದೆ.

ಹಾಗಾದರೆ ಈ ಹಗರಣಕ್ಕೂ ಬಾಲಿವುಡ್ ನಟ ಡಿಮೋ ಮೋರಿಯಾಗೂ ಏನು ಸಂಬಂಧ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ತನಿಖೆಯ ವೇಳೆ ಪ್ರಕರಣದ ಪ್ರಮುಖ ಆರೋಪಿಗಳ ಜೊತೆ ನಟ ನಿರಂತರ ಫೋನ್ ಸಂಪರ್ಕದಲ್ಲಿದ್ದುದು ಪತ್ತೆಯಾಗಿದೆ. ಪ್ರಕರಣದ ಆರೋಪಿ ಕೇತನ್ ಕಡಮ್ ಎಂಬಾತನ ಜೊತೆ ಆರ್ಥಿಕ ವ್ಯವಹಾರ ನಡೆಸಿರುವ ಸಾಕ್ಷ್ಯಗಳು ಲಭ್ಯವಾಗಿವೆ. 14 ಲಕ್ಷದಿಂದ 18 ಲಕ್ಷ ರೂಪಾಯಿವರೆಗಿನ ಹಣಕಾಸಿನ ವಹಿವಾಟು ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: 65 ಕೋಟಿ ಹಗರಣ: ಕನ್ನಡದಲ್ಲೂ ನಟಿಸಿದ್ದ ಬಾಲಿವುಡ್ ನಟ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಚಿತ್ರರಂಗದಲ್ಲಿ ಡಿಮೋ ಮೋರಿಯಾ ಬಂಧನದ ಸುದ್ದಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ಈ ಹಿಂದೆ ಇಡಿ ಅಧಿಕಾರಿಗಳು ಸಹ ನಟನ ನಿವಾಸದ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಸದ್ಯ ಪೊಲೀಸರು ನಟನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಹಗರಣದ ಸಂಪೂರ್ಣ ಸತ್ಯಾಂಶ ಹೊರಬರಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:54 pm, Sat, 3 October 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಕರ್ನಾಟಕ ಬರಗಾಲ: ತಕ್ಷಣದ ಪರಿಹಾರಕ್ಕೆ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪತ್ರ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಪೊಲೀಸರ ಮೇಲೆ ಒತ್ತಡ ಹಾಕಿರೋ ಸಿಎಂಗೆ ನಾಚಿಕೆಯಾಗಬೇಕು: ಬಿಎಸ್​ವೈ ವಾಗ್ದಾಳಿ
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
ಕುವೈತ್ ತೈಲ ಟ್ಯಾಂಕರ್ ಮೇಲೆ ಕ್ಷಿಪಣಿ ದಾಳಿ
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
17 ವರ್ಷ ಸೇವೆ ಸಲ್ಲಿಸಿ ಹುಟ್ಟೂರಿಗೆ ಮರಳಿದ ಯೋಧನಿಗೆ ಅದ್ಧೂರಿ ಸ್ವಾಗತ!
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ಕೆಪಿಎಸ್‌ಸಿ ಅಕ್ರಮ: 70 ಆರ್‌ಟಿಓ ಇನ್ಸ್‌ಪೆಕ್ಟರ್‌ ಹೆಚ್ಚುವರಿ ಆಯ್ಕೆಗೆ ತಡೆ
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್