Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್ ಠಾಣೆ ಮೆಟ್ಟಿಲೇರಿದ ದುನಿಯಾ ಸೂರಿ..!

Duniya Suri: ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ ಸೂರಿ, ಶೀಘ್ರದಲ್ಲೇ ಶಿವಣ್ಣ ಜೊತೆ ಮತ್ತೊಂದು ಸಿನಿಮಾ ಕೂಡ ಮಾಡಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ಪೊಲೀಸ್ ಠಾಣೆ ಮೆಟ್ಟಿಲೇರಿದ ದುನಿಯಾ ಸೂರಿ..!
Duniya Suri
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 20, 2022 | 12:54 PM

ಸ್ಯಾಂಡಲ್​ವುಡ್​ನ ಮಾಸ್ ನಿರ್ದೇಶಕ ದುನಿಯಾ ಸೂರಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಅದು ಕೂಡ ಕಿಡಿಗೇಡಿಗಳ ಕೃತ್ಯದ ವಿರುದ್ದ…ಹೌದು, ಸೂರಿ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಹಲವು ಫೇಕ್ ಅಕೌಂಟ್​ಗಳು ಕಾಣಿಸಿವೆ. ಇದನ್ನು ಗಮನಿಸಿರುವ ಸುಕ್ಕಾ ಸೂರಿ ಫುಲ್ ಗರಂ ಆಗಿದ್ದಾರೆ. ಅಲ್ಲದೆ ಈ ಬಗ್ಗೆ ಸೈಬರ್ ಪೊಲೀಸ್ ಠಾಣೆಗೆ ದೂರನ್ನು ಕೂಡ ನೀಡಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸೂರಿ, ನಾನು ಇನ್​ಸ್ಟಾಗ್ರಾಮ್ ಬಿಟ್ಟು ಬೇರೆ ಯಾವುದೇ ಸೋಷಿಯಲ್ ಮೀಡಿಯಾ ಖಾತೆ ಹೊಂದಿಲ್ಲ. ಇದಾಗ್ಯೂ ಕೆಲವರು ನನ್ನ ಹೆಸರಿನಲ್ಲಿ ಟ್ವಿಟರ್ ಹಾಗೂ ಫೇಸ್​ಬುಕ್​ನಲ್ಲಿ ಕೆಲವರು ನಕಲಿ ಖಾತೆಗಳನ್ನು ತೆರೆದಿದ್ದಾರೆ. ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ಎಲ್ಲರಿಗೂ ನಮಸ್ಕಾರ, ನಾನು ಕನ್ನಡ ಚಲನಚಿತ್ರ ನಿರ್ದೇಶಕ ಸೂರಿ (ಸುರೇಶ್ ರಾಮಸ್ವಾಮಿ) ಇನ್ ಸ್ಟಾಗ್ರಾಮ್ ಬಿಟ್ಟರೆ, ಬೇರೆ ಯಾವ ರೀತಿಯ ಸೋಷಿಯಲ್ ಮೀಡಿಯಾ ಅಕೌಂಟ್ ನಲ್ಲೂ ನಾನು ಇಲ್ಲ. ಟ್ವಿಟ್ಟರ್‌ನಲ್ಲಿ ದುನಿಯಾ ಸೂರಿ ಎಂಬ ಅಕೌಂಟ್ ನನ್ನದಲ್ಲ. ಈ ನಡುವೆ ಟ್ವಿಟ್ಟರ್‌ ಅಕೌಂಟ್‌ನಲ್ಲಿ ಅಪ್​ಡೇಟ್ ಆಗುತ್ತಿರುವ ಯಾವ ಅನಿಸಿಕೆಯೂ, ಅಭಿಪ್ರಾಯ ಮತ್ತು ಸಮಾಜದ ಆಗುಹೋಗುಗಳು ನನ್ನದಲ್ಲ. ಕಾನೂನು ಪ್ರಕಾರ ನನ್ನ ಫೋಟೋ ಹಾಗೂ ನನ್ನ ಹೆಸರನ್ನು ನನ್ನ ಅನುಮತಿ ಇಲ್ಲದೇ ಬಳಸುವುದು ಅಪರಾಧ. ದಯವಿಟ್ಟು ಇದನ್ನು ನಿಲ್ಲಿಸಿ’ ಎಂದು ದುನಿಯಾ ಸೂರಿ ತಿಳಿಸಿದ್ದಾರೆ.

ಹೀಗಾಗಿ ತಮ್ಮ ಹೆಸರಿನಲ್ಲಿರುವ ನಕಲಿ ಖಾತೆಗಳ ಬಗ್ಗೆ ಸೈಬರ್ ಪೊಲೀಸರಿಗೆ ದೂರು ನೀಡಿರುವುದಾಗಿ ದುನಿಯಾ ಸೂರಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ ಬ್ಯುಸಿ ಕೆಲಸಗಳ ನಡುವೆ ಇಂತಹ ನಕಲಿ ಖಾತೆಗಳಿಂದ ಕಿರಿಕಿರಿ ಉಂಟಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಸದ್ಯ ಅಭಿಷೇಕ್ ಅಂಬರೀಷ್ ನಟನೆಯ ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿರುವ ಸೂರಿ, ಶೀಘ್ರದಲ್ಲೇ ಶಿವಣ್ಣ ಜೊತೆ ಮತ್ತೊಂದು ಸಿನಿಮಾ ಕೂಡ ಮಾಡಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ.

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್