AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​

Sukumar Remuneration: ‘ಪುಷ್ಪ 2’ ಚಿತ್ರದ ನಿರ್ದೇಶಕ ಸುಕುಮಾರ್​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್​ ಇದೆ. ಅವರ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಆಸಕ್ತಿ ತೋರಿಸುತ್ತಿವೆ.

Pushpa 2: ‘ಪುಷ್ಪ 2’ ಚಿತ್ರಕ್ಕೆ ಸಂಭಾವನೆ ಪಡೆಯಲ್ವಾ ನಿರ್ದೇಶಕ ಸುಕುಮಾರ್? ಇಲ್ಲಿದೆ ದೊಡ್ಡ ಪ್ಲ್ಯಾನ್​
ಸುಕುಮಾರ್
Follow us
TV9 Web
| Updated By: ಮದನ್​ ಕುಮಾರ್​

Updated on: Oct 06, 2022 | 8:30 AM

ಬಹುನಿರೀಕ್ಷಿತ ‘ಪುಷ್ಪ 2’ (Pushpa 2) ಚಿತ್ರಕ್ಕೆ ಪೂರ್ಣ ಪ್ರಮಾಣದಲ್ಲಿ ಇನ್ನೂ ಶೂಟಿಂಗ್​ ಶುರುವಾಗಿಲ್ಲ. ಅಷ್ಟರಲ್ಲಾಗಲೇ ಈ ಚಿತ್ರದ ಬಗ್ಗೆ ಅನೇಕ ಇಂಟರೆಸ್ಟಿಂಗ್​ ವಿಷಯಗಳು ಕೇಳಿಬರುತ್ತಿವೆ. ಅಲ್ಲು ಅರ್ಜುನ್​ ಮತ್ತು ರಶ್ಮಿಕಾ ಮಂದಣ್ಣ ಜೋಡಿಯಾಗಿ ನಟಿಸಿದ್ದ ‘ಪುಷ್ಪ’ ಸಿನಿಮಾ ಸೂಪರ್​ ಹಿಟ್​ ಆಯಿತು. ಈಗ ಅದರ ಸೀಕ್ವೆಲ್​ ಮೇಲೆ ಸಹಜವಾಗಿಯೇ ನಿರೀಕ್ಷೆ ಮೂಡಿದೆ. ಬಹುಕೋಟಿ ರೂಪಾಯಿ ವೆಚ್ಚದಲ್ಲಿ ‘ಪುಷ್ಪ 2’ ಚಿತ್ರವನ್ನು ನಿರ್ಮಿಸಲಾಗುತ್ತಿದೆ. ನಿರ್ದೇಶಕ ಸುಕುಮಾರ್​ (Sukumar) ಅವರ ಮೇಲೆ ದೊಡ್ಡ ಜವಾಬ್ದಾರಿ ಇದೆ. ಆದರೆ ಅವರು ಈ ಚಿತ್ರಕ್ಕಾಗಿ ಸಂಭಾವನೆ (Sukumar Remuneration) ಪಡೆದುಕೊಳ್ಳುತ್ತಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ಅವರು ಸಂಭಾವನೆ ಪಡೆಯದಿದ್ದರೂ ದೊಡ್ಡ ಲಾಭ ಮಾಡಿಕೊಳ್ಳುವ ಪ್ಲ್ಯಾನ್​ ಹಾಕಿದ್ದಾರೆ ಎನ್ನಲಾಗುತ್ತಿದೆ.

ಸುಕುಮಾರ್​ ಅವರಿಗೆ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಡಿಮ್ಯಾಂಡ್​ ಇದೆ. ಅವರು ನಿರ್ದೇಶನ ಮಾಡಿದರೆ ಆ ಚಿತ್ರ ಖಂಡಿತವಾಗಿ ಸೂಪರ್​ ಹಿಟ್​ ಆಗುತ್ತದೆ ಎಂಬ ಭರವಸೆ ಎಲ್ಲರಲ್ಲೂ ಮೂಡಿದೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಆಸಕ್ತಿ ತೋರಿಸುತ್ತಿವೆ. ಸದ್ಯ ‘ಮೈತ್ರಿ ಮೂವೀ ಮೇಕರ್ಸ್​’ ಜೊತೆ ಅವರು ‘ಪುಷ್ಪ 2’ ಸಿನಿಮಾ ಮಾಡುತ್ತಿದ್ದಾರೆ.

‘ಪುಷ್ಪ’ ಚಿತ್ರಕ್ಕೆ ಸುಕುಮಾರ್ ಅವರು 15ರಿಂದ 20 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದರು ಎಂಬ ಮಾತಿದೆ. ಆದರೆ ‘ಪುಷ್ಪ 2’ ಸಿನಿಮಾ ಮಾಡುವಾಗ ಅವರು ಸಂಭಾವನೆ ಮುಟ್ಟಲು ರೆಡಿ ಇಲ್ಲ. ಆದರೆ ತಾವು ಪಡೆಯಬಹುದಾದ ಸಂಭಾವನೆಯ ಮೊತ್ತವನ್ನು ಚಿತ್ರಕ್ಕೆ ಬಂಡವಾಳದ ರೀತಿಯಲ್ಲಿ ವಿನಿಯೋಗಿಸಲು ನಿರ್ಧರಿಸಿದ್ದಾರೆ. ಒಂದು ವೇಳೆ ಈ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್​ ಮಾಡಿದರೆ ಲಾಭದ ರೂಪದಲ್ಲಿ ಸುಕುಮಾರ್​ ಅವರಿಗೆ 90 ಕೋಟಿ ರೂಪಾಯಿವರೆಗೂ ಆದಾಯ ಸಿಗಲಿದೆ ಎಂಬುದು ಟಾಲಿವುಡ್​ ಮಂದಿಯ ಲೆಕ್ಕಾಚಾರ.

ಇದನ್ನೂ ಓದಿ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
‘ಕೆಜಿಎಫ್: ಚಾಪ್ಟರ್​​ 2’ ಸಿನಿಮಾ ಹಿಟ್​ ಆದ್ಮೇಲೆ ಶ್ರೀನಿಧಿ ಶೆಟ್ಟಿ ಕೇಳ್ತಿರುವ ಸಂಭಾವನೆ ಎಷ್ಟು ಕೋಟಿ?
Image
1992ರಲ್ಲಿ ಐಶ್ವರ್ಯಾ ರೈ ಪಡೆದ ಸಂಭಾವನೆ ಎಷ್ಟು? ನೀವು ಅಚ್ಚರಿ ಪಡೋದು ಗ್ಯಾರಂಟಿ

ಅಲ್ಲು ಅರ್ಜುನ್​ ಅವರಿಗೆ ‘ಪುಷ್ಪ’ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿತು. ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಅವರು ಹೊರಹೊಮ್ಮಿದರು. ಅದೇ ರೀತಿ ರಶ್ಮಿಕಾ ಮಂದಣ್ಣ ಕೂಡ ಸಿಕ್ಕಾಪಟ್ಟೆ ಜನಪ್ರಿಯತೆ ಪಡೆದುಕೊಂಡರು. ಈ ಚಿತ್ರಕ್ಕಾಗಿ ಕೆಲಸ ಮಾಡಿದ ಎಲ್ಲರಿಗೂ ಯಶಸ್ಸು ಸಿಕ್ಕಿತು. ಈಗ ‘ಪುಷ್ಪ 2’ ಸಿನಿಮಾ ಮೇಲೆ ಭಾರಿ ನಿರೀಕ್ಷೆ ಮೂಡಿದೆ. ಅಲ್ಲು ಅರ್ಜುನ್​ ಪಾತ್ರದಲ್ಲಿ ಯಾವ ರೀತಿಯ ಬದಲಾವಣೆ ಇರಲಿದೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಆದಷ್ಟು ಬೇಗ ಏನಾದರೂ ಅಪ್​ಡೇಟ್​ ಸಿಗಲಿ ಎಂದು ಫ್ಯಾನ್ಸ್ ಕಾದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.