AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೆಂಡ್ ಆಯ್ತು Boycott RRR; ಕನ್ನಡ ಆವೃತ್ತಿ ಪ್ರದರ್ಶನದ ಬಗ್ಗೆ ಸ್ಪಷ್ಟನೆ ನೀಡಿದ ವಿತರಕರು

KVN Productions | RRR Kannada Version: ಕರ್ನಾಟಕದಲ್ಲಿ ‘ಆರ್​ಆರ್​ಆರ್​’ ಚಿತ್ರದ ಕನ್ನಡ ಅವತರಣಿಕೆಗೆ ಶೋಗಳನ್ನು ನೀಡಿಲ್ಲ ಎನ್ನುವುದು ಚಿತ್ರಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ವಿತರಕರು ಸ್ಪಷ್ಟನೆ ನೀಡಿದ್ದಾರೆ. ಕನ್ನಡ ರಿಲೀಸ್ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ವಿವರ.

ಟ್ರೆಂಡ್ ಆಯ್ತು Boycott RRR; ಕನ್ನಡ ಆವೃತ್ತಿ ಪ್ರದರ್ಶನದ ಬಗ್ಗೆ ಸ್ಪಷ್ಟನೆ ನೀಡಿದ ವಿತರಕರು
‘ಆರ್​ಆರ್​ಆರ್​’ ಪೋಸ್ಟರ್
TV9 Web
| Edited By: |

Updated on:Mar 23, 2022 | 7:27 PM

Share

ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ‘ಆರ್​ಆರ್​ಆರ್​’ (RRR) ಮಾರ್ಚ್ 25ರಂದು ವಿಶ್ವಾದ್ಯಂತ ರಿಲೀಸ್ ಆಗಲಿದೆ. ಮೂಲ ತೆಲುಗಿನ ಈ ಚಿತ್ರ ಹಲವು ಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಆದರೆ ಕರ್ನಾಟಕದಲ್ಲಿ ಕನ್ನಡ ಅವತರಣಿಕೆಗೆ (RRR Kannada Version) ಶೋಗಳನ್ನು ನೀಡಿಲ್ಲ ಎನ್ನುವುದು ಚಿತ್ರಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಕಳೆದೆರಡು ದಿನಗಳಿಂದ ಚಿತ್ರತಂಡದ ವಿರುದ್ಧ ಕನ್ನಡಿಗರು ಅಸಮಾಧಾನ ಹೊರಹಾಕುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ‘ಬಾಯ್ಕಾಟ್ ಆರ್​ಆರ್​ಆರ್​ ಇನ್ ಕರ್ನಾಟಕ’ ಟ್ರೆಂಡ್ ಆಗಿದ್ದು, ಚಿತ್ರವನ್ನು ಬಾಯ್ಕಾಟ್ ಮಾಡಲಾಗುವುದು ಎಂದು ಕನ್ನಡ ಪ್ರೇಮಿಗಳು ಎಚ್ಚರಿಸಿದ್ದಾರೆ. ಈ ನಡುವೆ ಚಿತ್ರತಂಡದಿಂದ ಈ ಕುರಿತು ಅಧಿಕೃತ ಸ್ಪಷ್ಟನೆ ಬಂದಿದೆ. ಕರ್ನಾಟಕದಲ್ಲಿ ‘ಆರ್​ಆರ್​ಆರ್​’ ಚಿತ್ರದ ವಿತರಣೆಯ ಹಕ್ಕನ್ನು ಹೊಂದಿರುವ ‘ಕೆವಿಎನ್ ಪ್ರೊಡಕ್ಷನ್ಸ್’ ಈ ಕುರಿತು ಟ್ವಿಟರ್​ನಲ್ಲಿ ಮಾಹಿತಿ ನೀಡಿದೆ. ಅದರ ಪ್ರಕಾರ ‘ಆರ್​ಆರ್​ಆರ್’ ಚಿತ್ರದ ಕನ್ನಡ ಅವತರಣಿಕೆಯನ್ನು ಪ್ರದರ್ಶಿಸಲು ಪ್ರದರ್ಶಕರು ಹಿಂದೆ ಸರಿಯುತ್ತಿದ್ದಾರೆ. ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಲಾಗಿದೆ. ಈ ಬಗ್ಗೆ ನಾಳೆಯೊಳಗೆ (ಗುರುವಾರ) ಸಂಪೂರ್ಣ ಮಾಹಿತಿ ನೀಡುವುದಾಗಿ ತಿಳಿಸಲಾಗಿದೆ.

ಕನ್ನಡ ಅವತರಣಿಕೆ ರಿಲೀಸ್ ಬಗ್ಗೆ ‘ಕೆವಿಎನ್ ಪ್ರೊಡಕ್ಷನ್ಸ್’ ಹೇಳಿಕೆಯ ಪೂರ್ಣ ವಿವರ:

ಕನ್ನಡ ಆವೃತ್ತಿ ರಿಲೀಸ್ ಬಗ್ಗೆ ವಿಶೇಷ ಮನವಿಯನ್ನು ‘ಕೆವಿಎನ್ ಪ್ರೊಡಕ್ಷನ್ಸ್’ ಮಾಡಿದ್ದು ಈ ಮೂಲಕ ಗೊಂದಲಗಳಿಗೆ ತಾತ್ಕಾಲಿಕವಾಗಿ ತೆರೆ ಎಳೆಯುವ ಪ್ರಯತ್ನವನ್ನು ಮಾಡಲಾಗಿದೆ. ಟ್ವೀಟ್​ನಲ್ಲಿ ಹೇಳಿದ ಮಾಹಿತಿ ಇಲ್ಲಿದೆ. ‘‘ಆರ್​ಆರ್​ಆರ್​ನ ನಾಯಕ ನಟರಾದ ರಾಮ್​ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನ ಮಾಡಿ ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯ ಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ಭಾವಿಸಿದ್ದೇವೆ’’

‘‘ಆದ್ದರಿಂದ ಆರ್​ಆರ್​ಆರ್​ ಸಿನಿಮಾದ ಕನ್ನಡ ಅವತರಣಿಕೆ ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ (ಪ್ರದರ್ಶಕರ) ಥಿಯೇಟರ್ ಮಾಲಿಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್​ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಪೂರ್ಣ ಮಾಹಿತಿ ನೀಡಲಿದ್ದೇವೆ’’ ಎಂದು ಕೆವಿಎನ್ ಪ್ರೊಡಕ್ಷನ್ ಬರೆದಿದೆ.

ಇದರೊಂದಿಗೆ ‘ಆರ್​ಆರ್​ಆರ್​ ಕನ್ನಡ ಆವೃತ್ತಿಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡೋದಕ್ಕೆ ಬೆಂಬಲ ನೀಡಬೇಕು’ ಎಂದು ನಿರ್ಮಾಣ ಸಂಸ್ಥೆ ಕೋರಿಕೊಂಡಿದೆ.

ಕೆವಿಎನ್ ಪ್ರೊಡಕ್ಷನ್ಸ್ ಟ್ವೀಟ್ ಇಲ್ಲಿದೆ:

‘ಆರ್​ಆರ್​ಆರ್​’ ಚಿತ್ರವು ಮಾರ್ಚ್ 25ರಂದು ತೆರೆಕಾಣುತ್ತಿದೆ. ರಾಮ್ ಚರಣ್ ಹಾಗೂ ಜ್ಯೂ.ಎನ್​ಟಿಆರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆಲಿಯಾ ಭಟ್ ಹಾಗೂ ಅಜಯ್ ದೇವಗನ್ ಕೂಡ ಬಣ್ಣಹಚ್ಚಿದ್ದು, ಈಗಾಗಲೇ ಟ್ರೇಲರ್, ಹಾಡುಗಳು ಮನಗೆದ್ದಿವೆ. ಆದರೆ ಬೇರೆಲ್ಲಾ ರಾಜ್ಯಗಳಲ್ಲಿ ಆಯಾ ಭಾಷೆಗಳಲ್ಲಿ ರಿಲೀಸ್ ಆಗುತ್ತಿರುವ ಚಿತ್ರವು ರಾಜ್ಯದಲ್ಲಿ ಕನ್ನಡ ಶೋ ಇಲ್ಲದಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ವಿತರಕರ ಕಡೆಯಿಂದ ಸ್ಪಷ್ಟನೆ ಸಿಕ್ಕಿದ್ದು, ಚಿತ್ರತಂಡ ಸಮಸ್ಯೆ ಬಗೆಹರಿಸಲಿದೆ ಎಂಬ ವಿಶ್ವಾಸದಲ್ಲಿ ಕನ್ನಡಿಗರಿದ್ದಾರೆ.

ಇದನ್ನೂ ಓದಿ:

RRR: ದೇಶದೆಲ್ಲೆಡೆ ‘ಆರ್​ಆರ್​ಆರ್​’ ಭರ್ಜರಿ ಪ್ರಚಾರ; ವಾರಣಾಸಿಯ ಗಂಗಾರತಿಯಲ್ಲಿ ಭಾಗಿಯಾದ ರಾಮ್​ ಚರಣ್, ಜ್ಯೂ.ಎನ್​ಟಿಆರ್

Samantha: ಮಾಜಿ ಪತಿಯನ್ನು ಅನ್​ಫಾಲೋ ಮಾಡಿದ ಸಮಂತಾ; ಫ್ಯಾನ್ಸ್ ಗಮನಿಸಿದ್ರು ಮತ್ತೊಂದು ಅಚ್ಚರಿಯ ವಿಚಾರ

Published On - 6:02 pm, Wed, 23 March 22

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?
ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?