ಬಿಗ್ ಬಾಸ್ ಮನೆ ಸೇರಿ ಕ್ಯಾಶ್​ ಪ್ರೈಜ್​ಗಿಂತ ಹೆಚ್ಚಿನದ್ದನ್ನೇ ಸಂಪಾದಿಸಿದ್ದಾರೆ ದಿವ್ಯಾ ಉರುಡುಗ

ಬಿಗ್ ಬಾಸ್ ವಿಜೇತರಿಗೆ 50 ಲಕ್ಷ ರೂಪಾಯಿ ಕ್ಯಾಶ್ ಪ್ರೈಸ್ ನೀಡಲಾಗುತ್ತದೆ. ಇದಕ್ಕಿಂತಲೂ ಹೆಚ್ಚಿನದ್ದನ್ನೇ ದಿವ್ಯಾ ಬಿಗ್ ಬಾಸ್ ಮನೆಯಲ್ಲಿ ಸಂಪಾದಿಸಿದ್ದಾರಂತೆ.

ಬಿಗ್ ಬಾಸ್ ಮನೆ ಸೇರಿ ಕ್ಯಾಶ್​ ಪ್ರೈಜ್​ಗಿಂತ ಹೆಚ್ಚಿನದ್ದನ್ನೇ ಸಂಪಾದಿಸಿದ್ದಾರೆ ದಿವ್ಯಾ ಉರುಡುಗ
ದಿವ್ಯಾ ಉರುಡುಗ
Follow us
|

Updated on:May 10, 2021 | 10:18 PM

ಅನಾರೋಗ್ಯ ಕಾರಣದಿಂದ ಕಳೆದ ವಾರ ದಿವ್ಯಾ ಉರುಡುಗ ಬಿಗ್ ಬಾಸ್ ಮನೆಯಿಂದ ಹೊರ ನಡೆದಿದ್ದರು. 10 ವಾರಗಳ ಕಾಲ ಅವರು ವೀಕ್ಷಕರನ್ನು ರಂಜಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದಿವ್ಯಾ ಬೇಗ ಗುಣಮುಖರಾಗಲಿ ಎನ್ನುವ ಹಾರೈಕೆಗಳು ಬರುತ್ತಿವೆ. ಈ ಮಧ್ಯೆ ನೆಟ್ಟಿಗರು ಅವರ ಬಗ್ಗೆ ತಮಗನಿಸಿದ್ದನ್ನು ಗೀಚುತ್ತಿದ್ದಾರೆ. ಬಿಗ್ ಬಾಸ್ ವಿಜೇತರಿಗೆ 50 ಲಕ್ಷ ರೂಪಾಯಿ ಕ್ಯಾಶ್ ಪ್ರೈಸ್ ನೀಡಲಾಗುತ್ತದೆ. ಇದಕ್ಕಿಂತಲೂ ಹೆಚ್ಚಿನದ್ದನ್ನೇ ದಿವ್ಯಾ ಬಿಗ್ ಬಾಸ್ ಮನೆಯಲ್ಲಿ ಸಂಪಾದಿಸಿದ್ದಾರಂತೆ.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆ.ಪಿ. ಬಿಗ್ ಬಾಸ್ ಮನೆಯಲ್ಲಿ ತುಂಬಾನೇ ಆಪ್ತವಾಗಿದ್ದರು. ಇಬ್ಬರ ಮಧ್ಯೆ ಪ್ರೀತಿ ಮೊಳೆತಿದ್ದು ವೀಕ್ಷಕರಿಗೆ ಸ್ಪಷ್ಟವಾಗಿತ್ತಾದರೂ ಅವರು ಎಲ್ಲೂ ಅದನ್ನು ಹೇಳಿಕೊಂಡಿಲ್ಲ. ನಮ್ಮ ಮಧ್ಯೆ ಇದ್ದಿದ್ದು ಕೇವಲ ಉತ್ತಮ ಫ್ರೆಂಡ್ಶಿಪ್. ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಉಳಿದ ವಿಚಾರಗಳ ಬಗ್ಗೆ ಯೋಚಿಸುತ್ತೇವೆ ಎಂದು ಇಬ್ಬರೂ ಹೇಳಿಕೊಂಡಿದ್ದರು.

ಅರವಿಂದ್ ಕೆ.ಪಿ.ಹಾಗೂ ದಿವ್ಯಾ ಉರುಡುಗ ಜೋಡಿ ವೀಕ್ಷಕರಿಗೆ ಇಷ್ಟವಾಗಿದೆ. ಹೀಗಾಗಿ, ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನರು ಅರವಿಂದ್-ದಿವ್ಯಾ ವಿಲ್ ಮಿಸ್ ಯು ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, ದಿವ್ಯಾಗೆ ಸೋಲ್ ಮೇಟ್ ಸಿಕ್ಕಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ನೀಡುವ ಕ್ಯಾಶ್ ಪ್ರೈಸ್ಗಿಂತ ಇದು ದೊಡ್ಡದು ಎನ್ನುವ ಅಭಿಪ್ರಾಯ ಹೊರ ಹಾಕಿದ್ದಾರೆ.

ಕೊರೊನಾ ವೈರಸ್ ಎರಡನೇ ಅಲೆ ನಿಯಂತ್ರಿಸಲು ಕರ್ನಾಟಕ ಸರ್ಕಾರ ಲಾಕ್ಡೌನ್ ಘೋಷಣೆ ಮಾಡಿದೆ. ಹೀಗಾಗಿ ಬಿಗ್ ಬಾಸ್ ಸೀಸನ್ 8 ಅರ್ಧಕ್ಕೆ ನಿಂತಿದೆ. ಎಲ್ಲಾ ಸ್ಪರ್ಧಿಗಳು ತಮ್ಮ ಮನೆ ಸೇರಿದ್ದಾರೆ. ಬಿಗ್ ಬಾಸ್ ಮನೆಯ ಕೊನೆಯ ಕ್ಷಣಗಳನ್ನು ಮಂಗಳವಾರ ಹಾಗೂ ಬುಧವಾರ ಪ್ರಸಾರ ಮಾಡಲಾಗುತ್ತಿದೆ. ಇನ್ನು, ದಿವ್ಯಾ ಆರೋಗ್ಯ ವಿಚಾರಕ್ಕೆ ಬರುವುದಾದರೆ ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು ಬಿಗ್ ಬಾಸ್ ಮನೆಯಲ್ಲಿ ಹೇಳಲಾಗಿತ್ತು.

ಇದನ್ನೂ ಓದಿ: BBK8: ರಘು ಗೌಡ ಬಿಗ್​ ಬಾಸ್​ನಿಂದ ಹೊರ​ಬಂದಾಗ ಹೆಂಡತಿ ಮನೆಯೊಳಗೆ ಸೇರಿಸೋದು ಅನುಮಾನ

Bigg Boss Kannada: ಕೊರೊನಾ ವಿಷಯ ಗೊತ್ತಾಗಿ ಕಣ್ಣೀರು ಹಾಕುತ್ತ ಬಿಗ್​ ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿಗಳು

Published On - 9:52 pm, Mon, 10 May 21

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ