ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ತಾಯಿ ನಿಧನ: ಮಂಗಳೂರಿನಲ್ಲಿ ಇಂದು ಅಂತ್ಯಕ್ರಿಯೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 16, 2022 | 7:56 AM

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬಾರ್‌ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 16) ಮಂಗಳೂರಿನಲ್ಲಿ ನಿಧನರಾಗಿದ್ದಾರೆ.

ದಿಯಾ ಖ್ಯಾತಿಯ ನಟ ಪೃಥ್ವಿ ಅಂಬರ್ ತಾಯಿ ನಿಧನ: ಮಂಗಳೂರಿನಲ್ಲಿ ಇಂದು ಅಂತ್ಯಕ್ರಿಯೆ
ನಟ ಪೃಥ್ವಿ ಅಂಬರ್, ತಾಯಿ ಸುಜಾತ ಅಂಬರ್​​
Follow us on

ಬೆಂಗಳೂರು: ಚಂದನವನದ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹಾರ್ಟ್ ಪ್ರಾಬ್ಲಮ್​ನಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ ರಂಗದಲ್ಲಿ ತೊಡಗಿಸಿಕೊಂಡಿದ್ದು, ದಿಯಾ ಸಿನಿಮಾ ಮೂಲಕ ಸಾಕಷ್ಟು ಹೆಸರು ಮಾಡಿದ್ದಾರೆ. ಇತ್ತೀಚೆಗೆ ತೆರೆಕಂಡ ಬೈರಾಗಿ ಮತ್ತು ಶುಗರ್ ಲೆಸ್ ಚಿತ್ರದಲ್ಲಿ ಪೃಥ್ವಿ ಅಂಬರ್ ನಟಿಸಿದ್ದಾರೆ. ಚಿತ್ರಗಳ ಸಕ್ಸಸ್​ನ್ನು ಖುಷಿ ಪಡೋ ಸಮಯದಲ್ಲಿ ನಟ ತಮ್ಮ ತಾಯಿಯನ್ನು ಕಳೆದುಕೊಂಡಿದ್ದಾರೆ.

ಪೃಥ್ವಿ ಅಂಬಾರ್ ಧಾರಾವಾಹಿ ಮೂಲಕ ಬಣ್ಣದ ಬದುಕು ಆರಂಭಿಸಿದವರು. 2008ರಲ್ಲಿ ಪ್ರಸಾರವಾದ ‘ರಾಧಾ ಕಲ್ಯಾಣ’ ಧಾರಾವಾಹಿಯಿಂದ ಹಿಡಿದು ಈಗ ಪ್ರಸಾರವಾಗುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಸೇರಿ ಅನೇಕ ಧಾರಾವಾಹಿಯಲ್ಲಿ ಅವರು ನಟಿಸಿದ್ದಾರೆ. ಅವರಿಗೆ ಸಾಕಷ್ಟು ಖ್ಯಾತಿ ತಂದುಕೊಟ್ಟ ಚಿತ್ರ ‘ದಿಯಾ’. 2020ರ ಆರಂಭದಲ್ಲಿ ತೆರೆಕಂಡ ಈ ಸಿನಿಮಾ ಸೂಪರ್ ಹಿಟ್ ಆಯಿತು. ಅಲ್ಲಿಂದ ಪೃಥ್ವಿಗೆ ಹೆಚ್ಚು ಆಫರ್​ಗಳು ಬರೋಕೆ ಆರಂಭ ಆದವು.

ಶಿವರಾಜ್​ಕುಮಾರ್ ನಟನೆಯ ‘ಬೈರಾಗಿ’ ಚಿತ್ರದಲ್ಲಿ ವಾತಾಪಿ ಹೆಸರಿನ ಪಾತ್ರವನ್ನು ಪೃಥ್ವಿ ಮಾಡಿದ್ದರು. ಈ ಪಾತ್ರ ಸಖತ್ ಹೈಲೈಟ್ ಆಗಿತ್ತು. ಜುಲೈ 1ರಂದು ಸಿನಿಮಾ ತೆರೆಗೆ ಬಂತು. ‘ಶುಗರ್​ಲೆಸ್’ ಚಿತ್ರದಲ್ಲಿ ಹದಿ ಹರೆಯದಲ್ಲೇ ಸಕ್ಕರೆ ಕಾಯಿಲೆ ಬಂದ ವ್ಯಕ್ತಿಯಾಗಿ ಅವರು ಕಾಣಿಸಿಕೊಂಡಿದ್ದಾರೆ. ಈ ಚಿತ್ರ ಕೂಡ ಗಮನ ಸೆಳೆದಿದೆ. ‘ಲೈಫ್ ಈಸ್ ಬ್ಯೂಟಿಫುಲ್​’ ಸೇರಿ ಹಲವು ಸಿನಿಮಾ ಕೆಲಸಗಳಲ್ಲಿ ಪೃಥ್ವಿ ಬ್ಯುಸಿ ಆಗಿದ್ದಾರೆ.

Published On - 7:04 am, Sat, 16 July 22