AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijayakanth Death: ಕೊವಿಡ್​ಗೆ ನಟ, ರಾಜಕಾರಣಿ ವಿಜಯಕಾಂತ್ ನಿಧನ

ವಿಜಯಕಾಂತ್ ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ.

Vijayakanth Death: ಕೊವಿಡ್​ಗೆ ನಟ, ರಾಜಕಾರಣಿ ವಿಜಯಕಾಂತ್ ನಿಧನ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 28, 2023 | 9:47 AM

ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್ (Vijayakanth Death) ಅವರು 71ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ಆಗಿತ್ತು. ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತಪಟ್ಟಿದ್ದಾರೆ. ‘ವಿಜಯಕಾಂತ್ ಅವರನ್ನು ವೆಂಟಿಲೇಟರ್ ಸಹಾಯದಲ್ಲಿ ಇಡಲಾಗಿತ್ತು. ಆದರೆ, ಎಷ್ಟೇ ಪ್ರಯತ್ನಿಸಿದರೂ ಅವರನ್ನು ಬದುಕಿಸಲು ಸಾಧ್ಯವಾಗಿಲ್ಲ. ಡಿಸೆಂಬರ್ 28ರ ಬೆಳಿಗ್ಗೆ ಅವರು ನಿಧನ ಹೊಂದಿದರು’ ಎಂದು ಆಸ್ಪತ್ರೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯಕಾಂತ್ ಅವರನ್ನು ಮಂಗಳವಾರ (ಡಿಸೆಂಬರ್ 26) ಸಾಮಾನ್ಯ ಪರೀಕ್ಷೆಗೆಂದು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ‘ವಿಜಯ್ ಅವರು ಆರೋಗ್ಯವಾಗಿದ್ದಾರೆ. ಇದೊಂದು ಸಾಮಾನ್ಯ ಪರೀಕ್ಷೆ. ಅವರು ಶೀಘ್ರವೇ ಮನೆಗೆ ಮರಳಲಿದ್ದಾರೆ’ ಎಂದು ಡಿಎಂಡಿಕೆ ಪಕ್ಷದವರು ಹೇಳಿದ್ದರು. ಆ ಬಳಿಕ ಅವರಿಗೆ ಕೊವಿಡ್ ಇರುವ ವಿಚಾರ ದೃಢವಾಯಿತು. ಅವರ ಸಾವಿನ ಸುದ್ದಿ ಪಕ್ಷದವರಿಗೆ ಹಾಗೂ ಅಭಿಮಾನಿಗಳಿಗೆ ಶಾಕ್ ನೀಡಿದೆ. ಈ ಮೊದಲು ನವೆಂಬರ್ 20ರಂದು ವಿಜಯಕಾಂತ್ ಆಸ್ಪತ್ರೆಗೆ ದಾಖಲಾಗಿದ್ದರು.

ವಿಜಯಕಾಂತ್ ಅವರು 1952ರಲ್ಲಿ ಮದುರೈನಲ್ಲಿ ಜನಿಸಿದರು. ಅವರು 80ರ ದಶಕದಲ್ಲಿ ಸಿನಿಮಾ ರಂಗಕ್ಕೆ ಬಂದರು. 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. 2009ರ ಈಚೆಗೆ ಅವರು ಚಿತ್ರರಂಗದಿಂದ ದೂರ ಆಗಿ ರಾಜಕೀಯದಲ್ಲಿ ತೊಡಗಿಕೊಂಡಿದ್ದರು. ಪ್ರೇಮಲತಾ ಅವರನ್ನು ವಿಜಯಕಾಂತ್ 1990ರಲ್ಲಿ ಮದುವೆ ಆದರು. ಇವರಿಗೆ ಇಬ್ಬರು ಮಕ್ಕಳು.

ಇದನ್ನೂ ಓದಿ: ಡಿಎಂಡಿಕೆ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್​ಗೆ ಕೊರೊನಾ ಸೋಂಕು

2005ರಲ್ಲಿ ವಿಜಯಕಾಂತ್ ಅವರು ಡಿಎಂಡಿಕೆಯನ್ನು ಸ್ಥಾಪಿಸಿದರು. ಚೆನ್ನೈನಲ್ಲಿ ಈ ಪಕ್ಷದ ಮುಖ್ಯ ಕಚೇರಿ ಇದೆ. ಆ ಬಳಿಕ ಅವರು ಸಿನಿಮಾ ಕಡೆ ಹೆಚ್ಚು ಒಲವು ತೋರಿಸಲಿಲ್ಲ. ಅವರು ಎರಡು ಬಾರಿ ವಿಧಾನಸಭಾ ಸದಸ್ಯರಾಗಿದ್ದರು. 2011ರಿಂದ 2016ರವರೆಗೆ ತಮಿಳುನಾಡು ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕನಾಗಿದ್ದರು. ಅವರ ಆರೋಗ್ಯ ಇತ್ತೀಚೆಗೆ ಹದಗೆಟ್ಟಿದ್ದರಿಂದ ರಾಜಕೀಯದಲ್ಲೂ ಆ್ಯಕ್ಟೀವ್ ಆಗಿರಲಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 9:30 am, Thu, 28 December 23

ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ