AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿಷಾಗೆ ವಿಜಯ್ ಸೆಲ್ಯೂಟ್? ಡಿಎಂಕೆ ಕಡೆಯಿಂದ ಬಂತು ವಾಗ್ದಾಳಿ

ತಮಿಳುನಾಡು ಸಿಎಂ ವಿಜಯ್ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರಿಗೆ ಮುಂಭಾಗದ ಸಾಲಿನಲ್ಲಿ ಆಸನ ಕಲ್ಪಿಸಿದ್ದನ್ನು ಡಿಎಂಕೆ ಪತ್ರಿಕೆ ಮುರಸೋಳಿ ತೀವ್ರವಾಗಿ ಖಂಡಿಸಿದೆ. ಜೊತೆಗೆ ಚಿತ್ರರಂಗದ ಆಪ್ತರಿಗೆ ಸರ್ಕಾರಿ ಹುದ್ದೆ ನೀಡಿರುವ ಸ್ವಜನಪಕ್ಷಪಾತದ ಆರೋಪವನ್ನು ಡಿಎಂಕೆ ಮಾಡಿದೆ .

ತ್ರಿಷಾಗೆ ವಿಜಯ್ ಸೆಲ್ಯೂಟ್? ಡಿಎಂಕೆ ಕಡೆಯಿಂದ ಬಂತು ವಾಗ್ದಾಳಿ
ತ್ರಿಷಾ-ವಿಜಯ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Aug 19, 2026 | 8:08 AM

Share

ಮುಖ್ಯಾಂಶಗಳು

  • ಸ್ವಾತಂತ್ರ್ಯ ದಿನದಂದು ತ್ರಿಷಾ ಸಲ್ಯೂಟ್ ವಿವಾದ
  • ವಿಜಯ್ ನಡೆಗೆ ಮುರಸೋಳಿ ಕಟು ಟೀಕೆ
  • ಸಿನಿಮಾ ಆಪ್ತರಿಗೆ ಸರ್ಕಾರಿ ಹುದ್ದೆಗಳ ಬಳುವಳಿ

ತಮಿಳುನಾಡು ಮುಖ್ಯಮಂತ್ರಿ ವಿಜಯ್ ವಿರುದ್ಧ ಡಿಎಂಕೆಯ ಅಧಿಕೃತ ಪತ್ರಿಕೆ ‘ಮುರಸೋಳಿ’ ತೀವ್ರ ವಾಗ್ದಾಳಿ ನಡೆಸಿದೆ. ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ (Trisha Krishnan) ಉಪಸ್ಥಿತಿಯನ್ನು ಮುರಸೋಳಿ ಪತ್ರಿಕೆ ಕಟುವಾಗಿ ಟೀಕಿಸಿದೆ. ಈ ಘಟನೆಯು ಸಾರ್ವಜನಿಕರಲ್ಲಿ ಮತ್ತು ವಿಜಯ್ ಅವರ ಬೆಂಬಲಿಗರಲ್ಲಿ ತೀವ್ರ ಅಸಮಾಧಾನ ಮೂಡಿಸಿದೆ ಎಂದು ಮುರಸೋಳಿ ತನ್ನ ಸಂಪಾದಕೀಯ ಲೇಖನದಲ್ಲಿ ಉಲ್ಲೇಖಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ವಿವಾದ

ಚೆನ್ನೈನ ಫೋರ್ಟ್ ಸೆಂಟ್ ಜಾರ್ಜ್‌ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂ ವಿಜಯ್ ಧ್ವಜಾರೋಹಣ ನೆರವೇರಿಸಿದ್ದರು. ಈ ವೇಳೆ ನಟಿ ತ್ರಿಷಾ ಕೃಷ್ಣನ್ ಹಾಗೂ ಅವರ ತಾಯಿ ಉಮಾ ಕೃಷ್ಣನ್ ಮುಂಭಾಗದ ಸಾಲಿನಲ್ಲಿ ಕುಳಿತಿದ್ದರು. ಅವರು ವಿಜಯ್ ಅವರ ಪೋಷಕರ ಪಕ್ಕದಲ್ಲೇ ಆಸೀನರಾಗಿದ್ದರು. ಸಿಎಂ ವಿಜಯ್ ಜೀಪ್‌ನಲ್ಲಿ ಹಾದುಹೋಗುವಾಗ ತ್ರಿಷಾ ಸಲ್ಯೂಟ್ ಮಾಡುವ ವಿಡಿಯೋ ವೈರಲ್ ಆಗಿತ್ತು. ಈ ನಡವಳಿಕೆಯನ್ನು ಡಿಎಂಕೆ ಕಟುವಾಗಿ ವಿಮರ್ಶಿಸಿದೆ.

ಮುರಸೋಳಿ ಪತ್ರಿಕೆಯ ವಾಗ್ದಾಳಿ

ಸಿಎಂ ವಿಜಯ್ ಅವರ ಈ ಕಾರ್ಯವನ್ನು ಮುರಸೋಳಿ ‘ಅಸಹ್ಯಕರ’ ಎಂದು ಬಣ್ಣಿಸಿದೆ. ಮುಖ್ಯಮಂತ್ರಿಯಾಗಿ ಈ ರೀತಿ ಪ್ರದರ್ಶನ ಮಾಡುವುದು ಸರಿಯಲ್ಲ ಎಂದು ಹೇಳಿದೆ. ವಿಜಯ್ ಅವರಿಗೆ ಮತ ಹಾಕಿದ ಜನರೇ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಯಾವುದೇ ಮುಜುಗರವಿಲ್ಲದೆ ಈ ರೀತಿ ನಡೆದುಕೊಂಡಿದ್ದಾರೆ ಎಂದು ಪತ್ರಿಕೆ ಆಕ್ರೋಶ ವ್ಯಕ್ತಪಡಿಸಿದೆ. ಲೇಖನದಲ್ಲಿ ತ್ರಿಷಾ ಹೆಸರು ಉಲ್ಲೇಖಿಸದೆ ‘ನಟಿ’ ಎಂದು ಮಾತ್ರ ಕರೆಯಲಾಗಿದೆ.

ಇದನ್ನೂ ಓದಿ: ಸ್ವಾತಂತ್ರ್ಯ ದಿನದ ಪರೇಡ್ ವೇಳೆ ವಿಜಯ್ ಕುಟುಂಬದ ಜೊತೆ ಕಾಣಿಸಿಕೊಂಡ ತ್ರಿಷಾ

ಸ್ವಜನಪಕ್ಷಪಾತದ ಗಂಭೀರ ಆರೋಪ

ಚಿತ್ರರಂಗದ ತಮ್ಮ ಆಪ್ತರಿಗೆ ಸರ್ಕಾರದಲ್ಲಿ ಪ್ರಮುಖ ಹುದ್ದೆಗಳನ್ನು ನೀಡಲಾಗಿದೆ ಎಂದು ಡಿಎಂಕೆ ಆರೋಪಿಸಿದೆ. ‘ಜನ ನಾಯಕನ್’ ನಿರ್ಮಾಪಕ ವೆಂಕಟ್ ಕೆ ನಾರಾಯಣ್ ಅವರನ್ನು ದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಿಸಲಾಗಿದೆ. ‘ಗೋಟ್’ ಚಿತ್ರದ ನಿರ್ಮಾಪಕಿ ಅರ್ಚನಾ ಕಲ್ಪತಿ ಅವರನ್ನು ಮುಜರಾಯಿ ಇಲಾಖೆಯ ಸಮಿತಿಗೆ ಸೇರಿಸಲಾಗಿದೆ. ‘ಲಿಯೋ’ ನಿರ್ಮಾಪಕ ಜಗದೀಶ್ ಪಳನಿಸ್ವಾಮಿ ಅವರನ್ನು ಸಿಎಂ ಖಾಸಗಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ