‘ನಾವು ಖುಷಿಯಾಗಿದ್ದೇವೆ, ನೀವು ಬೇಸರಗೊಳ್ಳಬೇಡಿ’; ವಿಡಿಯೋ ಮೂಲಕ ಫ್ಯಾನ್ಸ್​ಗೆ ಮನವಿ ಮಾಡಿದ ಆಮಿರ್​-ಕಿರಣ್​

ವಿಚ್ಛೇದನದ ನಂತರ ಆಮಿರ್ ಹಾಗೂ ಕಿರಣ್​ ವಿಶೇಷ ವಿಡಿಯೋ ಒಂದನ್ನು ಮಾಡಿದ್ದಾರೆ. ಅದರಲ್ಲಿ ಅಭಿಮಾನಿಗಳ ಬಳಿ ಬೇಸರ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.

‘ನಾವು ಖುಷಿಯಾಗಿದ್ದೇವೆ, ನೀವು ಬೇಸರಗೊಳ್ಳಬೇಡಿ’; ವಿಡಿಯೋ ಮೂಲಕ ಫ್ಯಾನ್ಸ್​ಗೆ ಮನವಿ ಮಾಡಿದ ಆಮಿರ್​-ಕಿರಣ್​
ಆಮಿರ್​-ಕಿರಣ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 04, 2021 | 4:51 PM

ಆಮಿರ್​ ಖಾನ್​ ಮತ್ತು ಕಿರಣ್​ ರಾವ್​ ವಿಚ್ಛೇದನ ಪಡೆದುಕೊಂಡಿರುವ ಸುದ್ದಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ನಡೆದಿದೆ. ದಂಪತಿಯ ನಿರ್ಧಾರವನ್ನು ಅಭಿಮಾನಿಗಳು ಬೇಸರದಿಂದ ಪ್ರಶ್ನೆ ಮಾಡಿದ್ದಾರೆ. ಈ ಕಾರಣಕ್ಕೆ ಆಮಿರ್ ಹಾಗೂ ಕಿರಣ್​ ವಿಶೇಷ ವಿಡಿಯೋ ಒಂದನ್ನು ಮಾಡಿದ್ದಾರೆ. ಅದರಲ್ಲಿ ಅಭಿಮಾನಿಗಳ ಬಳಿ ಬೇಸರ ಮಾಡಿಕೊಳ್ಳದಂತೆ ಮನವಿ ಮಾಡಿದ್ದಾರೆ.

ಪಾಪರಾಜಿಯ ಖಾತೆಯೊಂದರಲ್ಲಿ ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ಮಾತನಾಡಿರುವ ವಿಡಿಯೋ ಒಂದನ್ನು ಹಂಚಿಕೊಳ್ಳಲಾಗಿದೆ. ‘ವಿಚ್ಛೇದನ ಸುದ್ದಿಯಿಂದ ನೀವು ಶಾಕ್​ಗೆ ಒಳಗಾಗಿದ್ದೀರಿ ಹಾಗೂ ಬೇಸರಗೊಂಡಿದ್ದೀರಿ. ಆದರೆ, ನಮ್ಮ ನಿರ್ಧಾರದಿಂದ ನಮಗೆ ಖುಷಿ ಇದೆ. ನಾವು ಒಂದೇ ಕುಟುಂಬದವರು’ ಎಂದಿದ್ದಾರೆ ಆಮಿರ್​.

‘ನಮ್ಮ ಸಂಬಂಧದಲ್ಲಿ ಬದಲಾವಣೆ ಆಗಿದೆ. ಆದರೆ, ನಾವು ಒಬ್ಬರಿಗೊಬ್ಬರು ಇದ್ದೇವೆ. ಆದ್ದರಿಂದ ದಯವಿಟ್ಟು ಬೇರೆ ರೀತಿಯಲ್ಲಿ ಯೋಚಿಸಬೇಡಿ. ಪಾನಿ ಫೌಂಡೇಷನ್​ ನಮ್ಮ ಮಗು ಇದ್ದಂತೆ. ಅದನ್ನು ನಾವಿಬ್ಬರೂ ಮುಂದುವರಿಸಿಕೊಂಡು ಹೋಗುತ್ತೇವೆ. ನಾವು ಯಾವಾಗಲೂ ಒಂದು ಕುಟುಂಬದಂತೆ. ದಯವಿಟ್ಟು ನಮ್ಮ ಸಂತೋಷಕ್ಕಾಗಿ ಪ್ರಾರ್ಥಿಸಿ. ನಮಗೆ ಇಷ್ಟನ್ನು ಮಾತ್ರ ಹೇಳೋಕೆ ಸಾಧ್ಯ’ ಎಂದಿದ್ದಾರೆ.

ಆಮಿರ್​ ಖಾನ್​ ಹಾಗೂ ಕಿರಣ್​ ರಾವ್​ ವಿಚ್ಛೇದನ ಪಡೆದುಕೊಂಡಿದ್ದರ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿದ್ದರು. ‘ಈ 15 ವರ್ಷಗಳ ಜೀವನವನ್ನು ನಾವು ಖುಷಿ ಮತ್ತು ಸಂತೋಷದಿಂದ ಕಳೆದಿದ್ದೇವೆ. ನಂಬಿಕೆ, ಪ್ರೀತಿ ಮತ್ತು ಗೌರವದಿಂದ ನಮ್ಮ ಸಂಬಂಧ ಬೆಳೆದಿತ್ತು. ಈಗ ನಾವು ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸುತ್ತಿದ್ದೇವೆ. ಇನ್ಮುಂದೆ ನಾವು ಪತಿ-ಪತ್ನಿ ಅಲ್ಲ. ಆದರೆ ಅಜಾದ್​ನ ಪಾಲಕರಾಗಿ, ಆ ಮೂಲಕ ಕುಟುಂಬದವರಾಗಿ ಇರುತ್ತೇವೆ. ಬೇರೆಯಾಗುವ ಬಗ್ಗೆ ಕೆಲವು ಸಮಯದ ಹಿಂದೆಯೇ ಯೋಚಿಸಿದ್ದೆವು. ಮಗನನ್ನು ಜೊತೆಯಾಗಿ ಬೆಳೆಸುತ್ತೇವೆ’ಎಂದು ಹೇಳಿಕೆಯಲ್ಲಿ ತಿಳಿಸಲಾಗಿತ್ತು.

ಇದನ್ನೂ ಓದಿ: ಕಿರಣ್ ಜತೆ ಆಮಿರ್ ಮದುವೆ ಆಗೋ ಬಗ್ಗೆ 15 ವರ್ಷಗಳ ಹಿಂದೆಯೇ ಅಸಮಾಧಾನ ಹೊರ ಹಾಕಿದ್ದರು ಈ ನಟಿ

‘ವಿಚ್ಛೇದನವನ್ನು ಸಂಭ್ರಮಿಸಬೇಕು’; ಆಮಿರ್​-ಕಿರಣ್​ಗೆ ಕಿವಿಮಾತು ಹೇಳಿದ ಖ್ಯಾತ ನಿರ್ದೇಶಕ

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ