AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪೆದ್ದಿ’ ವಿವಾದ, ನಟಿ ಜಾನ್ಹವಿಯ ಬೆಂಬಲಕ್ಕೆ ನಿಂತ ಆಶಿಕಾ ರಂಗನಾಥ್

Janhvi Kapoor movie: ‘ಪೆದ್ದಿ’ ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಪಾತ್ರವನ್ನು ತೆರೆಯ ಮೇಲೆ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಆದರೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವಾಗಿ ನಟಿ ಜಾನ್ಹವಿ ಅವರನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿದ್ದಾರೆ. ‘ಜಾನ್ಹವಿ ಕಪೂರ್ ಅತಿಯಾಗಿ ಅಂಗ ಪ್ರದರ್ಶನ ಮಾಡಿದ್ದಾರೆ’ ಎಂದು ಟೀಕೆ ಮಾಡಿದ್ದಾರೆ. ಆದರೆ ಈ ರೀತಿಯ ಟೀಕೆಗಳನ್ನು ನಟಿ ಆಶಿಕಾ ರಂಗನಾಥ್ ವಿರೋಧಿಸಿದ್ದಾರೆ.

‘ಪೆದ್ದಿ’ ವಿವಾದ, ನಟಿ ಜಾನ್ಹವಿಯ ಬೆಂಬಲಕ್ಕೆ ನಿಂತ ಆಶಿಕಾ ರಂಗನಾಥ್
Ashika Janhvi
ಮಂಜುನಾಥ ಸಿ.
|

Updated on:Jun 06, 2026 | 10:17 PM

Share

ಪೆದ್ದಿ’ (Peddi) ಸಿನಿಮಾನಲ್ಲಿ ನಟಿ ಜಾನ್ಹವಿ ಕಪೂರ್ ಪಾತ್ರವನ್ನು ತೆರೆಯ ಮೇಲೆ ತೋರಿಸಿರುವ ರೀತಿಯ ಬಗ್ಗೆ ತೀವ್ರ ಟೀಕೆಗಳು ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾಗುತ್ತಿವೆ. ಖುದ್ದು ಜಾನ್ಹವಿ ಅವರೇ ತಮ್ಮ ಪಾತ್ರವನ್ನು ಅತಿಯಾಗಿ ಗ್ಲಾಮರೈಸ್ ಮಾಡಿ ಅಶ್ಲೀಲವಾಗಿ ತೋರಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಆದರೆ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವಾಗಿ ನಟಿ ಜಾನ್ಹವಿ ಅವರನ್ನೇ ಟಾರ್ಗೆಟ್ ಮಾಡಿ ಟೀಕೆ ಮಾಡುತ್ತಿದ್ದಾರೆ. ‘ಜಾನ್ಹವಿ ಕಪೂರ್ ಅತಿಯಾಗಿ ಅಂಗ ಪ್ರದರ್ಶನ ಮಾಡಿದ್ದಾರೆ’ ಎಂದು ಟೀಕೆ ಮಾಡಿದ್ದಾರೆ. ಆದರೆ ಈ ರೀತಿಯ ಟೀಕೆಗಳನ್ನು ನಟಿ ಆಶಿಕಾ ರಂಗನಾಥ್ ವಿರೋಧಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಟಿ ಆಶಿಕಾ ರಂಗನಾಥ್, ‘ಒಬ್ಬ ನಟಿಯಾಗಿ ನಾವು ನಿರ್ದೇಶಕರ ದೃಷ್ಟಿಕೋನವನ್ನು ತೆರೆಯ ಮೇಲೆ ತರಲು ಪ್ರಯತ್ನಿಸುತ್ತೇವೆ. ಚಿತ್ರಕಥೆ ಬರೆಯುವುದು, ದೃಶ್ಯಗಳನ್ನು ಹೇಗೆ ಶೂಟ್ ಮಾಡಬೇಕು ಮತ್ತು ಪಾತ್ರವನ್ನು ಹೇಗೆ ಪ್ರಸ್ತುತಪಡಿಸಬೇಕು ಎಂದು ನಿರ್ಧರಿಸುವುದು ಸಂಪೂರ್ಣವಾಗಿ ನಿರ್ದೇಶಕ ಮತ್ತು ಚಿತ್ರತಂಡದ ಜವಾಬ್ದಾರಿಯಾಗಿರುತ್ತದೆ. ಹಾಗಾಗಿ, ಇದರಲ್ಲಿ ನಟಿಯ ತಪ್ಪು ಏನೂ ಇರುವುದಿಲ್ಲ ಮತ್ತು ಅವರನ್ನು ದೂಷಿಸುವುದು ಸರಿಯಲ್ಲ’ ಎಂದು ಹೇಳಿದ್ದಾರೆ. ಆ ಮೂಲಕ ಜಾನ್ಹವಿ ಕಪೂರ್ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಸಿನಿಮಾಗಳಲ್ಲಿ ಮಹಿಳಾ ಪಾತ್ರಗಳ ಚಿತ್ರಣದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡ ಅವರು, ‘ಪ್ರೇಕ್ಷಕರು ಈಗ ಹೆಚ್ಚು ಜಾಗೃತರಾಗಿದ್ದಾರೆ ಮತ್ತು ಕಥೆಯಲ್ಲಿ ಪಾತ್ರಗಳಿಗೆ ಇರುವ ಪ್ರಾಮುಖ್ಯತೆಯನ್ನು ಗಮನಿಸುತ್ತಾರೆ. ಆದರೆ ಸಿನಿಮಾ ಎನ್ನುವುದು ಒಂದು ಕಲಾ ಮಾಧ್ಯಮವಾಗಿದ್ದು, ಅಲ್ಲಿ ನಿರ್ದೇಶಕರು ಕತೆಯ ಬೇಡಿಕೆಗೆ ತಕ್ಕಂತೆ ಕೆಲಸ ಮಾಡುತ್ತಾರೆ. ಒಂದು ವೇಳೆ ದೃಶ್ಯಗಳು ಪ್ರೇಕ್ಷಕರಿಗೆ ಇಷ್ಟವಾಗದಿದ್ದರೆ, ಆ ವಿಮರ್ಶೆಯನ್ನು ಸೃಜನಾತ್ಮಕ ತಂಡಕ್ಕೆ ತಲುಪಿಸಬೇಕೇ ಹೊರತು ಕಲಾವಿದರನ್ನು ದೂರುವುದು ತರವಲ್ಲ’ ಎಂದು ಆಶಿಕಾ ಹೇಳಿದ್ದಾರೆ.

ಇದನ್ನೂ ಓದಿ:ಬಾಕ್ಸ್ ಆಫೀಸ್‌ನಲ್ಲಿ ‘ಪೆದ್ದಿ’ ಹವಾ; ಎರಡನೇ ದಿನವೂ ಭರ್ಜರಿ ಗಳಿಕೆ

‘ಪೆದ್ದಿ’ ಸಿನಿಮಾನಲ್ಲಿ ನಾಯಕಿ ಜಾನ್ಹವಿ ಕಪೂರ್ ಅವರನ್ನು ಕೆಟ್ಟದಾಗಿ ತೋರಿಸಲಾಗಿದೆ. ಕತೆಗೆ ಯಾವ ರೀತಿಯಲ್ಲೂ ಅವಶ್ಯಕ ಇಲ್ಲದೇ ಹೋದರೂ ಸಹ ನಟಿಯ ಅಂಗಾಂಗಗಳ ಮೇಲೆ ಫೋಕಸ್ ಮಾಡಿ ಗ್ಲಾಮರಸ್ ಆಗಿ ತೋರಿಸಲಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ವಿರೋಧ ವ್ಯಕ್ತವಾದ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ನಿರ್ದೇಶಕ ಬುಚ್ಚಿಬಾಬು ಸನಾ, ತಾವು ಜಾನ್ಹವಿ ಅವರ ಗ್ಲಾಮರಸ್ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೆ, ತಮ್ಮಿಂದ ಯಾರ ಮನಸ್ಸಿಗಾದರೂ ನೋವಾಗಿದ್ದರೆ ಕ್ಷಮೆ ಕೇಳುವುದಾಗಿಯೂ ಹೇಳಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:15 pm, Sat, 6 June 26

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ