AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್’ ಶೇಡ್​​ನಲ್ಲಿ ‘ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ

JR NTR Birthday | Dragon Glimpse: ಪ್ರಶಾಂತ್ ನೀಲ್ ನಿರ್ದೇಶನದ, ಜೂನಿಯರ್ ಎನ್​​ಟಿಆರ್ ನಟನೆಯ 'ಡ್ರ್ಯಾಗನ್' ಚಿತ್ರದ 4 ನಿಮಿಷದ ಗ್ಲಿಂಪ್ಸ್ ಬಿಡುಗಡೆಯಾಗಿದೆ. 60ರ ದಶಕದ ಕಥಾಹಂದರ ಹೊಂದಿರುವ ಈ ಸಿನಿಮಾ ಬ್ರಿಟಿಷರ ಕಾಲದ ಘಟನೆಗಳನ್ನು ಒಳಗೊಂಡಿದೆ. ಜೂ. ಎನ್​​ಟಿಆರ್ ವಿಲನ್ ಶೇಡ್‌ನಲ್ಲಿ ಕಾಣಿಸಿಕೊಂಡಿದ್ದು, KGF ಶೈಲಿಯ ಆಕ್ಷನ್ ನಿರೀಕ್ಷಿಸಲಾಗಿದೆ. 2027ರಲ್ಲಿ ಚಿತ್ರ ತೆರೆಗೆ ಬರಲಿದೆ.

‘ಕೆಜಿಎಫ್’ ಶೇಡ್​​ನಲ್ಲಿ ‘ಡ್ರ್ಯಾಗನ್’ ಗ್ಲಿಂಪ್ಸ್: ವಿಲನ್ ಆದ ಎನ್​​ಟಿಆರ್​; ಸಖತ್ ರಾ ಆಗಿದೆ ನೀಲ್ ಸಿನಿಮಾ
ಡ್ರ್ಯಾಗನ್ ಟೀಸರ್
ರಾಜೇಶ್ ದುಗ್ಗುಮನೆ
|

Updated on:May 20, 2026 | 7:27 AM

Share

ಪ್ರಶಾಂತ್ ನೀಲ್ ಸಿನಿಮಾಗಳು ಯಾವಾಗಲೂ ಸಖತ್ ರಾ ಆಗಿರುತ್ತವೆ. ಅಷ್ಟೇ ಅಲ್ಲ, ಅವರ ನಿರ್ದೇಶನದ ಚಿತ್ರಗಳಲ್ಲಿ ಹೀರೋಗಳು ವಿಲನ್ ಶೇಡ್ ಹೊಂದಿರುತ್ತಾರೆ. ಈಗ ಪ್ರಶಾಂತ್ ನೀಲ್ ಹಾಗೂ ಜೂನಿಯರ್ ಎನ್​​ಟಿಆರ್ (NTR) ಕಾಂಬಿನೇಷನ್ ಸಿನಿಮಾದ ಮೊದಲ ಗ್ಲಿಂಪ್ಸ್ ರಿಲೀಸ್ ಆಗಿದೆ. ಈ ಚಿತ್ರಕ್ಕೆ ‘ಡ್ರ್ಯಾಗನ್’ ಎಂದು ಟೈಟಲ್ ಇಡಲಾಗಿದೆ. ಈ ವಿಡಿಯೋ ಗಮನ ಸೆಳೆಯುವ ರೀತಿಯಲ್ಲಿ ಇದೆ. ಜೂನಿಯರ್ ಎನ್​​ಟಿಆರ್ ಬರ್ತ್​​ಡೇ ಪ್ರಯುಕ್ತ ಈ ಟೀಸರ್ ಬಂದಿದೆ.

ಸಾಮಾನ್ಯವಾಗಿ ಗ್ಲಿಂಪ್ಸ್ ಎಂದಾಗ ಒಂದು ನಿಮಿಷದ ವಿಡಿಯೋ ರಿಲೀಸ್ ಮಾಡಿ ಕೈ ತೊಳೆದುಕೊಳ್ಳಲಾಗುತ್ತದೆ. ಆದರೆ,‘ಡ್ರ್ಯಾಗನ್’ ವಿಷಯದಲ್ಲಿ ಪ್ರಶಾಂತ್ ನೀಲ್ ಆ ರೀತಿ ಮಾಡಿಲ್ಲ. ಬರೋಬ್ಬರಿ 4 ನಿಮಿಷದ ಗ್ಲಿಂಪ್ಸ್ ರಿಲೀಸ್ ಮಾಡಿದ್ದಾರೆ. ಚಿತ್ರದ ಕಥೆ ಏನು ಹೇಳುತ್ತದೆ ಎಂಬುದನ್ನು ತೋರಿಸುವ ಕೆಲಸ ಮಾಡಿದ್ದಾರೆ.

ಬ್ರಿಟಿಷರು ಭಾರತಕ್ಕೆ ಏಕೆ ಬಂದರು ಎಂಬುದನ್ನು ಟೀಸರ್ ಆರಂಭದಲ್ಲಿ ವಿವರಿಸಲಾಗುತ್ತದೆ. ಸ್ಟೀಲ್, ಮಸಾಲೆ ಪದಾರ್ಥಗಳನ್ನು ಹುಡುಕಿ ಬ್ರಿಟಿಷರು ಭಾರತಕ್ಕೆ ಬಂದರೂ ಅವರನ್ನು 250 ವರ್ಷ ಇಲ್ಲಿ ಇರುವಂತೆ ಮಾಡಿದ್ದು ಒಂದು ಗಿಡ ಎಂದು ವಿವರಿಸಲಾಗುತ್ತದೆ. ಹೆರಾಯಿನ್ ತಯಾರಿಸಲು ಈ ಗಿಡ ಸಹಾಯ ಮಾಡುತ್ತದೆ ಎಂಬುದನ್ನು ಕೂಡ ಹೇಳಲಾಗುತ್ತದೆ.

ಚಿತ್ರದ ಕಥೆ 1967ರಲ್ಲಿ ಸಾಗುತ್ತದೆ. ರುಕ್ಮಿಣಿ ವಸಂತ್ ಅವರನ್ನು ಕೂಡ ಟ್ರೇಲರ್​​ನಲ್ಲಿ ತೋರಿಸಲಾಗುತ್ತದೆ. ಈ ಚಿತ್ರದಲ್ಲಿ ಜೂನಿಯರ್ ಎನ್​​ಟಿಆರ್ ವಿಲನ್ ರೀತಿ ತೋರಿಸಲಾಗಿದೆ. ‘ಅಫ್ಗನ್ ಟ್ರೇಡಿಂಗ್ ಕಂಪನಿ’ ವಿಲನ್​​ಗಳನ್ನು ತೋರಿಸಲಾಗುತ್ತದೆ. ಕೆಜಿಎಫ್ ರೀತಿಯೇ ಇದರಲ್ಲಿ ಹಲವು ವಿಲನ್​​ಗಳಿದ್ದಾರೆ. ಗ್ಲಿಂಪ್ಸ್ ನೋಡಿದಾಗ ‘ಕೆಜಿಎಫ್’ ಶೇಡ್ ಎದ್ದು ಕಾಣಿಸುತ್ತದೆ. ರವಿ ಬಸ್ರೂರು ಸಂಗೀತ ಸಂಯೋಜನೆ ಇರುವ ಈ ಚಿತ್ರಕ್ಕೆ, ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡಿದೆ.

ಇದನ್ನೂ ಓದಿ: ನಟ ಜೂ ಎನ್​ಟಿಆರ್ ಸಿಎಂ ಆಗಲಿದ್ದಾರೆ: ಶಾಸಕ ಹೇಳಿಕೆ ‘ನಾನು ಮಲಗಿದ್ದಾಗ ಕನಸಿನಲ್ಲಿ ನಾನು ಸಾಯಿಸಿದವರ ಮುಖ ಬರೋದಿಲ್ಲ, ಉಳಿದುಕೊಂಡ ವೈರಿಗಳ ಮುಖ ಬರುತ್ತದೆ. ಅಪ್ಪಿ ತಪ್ಪಿಯೂ ನನ್ನ ಕನಸಲ್ಲಿ ಬರಬೇಡಿ’ ಎಂದು ಜೂನಿಯರ್ ಎನ್​​ಟಿಆರ್ ಎಚ್ಚರಿಕೆ ನೀಡುತ್ತಾರೆ. ಈ ಸಿನಿಮಾದಲ್ಲಿ ಅನಿಲ್ ಕಪೂರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ! ಈ ಸಿನಿಮಾ 2027ರ ಜೂನ್ 6ರಂದು ತೆರೆಗೆ ಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:09 am, Wed, 20 May 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ಪೆಟ್ರೋಲ್ ಬಂಕ್‌ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ ಕಳವು
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ನಕಲಿ ಔಷಧ ದಂಧೆಯ ಮತ್ತೊಬ್ಬ ಆರೋಪಿ ಬಾಲಸುಬ್ರಮಣಿಯನ್ ಚೆನ್ನೈನಲ್ಲಿ ಬಂಧನ
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಟಾಸ್ಕ್​ ವಿಷಯಕ್ಕೆ ತಮ್ಮ ತಂಡದ ವೈರತ್ವ ಕಟ್ಟಿಕೊಂಡ ಗಾನವಿ; ಸುಸ್ತು?
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ
ಬೆಂಗಳೂರಿನಲ್ಲಿ ಭಾರಿ ಮಳೆ, ಕೆಆರ್ ಮಾರುಕಟ್ಟೆಯಲ್ಲಿ ಭಾರಿ ಅವಾಂತರ