ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?

ಮೋಹನ್‌ಲಾಲ್ ಮತ್ತು ಜೀತು ಜೋಸೆಫ್ ಅವರ 'ದೃಶ್ಯಂ 3' ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆಯಾದ 7 ದಿನಗಳಲ್ಲಿ ಭಾರತದಲ್ಲಿ 75 ಕೋಟಿ ರೂ. ಗಳಿಸಿ ದಾಖಲೆ ನಿರ್ಮಿಸಿದೆ. ವಿಶ್ವಾದ್ಯಂತ 183 ಕೋಟಿ ದಾಟಿದ್ದು, 200 ಕೋಟಿ ಕ್ಲಬ್‌ಗೆ ಸೇರಲು ಸಿದ್ಧವಾಗಿದೆ. ಮಿಶ್ರ ವಿಮರ್ಶೆಗಳ ನಡುವೆಯೂ ಪ್ರೇಕ್ಷಕರು ಚಿತ್ರಕ್ಕೆ ಭರ್ಜರಿ ಬೆಂಬಲ ನೀಡಿದ್ದು, ಬ್ಲಾಕ್‌ಬಸ್ಟರ್ ಹಿಟ್ ಆಗಿದೆ.

ಬುಧವಾರವೂ ಜಾರ್ಜ್‌ಕುಟ್ಟಿ ಕಮಾಲ್; 7 ದಿನಕ್ಕೆ ‘ದೃಶ್ಯಂ 3’ ಗಳಿಕೆ ಎಷ್ಟು?
ದೃಶ್ಯಂ 3

Updated on: May 28, 2026 | 7:45 AM

ಮಲಯಾಳಂ ನಟ ಮೋಹನ್‌ಲಾಲ್ ಮತ್ತು ನಿರ್ದೇಶಕ ಜೀತು ಜೋಸೆಫ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ‘ದೃಶ್ಯಂ 3’, ಬಾಕ್ಸ್ ಆಫೀಸ್‌ನಲ್ಲಿ ನಾಗಾಲೋಟ ಮುಂದುವರಿಸಿದೆ. ಮೇ 21ರಂದು ರಿಲೀಸ್ ಆದ ಈ ಫ್ಯಾಮಿಲಿ ಕ್ರೈಮ್ ಥ್ರಿಲ್ಲರ್ ಸಿನಿಮಾ, ಮೊದಲ ವಾರಾಂತ್ಯದಲ್ಲಿ ಭರ್ಜರಿ ಕಮಾಯಿ ಮಾಡಿತ್ತು. ವಾರದ ದಿನಗಳಲ್ಲಿ ಸಹಜವಾಗಿಯೇ ಕಲೆಕ್ಷನ್ ಕೊಂಚ ಕುಸಿದಿತ್ತಾದರೂ, ಬುಧವಾರ (ಮೇ 27) ಚಿತ್ರದ ಗಳಿಕೆಯಲ್ಲಿ ಅನಿರೀಕ್ಷಿತ ಪ್ರಗತಿ ಕಂಡುಬಂದಿದೆ. ಇದರೊಂದಿಗೆ ಬಿಡುಗಡೆಯಾದ ಕೇವಲ 7 ದಿನಗಳಲ್ಲೇ ಸಿನಿಮಾ ಭಾರತದಾದ್ಯಂತ 75 ಕೋಟಿ ರೂಪಾಯಿ ಗಳಿಕೆ ಮಾಡಿ ದಾಖಲೆ ಬರೆದಿದೆ.

ಬಾಕ್ಸ್ ಆಫೀಸ್ ಟ್ರ್ಯಾಕರ್ ‘ಸ್ಯಾಕ್ನಿಲ್ಕ್’ ಅಂಕಿ-ಅಂಶಗಳ ಪ್ರಕಾರ, 7ನೇ ದಿನ ಈ ಚಿತ್ರ ಭಾರತದಲ್ಲಿ ಬರೋಬ್ಬರಿ 6.65 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ವಿಶೇಷವೆಂದರೆ, ಮಂಗಳವಾರ ಈ ಚಿತ್ರ 6.50 ಕೋಟಿ ರೂಪಾಯಿ ಕಲೆಕ್ಷನ್ ಮಾಡಿತ್ತು. ಇಂದು (ಮೇ 28) ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇದ್ದು, ಚಿತ್ರ ಮತ್ತಷ್ಟು ಗಳಿಸಬಹುದು.
ಭಾರತದಲ್ಲಿ ಚಿತ್ರದ 7 ದಿನಗಳ ಒಟ್ಟು ನೆಟ್ ಕಲೆಕ್ಷನ್ 75.30 ಕೋಟಿ ರೂಪಾಯಿಗೆ ತಲುಪಿದ್ದು, ಗ್ರಾಸ್ ಕಲೆಕ್ಷನ್ 87.38 ಕೋಟಿ ರೂಪಾಯಿ ಮುಟ್ಟಿದೆ. ಭಾರತದಷ್ಟೇ ವಿದೇಶದಲ್ಲೂ ಈ ಚಿತ್ರಕ್ಕೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. 7ನೇ ದಿನ ವಿದೇಶಿ ಮಾರುಕಟ್ಟೆಯಿಂದಲೇ ಚಿತ್ರಕ್ಕೆ 5 ಕೋಟಿ ರೂಪಾಯಿ ಹರಿದುಬಂದಿದೆ. ಇದರೊಂದಿಗೆ ವಿದೇಶದ ಒಟ್ಟು ಗ್ರಾಸ್ ಗಳಿಕೆ ಬರೋಬ್ಬರಿ 95.70 ಕೋಟಿ ರೂಪಾಯಿಗೆ ತಲುಪಿದೆ.

ಭಾರತ ಹಾಗೂ ವಿದೇಶಿ ಕಲೆಕ್ಷನ್ ಎರಡನ್ನೂ ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಚಿತ್ರದ ವಿಶ್ವಾದ್ಯಂತ ಒಟ್ಟು ಜಾಗತಿಕ ಗ್ರಾಸ್ ಕಲೆಕ್ಷನ್ ಸದ್ಯ 183.08 ಕೋಟಿ ರೂಪಾಯಿ ತಲುಪಿದೆ. ಇನ್ನು ಕೇವಲ ಎರಡು ದಿನಗಳಲ್ಲಿ ಸಿನಿಮಾ ಸುಲಭವಾಗಿ 200 ಕೋಟಿ ಕ್ಲಬ್ ಸೇರುವುದು ಖಚಿತವಾಗಿದೆ.

ಇದನ್ನೂ ಓದಿ:  ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು?

ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಪ್ರೇಕ್ಷಕರು ಮಾತ್ರ ಚಿತ್ರಕ್ಕೆ ಫುಲ್ ಮಾರ್ಕ್ಸ್ ನೀಡಿದ್ದಾರೆ. ಮೋಹನ್‌ಲಾಲ್ ಜೊತೆಗೆ ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್, ಸಿದ್ದಿಕ್ ಸೇರಿದಂತೆ ದೊಡ್ಡ ತಾರಾಬಳಗವೇ ಚಿತ್ರದಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

 

ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us