AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು?

ಮೋಹನ್‌ಲಾಲ್ ನಟನೆಯ 'ದೃಶ್ಯಂ 3' ಸಿನಿಮಾ ಮಾಲಿವುಡ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸರಣಿಯಾಗಿ ಹೊರಹೊಮ್ಮಿದೆ. ಬಿಡುಗಡೆಯಾದ ಕೇವಲ ಆರು ದಿನಗಳಲ್ಲಿ ಜಾಗತಿಕವಾಗಿ 170 ಕೋಟಿ ರೂಪಾಯಿ ಗಳಿಸಿದೆ. ಭಾರತದ ಜೊತೆಗೆ ವಿದೇಶಿ ಮಾರುಕಟ್ಟೆಯಲ್ಲೂ ಉತ್ತಮ ಕಲೆಕ್ಷನ್ ಮಾಡಿದೆ. ಥ್ರಿಲ್ಲರ್ ಕಥಾಹಂದರ ಹಾಗೂ ಜಾರ್ಜ್‌ಕುಟ್ಟಿ ನಿಗೂಢತೆ ಪ್ರೇಕ್ಷಕರನ್ನು ಸೆಳೆದಿದ್ದು, 200 ಕೋಟಿ ಕ್ಲಬ್ ಸೇರುವತ್ತ ಮುನ್ನುಗ್ಗುತ್ತಿದೆ.

ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಮಾಡಿದ ‘ದೃಶ್ಯಂ 3’; ಒಟ್ಟೂ ಗಳಿಕೆ ಎಷ್ಟು?
ದೃಶ್ಯಂ 3Image Credit source: Drishyam 3
ರಾಜೇಶ್ ದುಗ್ಗುಮನೆ
|

Updated on: May 27, 2026 | 9:09 AM

Share

ಮಲಯಾಳಂ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ಸರಣಿ ಎನಿಸಿಕೊಂಡಿರುವ ‘ದೃಶ್ಯಂ’ ಚಿತ್ರದ ಮೂರನೇ ಭಾಗ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮಾಲಿವುಡ್ ಸೂಪರ್‌ಸ್ಟಾರ್ ಮೋಹನ್‌ಲಾಲ್ ನಟನೆಯ ‘ದೃಶ್ಯಂ 3’ (Drishyam 3) ಬಿಡುಗಡೆಯಾದ ಆರನೇ ದಿನವೂ ತನ್ನ ಪಾರುಪತ್ಯವನ್ನು ಮುಂದುವರಿಸಿದೆ. ವಾರದ ದಿನಗಳಲ್ಲಿ ಸಹಜವಾಗಿ ಕಲೆಕ್ಷನ್‌ನಲ್ಲಿ ಸ್ವಲ್ಪ ಕುಸಿತ ಕಂಡುಬಂದಿದ್ದರೂ, ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಭದ್ರವಾದ ಹಿಡಿತ ಸಾಧಿಸಿದೆ.

ಆರನೇ ದಿನವಾದ ಮಂಗಳವಾರ (ಮೇ 26) ಈ ಚಿತ್ರ ಭಾರತದಾದ್ಯಂತ ಒಟ್ಟು 4,668 ಪ್ರದರ್ಶನಗಳನ್ನು ಕಂಡಿದ್ದು, ಬರೋಬ್ಬರಿ 6.45 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಇದರೊಂದಿಗೆ ಆರು ದಿನಗಳಲ್ಲಿ ಚಿತ್ರದ ಒಟ್ಟು ಭಾರತದ ನೆಟ್ ಕಲೆಕ್ಷನ್ 68.60 ಕೋಟಿ ರೂಪಾಯಿ, ಗ್ರಾಸ್ ಕಲೆಕ್ಷನ್ 79.62 ಕೋಟಿ ರೂಪಾಯಿ ಆಗಿದೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾ ವೀಕ್ಷಕರನ್ನು ಚಿತ್ರಮಂದಿರಗಳತ್ತ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಜಾಗತಿಕ ಮಟ್ಟದಲ್ಲಿ 170 ಕೋಟಿ ಕ್ಲಬ್‌ಗೆ ಲಗ್ಗೆ

ಕೇವಲ ಭಾರತ ಮಾತ್ರವಲ್ಲದೆ ವಿದೇಶಗಳಲ್ಲೂ ಜಾರ್ಜ್‌ಕುಟ್ಟಿ ಮ್ಯಾಜಿಕ್ ಜೋರಾಗಿಯೇ ನಡೆದಿದೆ. 6ನೇ ದಿನ ವಿದೇಶಿ ಮಾರುಕಟ್ಟೆಯಿಂದಲೇ ಚಿತ್ರಕ್ಕೆ 6.00 ಕೋಟಿ ರೂಪಾಯಿ ಹರಿದುಬಂದಿದೆ. ಇದರೊಂದಿಗೆ ಸಿನಿಮಾ ಬಿಡುಗಡೆಯಾದ ಕೇವಲ ಆರೇ ದಿನಕ್ಕೆ ವಿದೇಶಿ ಮಾರುಕಟ್ಟೆಯ ಒಟ್ಟು ಗ್ರಾಸ್ ಗಳಿಕೆ 90.70 ಕೋಟಿ ರೂಪಾಯಿಗೆ ತಲುಪಿದೆ. ಭಾರತಕ್ಕಿಂತ ವಿದೇಶದಲ್ಲಿ ಹೆಚ್ಚು ಕಲೆಕ್ಷನ್ ಆಗಿದೆ ಅನ್ನೋದು ವಿಶೇಷ.

ಇದನ್ನೂ ಓದಿ: ದೃಶ್ಯಂ ಬಜೆಟ್ ಎಷ್ಟು? ಜಾರ್ಜ್‌ಕುಟ್ಟಿ ಪಾತ್ರಕ್ಕೆ ಮೋಹನ್‌ಲಾಲ್ ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಆಗ್ತೀರಾ

ಭಾರತ ಹಾಗೂ ವಿದೇಶಿ ಕಲೆಕ್ಷನ್ ಎಲ್ಲವನ್ನೂ ಒಟ್ಟುಗೂಡಿಸಿದರೆ, ‘ದೃಶ್ಯಂ 3’ ಚಿತ್ರದ ವಿಶ್ವಾದ್ಯಂತ ಒಟ್ಟು ಜಾಗತಿಕ ಗ್ರಾಸ್ ಕಲೆಕ್ಷನ್ ಸದ್ಯ 170.32 ಕೋಟಿ ರೂಪಾಯಿ ತಲುಪಿದೆ. ಸಿನಿಮಾ ವಾರದ ದಿನಗಳಲ್ಲೂ ಇಷ್ಟೊಂದು ಭರ್ಜರಿ ಕಲೆಕ್ಷನ್ ಮಾಡುತ್ತಿರುವುದನ್ನು ನೋಡಿದರೆ, ಅತಿ ಶೀಘ್ರದಲ್ಲೇ 200 ಕೋಟಿ ರೂಪಾಯಿ ಕ್ಲಬ್ ಸೇರುವುದು ಗ್ಯಾರಂಟಿ ಎನ್ನುತ್ತಿದ್ದಾರೆ ಬಾಕ್ಸ್ ಆಫೀಸ್ ಪಂಡಿತರು. ಜಾರ್ಜ್‌ಕುಟ್ಟಿ ಈ ಬಾರಿ ಪೊಲೀಸರಿಂದ ಹೇಗೆ ಪಾರಾಗುತ್ತಾನೆ ಎಂಬ ಕುತೂಹಲವೇ ಪ್ರೇಕ್ಷಕರು ಮುಗಿಬಿದ್ದು ಸಿನಿಮಾ ನೋಡಲು ಪ್ರಮುಖ ಕಾರಣವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದ ಅಕ್ರಮವಾಗಿ SIR: ಪ್ರಲ್ಹಾದ್ ಜೋಶಿ
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ: ಪ್ರಿಯಾಂಕ್​​ 
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
ಮುಂದಿನ ತಿಂಗಳು ಪಿಎಸ್​ಐ, ಕಾನ್ಸ್​ಟೇಬಲ್​ ಹುದ್ದೆ ನೇಮಕಾತಿ ಅಧಿಸೂಚನೆ
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
'ಜನರ ಒಳ್ಳೆಯದಕ್ಕೆ ನಾನು ನಿಷ್ಠುರ ಆದರೂ ಪರವಾಗಿಲ್ಲ'
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ಮೇಲೆ ಮುರಿದು ಬಿದ್ದ ದೈತ್ಯ ಮರ!
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
SIR ವೇಳೆ ಅಕ್ರಮ: ಮುಖ್ಯ ಚುನಾವಣಾ ಅಧಿಕಾರಿಗೆ ಬಿಜೆಪಿ, ಜೆಡಿಎಸ್ ದೂರು
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಪ್ರವಾಸಿಗರೇ ಗಮನಿಸಿ: ಭಾರೀ ಮಳೆಯ ಕಾರಣ ಈ 9 ಜಲಪಾತಗಳಿಗೆ ನಿರ್ಬಂಧ
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಮಳೆ ಅಬ್ಬರ: ಬೆಳಗಾವಿ ಜಿಲ್ಲೆಯಲ್ಲಿ ಮೈದುಂಬಿ ಹರಿಯುತ್ತಿರುವ ನದಿಗಳು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಇಂದು ಈ ರಾಶಿಯವರು ತಮ್ಮ ಕುಟುಂಬದ ಕಡೆ ಹೆಚ್ಚಿನ ಗಮನ ಕೊಡಬೇಕು
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್
ಬಿಜೆಪಿ ಸಭೆ: ಶಾಸಕರ ಮೇಲೆ ವಿಶ್ವಾಸ ಇಟ್ಟಿದ್ದೇ ತಪ್ಪಾಯ್ತು ಎಂದ ಅಶೋಕ್