‘ದೃಶ್ಯಂ 3’ ಹೇಗಿದೆ? ನೆಟ್ಟಿಗರು ಕೊಟ್ಟ ಪಾರದರ್ಶಕ ವಿಮರ್ಶೆ ಇಲ್ಲಿದೆ

ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆಗಳೂ ಕೇಳಿಬರುತ್ತಿವೆ. ಕೆಲವು ಪ್ರೇಕ್ಷಕರು ಚಿತ್ರದ ದ್ವಿತೀಯಾರ್ಧ ಹಾಗೂ ಕ್ಲೈಮ್ಯಾಕ್ಸ್ ಭಾಗವು ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಥೆಯು ಮೊದಲ ಎರಡು ಭಾಗಗಳಿಗಿಂತ ದುರ್ಬಲವಾಗಿದೆ ಮತ್ತು ಪಾತ್ರಗಳ ವಿನ್ಯಾಸದಲ್ಲಿ ಗೊಂದಲವಿದೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

‘ದೃಶ್ಯಂ 3’ ಹೇಗಿದೆ? ನೆಟ್ಟಿಗರು ಕೊಟ್ಟ ಪಾರದರ್ಶಕ ವಿಮರ್ಶೆ ಇಲ್ಲಿದೆ
ಮೋಹನ್​ಲಾಲ್

Updated on: May 21, 2026 | 1:14 PM

ಮಲಯಾಳಂ ಚಿತ್ರರಂಗದ ಅತ್ಯಂತ ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ‘ದೃಶ್ಯಂ’ ಸರಣಿಯ ಮೂರನೇ ಭಾಗ ‘ದೃಶ್ಯಂ 3’ ಇಂದು (ಮೇ 21) ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಜೀತು ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್‌ಲಾಲ್ ಮತ್ತೊಮ್ಮೆ ಜಾರ್ಜ್‌ಕುಟ್ಟಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಅವರೊಂದಿಗೆ ಮೀನಾ, ಅನ್ಸಿಬಾ ಹಸನ್, ಎಸ್ತರ್ ಅನಿಲ್ ಮತ್ತು ಆಶಾ ಶರತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಸಿನಿಮಾ ವೀಕ್ಷಿಸಿದ ಒಂದು ವರ್ಗದ ಪ್ರೇಕ್ಷಕರು ಚಿತ್ರದ ಕಥೆ ಮತ್ತು ನಿರೂಪಣೆಯನ್ನು ಮೆಚ್ಚಿಕೊಂಡಿದ್ದಾರೆ. ಚಿತ್ರದ ಮೊದಲಾರ್ಧವು ನಿಧಾನಗತಿಯಲ್ಲಿ ಸಾಗಿದರೂ, ಇಂಟರ್ವೆಲ್ ಬ್ಲಾಕ್‌ನಲ್ಲಿ ಬರುವ ಟ್ವಿಸ್ಟ್ ದ್ವಿತೀಯಾರ್ಧದ ಬಗ್ಗೆ ಕುತೂಹಲ ಮೂಡಿಸುತ್ತದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ. ಜಾರ್ಜ್‌ಕುಟ್ಟಿ ಪಾತ್ರದಲ್ಲಿ ಮೋಹನ್‌ಲಾಲ್ ಅವರ ಶಾಂತ ಹಾಗೂ ತೀಕ್ಷ್ಣ ಅಭಿನಯ ಪ್ರೇಕ್ಷಕರ ಗಮನ ಸೆಳೆದಿದೆ. ಕಥೆಯಲ್ಲಿನ ಸಸ್ಪೆನ್ಸ್ ಹಾಗೂ ಎಮೋಷನಲ್ ಸನ್ನಿವೇಶಗಳು ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆಗಿವೆ ಎಂಬುದು ಇವರ ವಾದ.

ಆದರೆ, ಚಿತ್ರದ ಬಗ್ಗೆ ನೆಗೆಟಿವ್ ವಿಮರ್ಶೆಗಳೂ ಕೇಳಿಬರುತ್ತಿವೆ. ಕೆಲವು ಪ್ರೇಕ್ಷಕರು ಚಿತ್ರದ ದ್ವಿತೀಯಾರ್ಧ ಹಾಗೂ ಕ್ಲೈಮ್ಯಾಕ್ಸ್ ಭಾಗವು ನಿರೀಕ್ಷಿತ ಮಟ್ಟದಲ್ಲಿ ಮೂಡಿಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಥೆಯು ಮೊದಲ ಎರಡು ಭಾಗಗಳಿಗಿಂತ ದುರ್ಬಲವಾಗಿದೆ ಮತ್ತು ಪಾತ್ರಗಳ ವಿನ್ಯಾಸದಲ್ಲಿ ಗೊಂದಲವಿದೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಂದಿ ‘ದೃಶ್ಯಂ 3’ ಮಲಯಾಳಂಗಿಂತ ಸಾಕಷ್ಟು ಭಿನ್ನ: ಬಿಡುಗಡೆಯಲ್ಲಿ ಗೊಂದಲ

2013 ರಲ್ಲಿ ಆರಂಭವಾದ ಈ ಸರಣಿಯು ಭಾರತದಾದ್ಯಂತ ದೊಡ್ಡ ಯಶಸ್ಸು ಕಂಡಿತ್ತು. ಇದರ ಹಿಂದಿ ಆವೃತ್ತಿಯಲ್ಲಿ ಅಜಯ್ ದೇವಗನ್ ನಟಿಸುತ್ತಿದ್ದು, ‘ದೃಶ್ಯಂ 3’ ಹಿಂದಿ ಆವೃತ್ತಿಯು ಇದೇ ವರ್ಷ ಅಕ್ಟೋಬರ್ 2 ರಂದು ಬಿಡುಗಡೆಯಾಗಲು ಸಜ್ಜಾಗಿದೆ. ಅದರ ಕ್ಲೈಮ್ಯಾಕ್ಸ್ ಸಂಪೂರ್ಣವಾಗಿ ಬೇರೆಯೇ ಇರಲಿದೆಯಂತೆ. ಮುಂದಿನ ದಿನಗಳಲ್ಲಿ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಇದು ಹೇಗೆ ಪ್ರದರ್ಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:13 pm, Thu, 21 May 26

Follow Us