AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು

ಅನಗತ್ಯವಾಗಿ ಮಾಡಿಕೊಂಡ ಒಂದು ಎಡವಟ್ಟಿನಿಂದ ಡ್ರೋನ್ ಪ್ರತಾಪ್ ಜೈಲುವಾಸ ಅನುಭವಿಸುವಂತಾಗಿತ್ತು. ಈಗ ಅವರಿಗೆ ಜಾಮೀನು ಸಿಕ್ಕಿದೆ. ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಫೋಟ ನಡೆಸಿದ್ದ ಪ್ರಕರಣದಲ್ಲಿ ಡ್ರೋನ್ ಪ್ರತಾಪ್​ಗೆ ನ್ಯಾಯಾಲಯ ಈಗ ಜಾಮೀನು ನೀಡಿದೆ. ಮಂಗಳವಾರ (ಡಿಸೆಂಬರ್​ 24) ಅವರು ಜೈಲಿನಿಂದ ಬಿಡುಗಡೆ ಆಗುವ ಸಾಧ್ಯತೆ ಇದೆ.

ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು
Drone Prathap
ಮಹೇಶ್ ಇ, ಭೂಮನಹಳ್ಳಿ
| Edited By: |

Updated on:Dec 23, 2024 | 9:09 PM

Share

ಮಾಜಿ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಅವರು ಇತ್ತೀಚೆಗೆ ಸಂಕಷ್ಟಕ್ಕೆ ಸಿಲುಕಿದ್ದರು. ಸೋಡಿಯಂ ಮೆಟಲ್ ಬಳಸಿ ಕೃಷಿ ಹೊಂಡದಲ್ಲಿ ಸ್ಫೋಟ ಮಾಡಿದ್ದ ಪ್ರಕರಣದಲ್ಲಿ ಅವರನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆದರೆ ಈಗ ಆರೋಪಿ ಡ್ರೋನ್ ಪ್ರತಾಪ್​ಗೆ ಜಾಮೀನು ಮಂಜೂರು ಆಗಿದೆ. ಮಧುಗಿರಿ 4ನೇ ಹೆಚ್ಚುವರಿ ಸೆಷನ್ಸ್​ ನ್ಯಾಯಾಲಯವು ಡ್ರೋನ್ ಪ್ರತಾಪ್​ಗೆ ಜಾಮೀನು ನೀಡಿದೆ. ಇದರಿಂದಾಗಿ ಅವರಿಗೆ ರಿಲೀಫ್ ಸಿಕ್ಕಂತಾಗಿದೆ.

ಹಳ್ಳಿಯಲ್ಲಿ ಮಾಡಿದ ಒಂದು ಪ್ರಯೋಗದಿಂದ ಇಷ್ಟೆಲ್ಲ ರಾದ್ಧಾಂತ ಆಗುತ್ತದೆ ಎಂದು ಡ್ರೋನ್ ಪ್ರತಾಪ್ ಊಹಿಸಿರಲಿಕ್ಕಿಲ್ಲ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಗ್ರಾಮದ ಬಳಿ ಕೃಷಿ ಹೊಂಡದಲ್ಲಿ ಅವರು ಸೋಡಿಯಂ ಬಳಸಿ ಸ್ಫೋಟ ಮಾಡಿದ್ದರು. ಆ ವಿಡಿಯೋವನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ: ಡ್ರೋನ್ ಪ್ರತಾಪ್​ಗೆ ಮತ್ತಷ್ಟು ಸಂಕಷ್ಟ: ಮುಖ್ಯಮಂತ್ರಿಗಳ ಕಚೇರಿಯಿಂದ ಬಂತು ಮಹತ್ವದ ಸೂಚನೆ

ಅರೆಸ್ಟ್​ ಆದ ಬಳಿಕ ಡ್ರೋನ್​ ಪ್ರತಾಪ್​ಗೆ ಕೋರ್ಟ್​​​ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಡಿಸೆಂಬರ್​ 26ರ ತನಕ ಅವರು ನ್ಯಾಯಾಂಗ ಬಂಧನದಲ್ಲಿ ಇರಬೇಕಾಗಿತ್ತು. ಆದರೆ ಈಗ ಜಾಮೀನು ಮಂಜೂರು ಆಗಿರುವುದರಿಂದ ಬಿಡುಗಡೆ ಭಾಗ್ಯ ಸಿಗುತ್ತಿದೆ. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ಬಳಿಕ, ಡಿಸೆಂಬರ್​ 24ರಂದು ಡ್ರೋನ್ ಪ್ರತಾಪ್ ಅವರು ಜೈಲಿನಿಂದ ಹೊರಬರುವ ಸಾಧ್ಯತೆ ಇದೆ.

ಇದನ್ನೂ ಓದಿ: ಈ ಹಿಂದೆಯೂ ಎರಡು ಬಾರಿ ಸ್ಫೋಟಿಸಿದ್ದ ಡ್ರೋನ್​ ಪ್ರತಾಪ್​: ತನಿಖೆಯಿಂದ ಬಯಲಾಯ್ತು ಇನ್ನಷ್ಟು ಅಚ್ಚರಿಯ ಅಂಶ

ಮಿಡಿಗೇಶಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆಯೇ ಈ ರೀತಿ ಸ್ಫೋಟ ನಡೆಸಿದ್ದರಿಂದ ಡ್ರೋನ್ ಪ್ರತಾಪ್ ಜೈಲು ಸೇರುವಂತಾಗಿತ್ತು. ಬಿಎನ್​ಎಸ್​ ಸೆಕ್ಷನ್ 288 ಹಾಗೂ ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಡಿಸೆಂಬರ್​ 12ರಂದು ಅವರನ್ನು ಬಂಧಿಸಲಾಗಿತ್ತು. ನಂತರ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಆ ಬಳಿಕ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:07 pm, Mon, 23 December 24

ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಮೆಕ್ಸಿಕೋದಲ್ಲಿ ಹಳಿ ತಪ್ಪಿದ ರೈಲು, 13 ಮಂದಿ ಸಾವು, ಹಲವರಿಗೆ ಗಾಯ
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ಭೀಕರ ಅವಘಡದಿಂದ ಆಟಗಾರರು ಕೂದಲೆಳೆಯ ಅಂತರದಲ್ಲಿ ಪಾರು..!
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಕತ್ರಿಗುಪ್ಪೆಯಲ್ಲಿ ಗ್ಯಾಂಗ್​ ವಾರ್, ಲಾಂಗು ಮಚ್ಚಿನ ಹೊಡೆತಕ್ಕೆ ಕಾರು ಪೀಸ್!
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು
ಬಿಜೆಪಿ ಶಾಸಕ ಶರಣು ಸಲಗರ ವಿರುದ್ಧ ಎಫ್ಐಆರ್ ದಾಖಲು