‘ಜನ ನಾಯಗನ್’ ಸಿನಿಮಾದಿಂದಾಗಿ 100 ಕೋಟಿ ನಷ್ಟ ಅನುಭವಿಸಿದ ಚಿತ್ರಮಂದಿರಗಳು
Jana Nayagan movie: ‘ಜನ ನಾಯಗನ್’ ಸಿನಿಮಾ ಪ್ರಕರಣ ನ್ಯಾಯಾಲಯದಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡ ಆಗುವ ಸಾಧ್ಯತೆ ದಟ್ಟವಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬ ಅಭಿಪ್ರಾಯಗಳು ಸಹ ಅಲ್ಲಲ್ಲಿ ಹರಿದಾಡುತ್ತಿವೆ. ಸಿನಿಮಾ ಬಿಡುಗಡೆ ತಡವಾಗಿರುವುದರಿಂದ ನಿರ್ಮಾಪಕ ಕೆವಿಎನ್ ಭಾರಿ ನಷ್ಟ ಅನುಭವಿಸಿದ್ದಾರೆ, ಅನುಭವಿಸುತ್ತಿದ್ದಾರೆ. ಅವರ ಜೊತೆಗೆ ಚಿತ್ರಮಂದಿರಗಳಿಗೂ ಸಹ ಸುಮಾರು 100 ಕೋಟಿ ನಷ್ಟ ಉಂಟಾಗಿದೆ.

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿ 10ಕ್ಕೆ ತೆರೆ ಕಾಣಬೇಕಿತ್ತು. ಆದರೆ ಸಿಬಿಎಫ್ಸಿ, ಪ್ರಮಾಣ ಪತ್ರ ನೀಡಲು ವಿಳಂಬ ಮಾಡಿದ್ದು ಅದರ ನಂತರ ನಡೆದ ಬೆಳವಣಿಗೆಗಳ ಕಾರಣದಿಂದಾಗಿ ಸಿನಿಮಾ ಈ ವರೆಗೆ ಬಿಡುಗಡೆ ಆಗಿಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು, ಸಿನಿಮಾದ ಬಿಡುಗಡೆ ಇನ್ನಷ್ಟು ತಡ ಆಗುವ ಸಾಧ್ಯತೆ ದಟ್ಟವಾಗಿದೆ. ತಮಿಳುನಾಡು ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಸಿನಿಮಾ ಬಿಡುಗಡೆ ಆಗುವುದಿಲ್ಲ ಎಂಬ ಅಭಿಪ್ರಾಯಗಳು ಸಹ ಅಲ್ಲಲ್ಲಿ ಹರಿದಾಡುತ್ತಿವೆ. ಸಿನಿಮಾ ಬಿಡುಗಡೆ ತಡವಾಗಿರುವುದರಿಂದ ನಿರ್ಮಾಪಕ ಕೆವಿಎನ್ ಭಾರಿ ನಷ್ಟ ಅನುಭವಿಸಿದ್ದಾರೆ, ಅನುಭವಿಸುತ್ತಿದ್ದಾರೆ. ಅವರ ಜೊತೆಗೆ ಚಿತ್ರಮಂದಿರಗಳಿಗೂ ಸಹ ಸುಮಾರು 100 ಕೋಟಿ ನಷ್ಟ ಉಂಟಾಗಿದೆ.
‘ಜನ ನಾಯಗನ್’ ಸಿನಿಮಾ ಜನವರಿ 10ಕ್ಕೆ ಬಿಡುಗಡೆ ಆಗಬೇಕಿತ್ತು. ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಇದೆನ್ನಲಾಗಿತ್ತು. ಬೆಂಗಳೂರು ಸೇರಿದಂತೆ ಹಲವೆಡೆ ಸಾವಿರಾರು ಮಂದಿ ಸಿನಿಮಾ ವೀಕ್ಷಿಸಲು ಮುಂಗಡವಾಗಿ ಟಿಕೆಟ್ ಬುಕಿಂಗ್ ಮಾಡಿಕೊಂಡಿದ್ದರು. ಆದರೆ ಹಠಾತ್ತನೇ ಸಿನಿಮಾ ಬಿಡುಗಡೆ ಮುಂದೂಡಲ್ಪಟ್ಟಿತು. ಇದರಿಂದ ಚಿತ್ರಮಂದಿರಗಳಿಗೆ ಭಾರಿ ಹೊಡೆತ ಬಿದ್ದಿದೆ.
ಇದನ್ನೂ ಓದಿ:ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರಕ್ಕೆ ಎದುರಾಯ್ತು ಮತ್ತೊಂದು ಸಂಕಷ್ಟ
ತಮಿಳುನಾಡಿನ ಸಿನಿಮಾ ವ್ಯವಹಾರ ವಿಶ್ಲೇಷಕ ರಮೇಶ್ ಬಾಲಾ ಅವರು ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿದ್ದು, ದಳಪತಿ ವಿಜಯ್ ಸಿನಿಮಾ ಬಿಡುಗಡೆ ತಡ ಆಗಿರುವುದರಿಂದ ತಮಿಳುನಾಡು ಚಿತ್ರಮಂದಿರಗಳಿಗೆ ಕನಿಷ್ಟ 100 ಕೋಟಿ ರೂಪಾಯಿ ನಷ್ಟವಾಗಿದೆ. ದಳಪತಿ ವಿಜಯ್ ಸಿನಿಮಾಗಳು ಇತ್ತೀಚೆಗಿನ ವರ್ಷಗಳಲ್ಲಿ ಚಿತ್ರಮಂದಿರಗಳಿಗೆ ಬಂಪರ್ ಲಾಭವನ್ನೇ ತಂದುಕೊಟ್ಟಿವೆ. ಅದರಲ್ಲೂ ‘ಜನ ನಾಯಗನ್’ ಕೊನೆಯ ಸಿನಿಮಾ ಎಂಬ ಕಾರಣಕ್ಕೆ ಭಾರಿ ಜನ ಪ್ರವಾಹವವನ್ನೇ ಚಿತ್ರಮಂದಿರಗಳು ಎದುರು ನೋಡುತ್ತಿದ್ದವು. ಅಡ್ವಾನ್ಸ್ ನೀಡಿ, ಚಿತ್ರಮಂದಿರಗಳನ್ನು ಅಣಿ ಮಾಡಿ ಕಾಯುತ್ತಿದ್ದವು. ಆದರೆ ಸಿನಿಮಾ ಬಿಡುಗಡೆಯೇ ಆಗಿಲ್ಲ’ ಎಂದಿದ್ದಾರೆ ಬಾಲ.
‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್ಸಿ ಪ್ರಮಾಣ ಪತ್ರ ನಿರಾಕರಿಸಿರುವ ಪ್ರಕರಣವನ್ನು ಇದೀಗ ಹೈಕೋರ್ಟ್ನ ಏಕಸದಸ್ಯ ಪೀಠಕ್ಕೆ ವರ್ಗಾಯಿಸಾಗಿದೆ. ಆದರೆ ಅಲ್ಲಿ ಪ್ರಕರಣ ಮತ್ತಷ್ಟು ವಿಳಂಬವಾಗಲಿದೆ. ಇದೇ ಕಾರಣಕ್ಕೆ ಇದೀಗ ಸಿನಿಮಾದ ನಿರ್ಮಾಪಕರು, ಹೈಕೋರ್ಟ್ಗೆ ತಾವು ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲಿದ್ದು, ಸಿನಿಮಾವನ್ನು ಸಿಬಿಎಫ್ಸಿ ಮೊದಲು ನಿರ್ಣಯಿಸಿದಂತೆ ರಿವ್ಯೂ ಕಮಿಟಿಗೆ ಕಳಿಸಲು ನಿರ್ಧರಿಸಿದೆ ಎನ್ನಲಾಗುತ್ತಿದೆ.
ಸಿನಿಮಾವನ್ನು ಮತ್ತೆ ರಿವ್ಯೂ ಕಮಿಟಿಗೆ ಕಳಿಸಿದಲ್ಲಿ, ಸಿಬಿಎಫ್ಸಿ ಹೇಳಿದ ಎಲ್ಲ ಕಟ್ ಮತ್ತು ಮ್ಯೂಟ್ಗಳನ್ನು ಚಿತ್ರತಂಡ ಒಪ್ಪಿಕೊಳ್ಳಬೇಕಿದೆ. ಆದರೆ ಇದರಿಂದ ಆಗುವ ಲಾಭವೆಂದರೆ ರಿವ್ಯೂ ಕಮಿಟಿಗೆ ಹೋದ ಸಿನಿಮಾಗಳಿಗೆ 15 ದಿನಗಳ ಒಳಗಾಗಿ ಕಡ್ಡಾಯವಾಗಿ ಪ್ರಮಾಣ ಪತ್ರ ನೀಡಲೇ ಬೇಕಿರುತ್ತದೆ. ನ್ಯಾಯಾಲಯದಲ್ಲಿ ವಿಚಾರಣೆ, ಆದೇಶಗಳು ವಿಳಂಬ ಆಗುವ ಭೀತಿ ಇರುವ ಕಾರಣಕ್ಕೆ ಇದೀಗ ಸಿನಿಮಾವನ್ನು ರಿವ್ಯೂ ಕಮಿಟಿಗೆ ಕಳಿಸುವ ನಿರ್ಧಾರವನ್ನು ಚಿತ್ರತಂಡ ಮಾಡಿದೆ ಎನ್ನಲಾಗುತ್ತಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 12:35 pm, Thu, 5 February 26




