Rashmika Mandanna: ಹಲವು ದೇಶಗಳಲ್ಲಿ ರಶ್ಮಿಕಾ ಮಂದಣ್ಣ ಸಿನಿಮಾ ಬ್ಯಾನ್​; ‘ಸೀತಾ ರಾಮಂ​’ ಚಿತ್ರತಂಡ ಮಾಡಿದ ತಪ್ಪೇನು?

Rashmika Mandanna | Sita Ramam: ‘ಸೀತಾ ರಾಮಂ’ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರ ಅಭಿಪ್ರಾಯದ ಮೇರೆಗೆ ಈ ಚಿತ್ರವನ್ನು ಬ್ಯಾನ್​ ಮಾಡಲಾಗಿದೆ. ಇದರಿಂದ ಸಿನಿಮಾಗೆ ದೊಡ್ಡ ನಷ್ಟ ಆಗಲಿದೆ.

Rashmika Mandanna: ಹಲವು ದೇಶಗಳಲ್ಲಿ ರಶ್ಮಿಕಾ ಮಂದಣ್ಣ ಸಿನಿಮಾ ಬ್ಯಾನ್​; ‘ಸೀತಾ ರಾಮಂ​’ ಚಿತ್ರತಂಡ ಮಾಡಿದ ತಪ್ಪೇನು?
‘ಸೀತಾ ರಾಮಂ’ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Aug 04, 2022 | 12:54 PM

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಅಭಿಮಾನಿ ಬಳಗ ದಿನದಿಂದ ದಿನಕ್ಕೆ ಹಿರಿದಾಗುತ್ತಿದೆ. ಕರ್ನಾಟಕದಿಂದ ಶುರುವಾದ ಅವರ ಸಿನಿಮಾ ಪಯಣ ಈಗ ಬಹುಭಾಷೆಗೆ ವಿಸ್ತರಿಸಿದೆ. ವಿದೇಶದಲ್ಲೂ ಅವರಿಗೆ ಅಭಿಮಾನಿಗಳು ಇದ್ದಾರೆ. ಸ್ಟಾರ್​ ನಟರ ಸಿನಿಮಾಗಳಿಗೆ ನಾಯಕಿ ಆಗುತ್ತ ಅವರು ಮುನ್ನುಗ್ಗುತ್ತಿದ್ದಾರೆ. ಈಗ ಅವರು ನಟಿಸಿರುವ ‘ಸೀತಾ ರಾಮಂ’ (Sita Ramam) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಆದರೆ ಕೆಲವು ರಾಷ್ಟ್ರಗಳಲ್ಲಿ ಈ ಚಿತ್ರವನ್ನು ಬ್ಯಾನ್​ ಮಾಡಲಾಗಿದೆ. ಇದರಿಂದ ರಶ್ಮಿಕಾ ಮಂದಣ್ಣ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಆಗಸ್ಟ್​ 5ರಂದು ‘ಸೀತಾ ರಾಮಂ’ ರಿಲೀಸ್​ ಆಗುತ್ತಿದ್ದು, ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಜೊತೆ ದುಲ್ಕರ್​ ಸಲ್ಮಾನ್​ (Dulquer Salmaan), ಮೃಣಾಲ್​ ಠಾಕೂಲ್​ ಮುಖ್ಯ ಪಾತ್ರ ಮಾಡಿದ್ದಾರೆ. ಟ್ರೇಲರ್​ ಮೂಲಕ ಗಮನ ಸೆಳೆದ ಈ ಚಿತ್ರಕ್ಕೆ ಈಗ ಬ್ಯಾನ್​ ಬಿಸಿ ತಟ್ಟಿದೆ.

ಈ ಮೊದಲೇ ತಿಳಿದಿರುವಂತೆ ‘ಸೀತಾ ರಾಮಂ’ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ಅವರು ಮುಸ್ಲಿಂ ಯುವತಿಯ ಪಾತ್ರವನ್ನು ನಿಭಾಯಿಸಿದ್ದಾರೆ. ಅವರ ಫಸ್ಟ್​ ಲುಕ್​ ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದರು. ಆದರೆ ಅವರು ಬುರ್ಕಾ ಧರಿಸಿ ಕಾಣಿಸಿಕೊಂಡಿದ್ದು ಅನೇಕರಿಗೆ ಅಚ್ಚರಿ ಮೂಡಿಸಿತ್ತು. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುವಂತಹ ಅಂಶಗಳಿವೆ ಎಂದು ಆರೋಪಿಸಿ ಅರಬ್​ ರಾಷ್ಟ್ರಗಳಲ್ಲಿ ಈ ಚಿತ್ರದ ಬಿಡುಗಡೆಯನ್ನು ನಿಷೇಧಿಸಲಾಗಿದೆ ಎಂದು ವರದಿ ಆಗಿದೆ.

ಬಹ್ರೇನ್​, ಓಮನ್​, ಕುವೈತ್​, ಖತಾರ್​, ಸೌದಿ ಅರೇಬಿಯಾ ಮುಂತಾದ ರಾಷ್ಟ್ರಗಳಲ್ಲಿ ಸಿನಿಮಾವನ್ನು ವೀಕ್ಷಿಸಿದ ಸೆನ್ಸಾರ್​ ಮಂಡಳಿ ಸದಸ್ಯರ ಅಭಿಪ್ರಾಯದ ಮೇರೆಗೆ ಈ ಚಿತ್ರವನ್ನು ಬ್ಯಾನ್​ ಮಾಡಲಾಗಿದೆ. ಚಿತ್ರತಂಡದವರು ಮತ್ತೊಮ್ಮೆ ಸೆನ್ಸಾರ್​ಗೆ ಮನವಿ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಿನಿಮಾದಲ್ಲಿ ಎರಡು ಕಾಲಘಟ್ಟದ ಕಥೆ ಇದೆ ಎಂಬುದು ಟ್ರೇಲರ್​ ಮೂಲಕ ಗೊತ್ತಾಗಿದೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಅರಬ್​ ರಾಷ್ಟ್ರಗಳಲ್ಲಿ ದುಲ್ಕರ್​ ಸಲ್ಮಾನ್​ ಅವರ ಸಿನಿಮಾಗಳಿಗೆ ಒಳ್ಳೆಯ ಮಾರುಕಟ್ಟೆ ಇದೆ. ಒಂದು ವೇಳೆ ಬ್ಯಾನ್​ ಖಚಿತವಾದರೆ ‘ಸೀತಾ ರಾಮಂ’ ಚಿತ್ರಕ್ಕೆ ಹೆಚ್ಚು ನಷ್ಟ ಆಗಲಿದೆ ಎಂಬ ಮಾತು ಕೇಳಿಬಂದಿದೆ. ಈ ಸಿನಿಮಾಗೆ ಹನು ರಾಘವಪುಡಿ ನಿರ್ದೇಶನ ಮಾಡಿದ್ದಾರೆ. ಇದರಲ್ಲಿ ದುಲ್ಕರ್​ ಸಲ್ಮಾನ್​ ಅವರು ಮಿಲಿಟರಿ ಅಧಿಕಾರಿಯ ಪಾತ್ರ ಮಾಡಿದ್ದಾರೆ. ಈ ಚಿತ್ರದಲ್ಲಿ ಲವ್​ ಸ್ಟೋರಿ ಹೈಲೈಟ್​ ಆಗಲಿದೆ. ಇನ್ಮುಂದೆ ಅವರು ಇಂಥ ಸಿನಿಮಾ ಮಾಡುವುದಿಲ್ಲ ಇತ್ತೀಚೆಗೆ ಹೇಳಿಕೆ ನೀಡಿದ್ದರು.

Published On - 12:54 pm, Thu, 4 August 22

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ