AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: 50 ಕೋಟಿ ರೂಪಾಯಿ ಗಳಿಸಿದ ರಶ್ಮಿಕಾ ಮಂದಣ್ಣ ಸಿನಿಮಾ; ‘ಸೀತಾ ರಾಮಂ’ ಸೂಪರ್​ ಹಿಟ್​

Sita Ramam Box Office Collection: ರಶ್ಮಿಕಾ ಮಂದಣ್ಣ ಅವರ ಗೆಲುವಿನ ನಾಗಾಲೋಟ ಮುಂದುವರಿದಿದೆ. ದುಲ್ಕರ್​ ಸಲ್ಮಾನ್ ಜೊತೆ ಅವರು ನಟಿಸಿದ ‘ಸೀತಾ ರಾಮಂ’ ಚಿತ್ರ 50 ಕೋಟಿ ರೂಪಾಯಿ ಗಳಿಸಿ ಬೀಗುತ್ತಿದೆ.

Rashmika Mandanna: 50 ಕೋಟಿ ರೂಪಾಯಿ ಗಳಿಸಿದ ರಶ್ಮಿಕಾ ಮಂದಣ್ಣ ಸಿನಿಮಾ; ‘ಸೀತಾ ರಾಮಂ’ ಸೂಪರ್​ ಹಿಟ್​
ರಶ್ಮಿಕಾ ಮಂದಣ್ಣ
TV9 Web
| Edited By: |

Updated on: Aug 17, 2022 | 7:30 AM

Share

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಎಲ್ಲರ ಪಾಲಿಗೆ ಲಕ್ಕಿ ಹೀರೋಯಿನ್​ ಆಗಿದ್ದಾರೆ. ಅವರು ಮಾಡಿದ ಎಲ್ಲ ಸಿನಿಮಾಗಳೂ ಸೂಪರ್​ ಹಿಟ್​ ಆಗುತ್ತಿವೆ. ಹಾಗಾಗಿ ಅವರ ಜೊತೆ ಕೆಲಸ ಮಾಡಲು ಎಲ್ಲ ನಿರ್ಮಾಪಕರು-ನಿರ್ದೇಶಕರು ನಾಮುಂದು ತಾಮುಂದೆ ಅಂತ ಬರುತ್ತಿದ್ದಾರೆ. ರಶ್ಮಿಕಾ ಮಂದಣ್ಣ ನಟನೆಯ ‘ಸೀತಾ ರಾಮಂ’ (Sita Ramam) ಸಿನಿಮಾ ಆಗಸ್ಟ್​ 5ರಂದು ಬಿಡುಗಡೆ ಆಯಿತು. ಪ್ರೇಕ್ಷಕರಿಂದ ಈ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತವಾಯಿತು. ವಿಮರ್ಶಕರು ಕೂಡ ಸಿನಿಮಾವನ್ನು ಹಾಡಿ ಹೊಗಳಿದರು. ಎಲ್ಲದರ ಪರಿಣಾಮವಾಗಿ ಈ ಚಿತ್ರಕ್ಕೆ ಒಳ್ಳೆಯ ಕಲೆಕ್ಷನ್​ ಆಗಿದೆ. ವಿಶ್ವಾದ್ಯಂತ ರಿಲೀಸ್​ ಆದ ‘ಸೀತಾ ರಾಮಂ’ ಸಿನಿಮಾ ಈವರೆಗೆ 50 ಕೋಟಿ ರೂಪಾಯಿ ಗಳಿಕೆ (Sita Ramam Collection) ಮಾಡಿದೆ ಎಂಬುದು ರಶ್ಮಿಕಾ ಮಂದಣ್ಣ ಪಾಲಿನ ಹೆಮ್ಮೆಯ ವಿಚಾರ. ಈ ಸಿನಿಮಾದ ಭರ್ಜರಿ ಗೆಲುವಿನಿಂದಾಗಿ ಅವರ ಡಿಮ್ಯಾಂಡ್​ ಇನ್ನಷ್ಟು ಹೆಚ್ಚಾಗಿದೆ.

ರಶ್ಮಿಕಾ ಮಂದಣ್ಣ ಅವರು ಪ್ರತಿ ಸಿನಿಮಾದಲ್ಲೂ ಬೇರೆ ಬೇರೆ ಪಾತ್ರಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ‘ಸೀತಾ ರಾಮಂ’ ಸಿನಿಮಾದ ಫಸ್ಟ್​ ಲುಕ್​ ಪೋಸ್ಟರ್​ ಬಿಡುಗಡೆ ಆದಾಗ ಎಲ್ಲರಿಗೂ ಅಚ್ಚರಿ ಆಗಿತ್ತು. ಹಿಜಾಬ್​ ಧರಿಸಿದ ಗೆಟಪ್​ನಲ್ಲಿ ಅವರು ಕಾಣಿಸಿಕೊಂಡಿದ್ದರು. ಆಫ್ರೀನ್​ ಎಂಬ ಮುಸ್ಲಿಂ ಹುಡುಗಿಯ ಪಾತ್ರವನ್ನು ಅವರು ಈ ಸಿನಿಮಾದಲ್ಲಿ ನಿಭಾಯಿಸಿದ್ದಾರೆ. ಅವರ ಜೊತೆ ದುಲ್ಕರ್​ ಸಲ್ಮಾನ್​ ಹಾಗೂ ಮೃಣಾಲ್​ ಠಾಕೂರ್​ ಕೂಡ ಮುಖ್ಯ ಪಾತ್ರಗಳನ್ನು ಮಾಡಿದ್ದಾರೆ.

ಇದನ್ನೂ ಓದಿ
Image
Pushpa 2: ರಶ್ಮಿಕಾ ಮಂದಣ್ಣ ಪಾತ್ರ ಸಾಯುತ್ತೆ ಅನ್ನೋದು ನಿಜವೇ? ‘ಪುಷ್ಪ 2’ ನಿರ್ಮಾಪಕರು​ ನೀಡಿದ ಪ್ರತಿಕ್ರಿಯೆ ಇಲ್ಲಿದೆ..
Image
Rashmika Mandanna: ರಶ್ಮಿಕಾ ಮಂದಣ್ಣ ಗುಟ್ಟಾಗಿ ‘777 ಚಾರ್ಲಿ’ ನೋಡಿದ್ರಾ? ಜನರ ಅನುಮಾನಕ್ಕೆ ಕಾರಣ ಆಗಿದೆ ಈ ವಿಡಿಯೋ
Image
ಅತಿ ಹೆಚ್ಚು ಸಂಬಳ ಪಡೆಯುವ ದಕ್ಷಿಣ ಭಾರತದ ಟಾಪ್​ 10 ನಟಿಯರು ಇವರು; ರಶ್ಮಿಕಾ, ಸಮಂತಾ ಸಂಭಾವನೆ ಎಷ್ಟು?
Image
ರಶ್ಮಿಕಾ ಮಂದಣ್ಣ ಹೊಸ ವಿಡಿಯೋ ವೈರಲ್​; ಎನರ್ಜಿ ಕಂಡು ವಾವ್​ ಎಂದ ಅಭಿಮಾನಿಗಳು

ಬಾಲಿವುಡ್​ ಸಿನಿಮಾಗಳೇ ಬಾಕ್ಸ್​ ಆಫೀಸ್​ನಲ್ಲಿ ನಿರೀಕ್ಷಿತ ಮಟ್ಟದ ಕಲೆಕ್ಷನ್​ ಮಾಡಲು ವಿಫಲ ಆಗುತ್ತಿವೆ. ಹೀಗಿರುವಾಗ ದಕ್ಷಿಣ ಭಾರತದ ಚಿತ್ರಗಳು ಧೂಳೆಬ್ಬಿಸುತ್ತಿವೆ. ಆಗಸ್ಟ್​ 5ರಂದು ‘ಸೀತಾ ರಾಮಂ’ ಜೊತೆಗೆ ಬಿಡುಗಡೆ ಆದ ‘ಬಿಂಬಿಸಾರ’ ಚಿತ್ರ ಕೂಡ ಜನರಿಗೆ ಇಷ್ಟ ಆಗಿದೆ. ತೆಲುಗಿನ ಈ ಎರಡು ಚಿತ್ರಗಳ ನಡುವೆ ಸಖತ್​ ಪೈಪೋಟಿ ಏರ್ಪಟ್ಟಿದೆ. ಆ ಪೈಪೋಟಿ ನಡುವೆಯೂ ವಿಶ್ವಾದ್ಯಂತ 50 ಕೋಟಿ ರೂಪಾಯಿ ಗಳಿಸುವ ಮೂಲಕ ‘ಸೀತಾ ರಾಮಂ’ ಜಯಭೇರಿ ಬಾರಿಸಿದೆ.

ಸದ್ಯ ರಶ್ಮಿಕಾ ಮಂದಣ್ಣ ಅವರ ಗೆಲುವಿನ ನಾಗಾಲೋಟ ಮುಂದುವರಿದಿದೆ. ಅನೇಕ ಆಫರ್​ಗಳು ಅವರನ್ನು ಹುಡುಕಿಕೊಂಡು ಬರುತ್ತಿವೆ. ‘ಪುಷ್ಪ 2’ ಚಿತ್ರದ ಶೂಟಿಂಗ್​ ಇನ್ನಷ್ಟೇ ಆರಂಭ ಆಗಬೇಕಿದೆ. ತಮಿಳಿನಲ್ಲಿ ‘ದಳಪತಿ’ ವಿಜಯ್​ ಜೊತೆ ರಶ್ಮಿಕಾ ನಟಿಸುತ್ತಿದ್ದಾರೆ. ಬಾಲಿವುಡ್​ನಲ್ಲಿ ಅಮಿತಾಭ್​ ಬಚ್ಚನ್​, ಸಿದ್ದಾರ್ಥ್​​ ಮಲ್ಹೋತ್ರಾ, ರಣಬೀರ್​ ಕಪೂರ್​ ಮುಂತಾದ ಸ್ಟಾರ್​ ಕಲಾವಿದರ ಸಿನಿಮಾಗಳಿಗೆ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದಾರೆ. ಕನ್ನಡದ ‘ಕಿರಿಕ್​ ಪಾರ್ಟಿ’ ಚಿತ್ರದಿಂದ ಆರಂಭವಾದ ಅವರ ಸಿನಿಮಾ ಪಯಣ ಯಶಸ್ವಿಯಾಗಿ ಮುಂದುವರಿಯುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ