AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲ್ಕರ್ ಸಲ್ಮಾನ್ ಮನಸ್ಸಲ್ಲಿ ಹೇಳಿಕೊಳ್ಳಲಾಗದ ಸಂಕಟ; ಕಣ್ಣೀರು ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಡಿಲೀಟ್ ಮಾಡಿದ ನಟ  

Dulquer Salmaan: ದುಲ್ಕರ್ ಸಲ್ಮಾನ್ ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ನೋವು ತೋಡಿಕೊಂಡಿದ್ದರು.

ದುಲ್ಕರ್ ಸಲ್ಮಾನ್ ಮನಸ್ಸಲ್ಲಿ ಹೇಳಿಕೊಳ್ಳಲಾಗದ ಸಂಕಟ; ಕಣ್ಣೀರು ಹಾಕುತ್ತಿರುವ ವಿಡಿಯೋ ಪೋಸ್ಟ್ ಮಾಡಿ, ಡಿಲೀಟ್ ಮಾಡಿದ ನಟ  
ದುಲ್ಕರ್ ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on: Jul 04, 2023 | 7:48 AM

Share

ನಟ ದುಲ್ಕರ್ ಸಲ್ಮಾನ್ (Dulquer Salmaan) ಅವರು ಮಲಯಾಳಂ ಸಿನಿಮಾಗಳನ್ನು ಮಾಡಿ ಫೇಮಸ್ ಆದವರು. ಅವರಿಗೆ ಹಿಂದಿ ಚಿತ್ರರಂಗದಲ್ಲೂ ಬೇಡಿಕೆ ಇದೆ. ಕಳೆದ ವರ್ಷ ರಿಲೀಸ್ ಆದ ‘ಸೀತಾ ರಾಮಂ’ ಸಿನಿಮಾ (Sita Ramam) ಮೂಲಕ ಅವರು ಸಾಕಷ್ಟು ಫೇಮಸ್ ಆದರು. ಈಗ ಅವರ ವಿಡಿಯೋ ಒಂದು ವೈರಲ್ ಆಗಿದೆ. ಕಣ್ಣಲ್ಲಿ ನೀರು ತುಂಬಿದೆ, ಮನಸ್ಸಲ್ಲಿ ಹೇಳಿಕೊಳ್ಳಲಾಗದೇ ಇರುವಷ್ಟು ನೋವಿದೆ. ಈ ವಿಡಿಯೋನ ಅವರೇ ಪೋಸ್ಟ್ ಮಾಡಿದ್ದರು. ಆದರೆ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. ಹೀಗೇಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿದೆ. ದುಲ್ಕರ್ ಬಗ್ಗೆ ಅನೇಕರು ಆತಂಕ ಹೊರಹಾಕಿದ್ದಾರೆ.

ದುಲ್ಕರ್ ಸಲ್ಮಾನ್​ಗೆ ಸಾಕಷ್ಟು ಬೇಡಿಕೆ ಇದೆ. ಅವರು ಇತ್ತೀಚೆಗೆ ಇನ್​ಸ್ಟಾಗ್ರಾಮ್​ನಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಅವರು ನೋವು ತೋಡಿಕೊಂಡಿದ್ದರು. ‘ನಾನು ನಿದ್ದೆ ಮಾಡದೆ ಸಾಕಷ್ಟು ಸಮಯವೇ ಕಳೆದಿದೆ. ನಾನು ಇದೇ ಮೊದಲ ಬಾರಿಗೆ ಹೊಸತನ್ನು ಅನುಭವಿಸಿದ್ದೇನೆ. ಇದು ನನ್ನ ಮನಸ್ಸಿನಿಂದ ಹೊರಬರಲು ಸಾಧ್ಯವಾಗದ ಹಂತವನ್ನು ತಲುಪಿದೆ. ನಾನು ಹೆಚ್ಚು ಹೇಳಲು ಬಯಸುತ್ತೇನೆ, ಆದರೆ ನನಗೆ ಅದಕ್ಕೆ ಅನುಮತಿ ಇದೆಯೋ ಅಥವಾ ಇಲ್ಲವೋ ಅನ್ನೋದು ತಿಳಿಯುತ್ತಿಲ್ಲ’ ಎಂದು ಅವರು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

ದುಲ್ಕರ್ ಸಲ್ಮಾನ್ ಅವರು ಈ ವಿಡಿಯೋನ ಪೋಸ್ಟ್ ಮಾಡಿ ಬಳಿಕ ಅದನ್ನು ಡಿಲೀಟ್ ಮಾಡಿದ್ದಾರೆ. ಆದರೆ, ಕೆಲ ಅಭಿಮಾನಿಗಳು ಇದನ್ನು ಸೇವ್ ಮಾಡಿಕೊಂಡಿದ್ದರು. ಅದನ್ನು ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡು ಆತಂಕ ಹೊರಹಾಕುತ್ತಿದ್ದಾರೆ. ನೆಚ್ಚಿನ ನಟನಿಗೆ ಏನಾಯಿತು ಎಂದು ಪ್ರಶ್ನೆ ಮಾಡುತ್ತಿದ್ದಾರೆ.

ಕೆಲವೊಮ್ಮೆ ಸಿನಿಮಾ ಪ್ರಚಾರಕ್ಕೆ ಈ ರೀತಿಯ ತಂತ್ರ ಉಪಯೋಗಿಸಲಾಗುತ್ತದೆ. ಇದು ಸಿನಿಮಾ ಪ್ರಚಾರಕ್ಕೆ ಮಾಡಿದ ತಂತ್ರವೋ ಅಥವಾ ನಿಜಕ್ಕೂ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಬಗ್ಗೆ ಅವರೇ ಮೌನ ಮುರಿಯಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ.

ಇದನ್ನೂ ಓದಿ: ದುಲ್ಕರ್​ ಸಲ್ಮಾನ್​ ಬಗ್ಗೆ ಬಂದಿತ್ತು ಕೆಟ್ಟ ವಿಮರ್ಶೆ; ‘ಸೀತಾ ರಾಮಂ’ ನಟನ ಆ ನೋವಿನ ದಿನಗಳು ಹೇಗಿತ್ತು?

ಕಳೆದ ವರ್ಷ ದುಲ್ಕರ್ ನಟನೆಯ ನಾಲ್ಕು ಸಿನಿಮಾ ರಿಲೀಸ್ ಆಯಿತು. ‘ಸೀತಾ ರಾಮಂ’ ಹಾಗೂ ‘ಚುಪ್​: ರಿವೇಂಜ್ ಆಫ್ ದಿ ಆರ್ಟಿಸ್ಟ್​’ ಸಿನಿಮಾಗಳು ಮೆಚ್ಚುಗೆ ಪಡೆದವು. ಈಗ ಅವರು ‘ಕಿಂಗ್ ಆಫ್ ಕೋಠಾ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ