ವಿಜಯ್ ಸೇತುಪತಿ ಜೊತೆ ದುನಿಯಾ ವಿಜಯ್ ಸಿನಿಮಾ; ಪುರಿ ಜಗನ್ನಾಥ್ ನಿರ್ದೇಶನ
ಹೊಸ ಪ್ಯಾನ್ ಇಂಡಿಯಾ ಸಿನಿಮಾಗೆ ಪುರಿ ಜಗನ್ನಾಥ್ ಮತ್ತು ಚಾರ್ಮಿ ಕೌರ್ ಅವರು ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್ ಜೂನ್‌ನಿಂದ ಆರಂಭ ಆಗಲಿದೆ. ನಟ ವಿಜಯ್ ಸೇತುಪತಿ ಮುಖ್ಯ ಭೂಮಿಕೆ ನಿಭಾಯಿಸಲಿರುವ ಈ ಚಿತ್ರತಂಡದ ಪಾತ್ರವರ್ಗಕ್ಕೆ ದುನಿಯಾ ವಿಜಯ್ ಅವರು ಸೇರ್ಪಡೆ ಆಗಿದ್ದಾರೆ.

ನಟ ದುನಿಯಾ ವಿಜಯ್ (Duniya Vijay) ಅವರು ಕನ್ನಡದಲ್ಲಿ ಮಾತ್ರವಲ್ಲದೇ ಪರಭಾಷೆಯಲ್ಲಿ ಕೂಡ ಬೇಡಿಕೆ ಹೊಂದಿದ್ದಾರೆ. ತೆಲುಗು ಮತ್ತು ತಮಿಳು ಚಿತ್ರರಂಗದಿಂದ ಅವರಿಗೆ ಅವಕಾಶಗಳು ಬರುತ್ತಿವೆ. ಪುರಿ ಜಗನ್ನಾಥ್ (Puri Jagannath) ನಿರ್ದೇಶನ ಮಾಡಲಿರುವ ಹೊಸ ಸಿನಿಮಾದಲ್ಲಿ ದುನಿಯಾ ವಿಜಯ್ ಅವರು ಪ್ರಮುಖ ಪಾತ್ರವೊಂದನ್ನು ಮಾಡಲಿದ್ದಾರೆ. ಈ ಬಗ್ಗೆ ಚಿತ್ರತಂಡದಿಂದಲೇ ಅಧಿಕೃತ ಮಾಹಿತಿ ಹೊರಬಿದ್ದಿದೆ. ಈ ಸಿನಿಮಾದಲ್ಲಿ ವಿಜಯ್ ಸೇತುಪತಿ (Vijay Sethupathi) ಅವರು ಮುಖ್ಯ ಭೂಮಿಕೆ ನಿಭಾಯಿಸಲಿದ್ದಾರೆ.
ಮಾಸ್ ಸಿನಿಮಾಗಳನ್ನು ಮಾಡುವಲ್ಲಿ ನಿರ್ದೇಶಕ ಪುರಿ ಜಗನ್ನಾಥ್ ಸಿಕ್ಕಾಪಟ್ಟೆ ಫೇಮಸ್. ಕನ್ನಡದಲ್ಲಿ ‘ಅಪ್ಪು’ ಸಿನಿಮಾ ಮಾಡಿದ್ದ ಅವರು ಟಾಲಿವುಡ್ನಲ್ಲಿ ಹಲವು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಈಗ ಅವರು ವಿಜಯ್ ಸೇತುಪತಿ ಜೊತೆ ಕೈ ಜೋಡಿಸಿರುವುದರಿಂದ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಮೂಡಿದೆ. ಇದೇ ಸಿನಿಮಾದ ಪಾತ್ರವರ್ಗಕ್ಕೆ ದುನಿಯಾ ವಿಜಯ್ ಕೂಡ ಸೇರ್ಪಡೆ ಆಗಿರುವುದರಿಂದ ನಿರೀಕ್ಷೆ ಇನ್ನಷ್ಟು ಜಾಸ್ತಿ ಆಗಿದೆ.
ಈ ಸಿನಿಮಾಗೆ ಶೀರ್ಷಿಕೆ ಏನು ಎಂಬುದು ಇನ್ನೂ ಬಹಿರಂಗ ಆಗಿಲ್ಲ. ಅದನ್ನು ತಿಳಿಯಲು ಕೂಡ ಅಭಿಮಾನಿಗಳಿಗೆ ಕುತೂಹಲ ಇದೆ. ಈಗಾಗಲೇ ತಾರಾಬಳಗದ ಕಾರಣದಿಂದ ಕುತೂಹಲ ಹೆಚ್ಚಿಸಿದೆ.
From the land of Karnataka to the heart of audiences across the nation❤️🔥
Team #PuriSethupathi Proudly Welcomes the Sandalwood dynamo, Actor #VijayKumar @OfficialViji on-board for an electrifying role that will leave everyone spellbound 💥
A #PuriJagannadh Film Starring… pic.twitter.com/T0LXN9OhUM
— Puri Connects (@PuriConnects) April 28, 2025
ಬಾಲಿವುಡ್ ನಟಿ ಟಬು ಕೂಡ ಇತ್ತೀಚೆಗಷ್ಟೇ ಚಿತ್ರತಂಡಕ್ಕೆ ಎಂಟ್ರಿ ಆಗಿದ್ದಾರೆ. ಘಟಾನುಘಟಿ ಕಲಾವಿದರ ಎಂಟ್ರಿಯಿಂದಾಗಿ ಪಾತ್ರವರ್ಗದ ತೂಕ ಹೆಚ್ಚುತ್ತಿದೆ.
ಇದನ್ನೂ ಓದಿ: ಕೇರೆ ಹಾವು ರಕ್ಷಿಸಿ ಅದರ ಮಹತ್ವ ತಿಳಿಸಿದ ದುನಿಯಾ ವಿಜಯ್
ದುನಿಯಾ ವಿಜಯ್ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಮೂಲಕ ತೆಲುಗು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಈಗ ಅವರು ನಟಿಸುತ್ತಿರುವ ಎರಡನೇ ಟಾಲಿವುಡ್ ಸಿನಿಮಾ ಇದಾಗಿದೆ. ಈ ಚಿತ್ರತಂಡಕ್ಕೆ ಅವರನ್ನು ಪುರಿ ಜಗನ್ನಾಥ್ ಹಾಗೂ ನಿರ್ಮಾಪಕಿ ಚಾರ್ಮಿ ಬರ ಮಾಡಿಕೊಂಡಿದ್ದಾರೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ‘ಪುರಿ ಕನೆಕ್ಟ್’ ಬ್ಯಾನರ್ ಮೂಲಕ ಅದ್ದೂರಿಯಾಗಿ ನಿರ್ಮಾಣ ಆಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.








